ಪಾಕ್ ಬೆಂಬಲಿಸಿದರೆ ಕೈಕಟ್ಟಿ ಕೂರಬೇಕೇ?
Team Udayavani, Feb 17, 2020, 3:03 AM IST
ಚಿತ್ರದುರ್ಗ: ಹುಬ್ಬಳ್ಳಿ ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳು ಪಾಕಿಸ್ತಾನದ ಪರ ಘೋಷಣೆ ಕೂಗಿದ್ದು ಖಂಡನೀಯ. ಭಾರತದ ಪ್ರಜೆಗಳಾಗಿ ಪಾಕಿಸ್ತಾನವನ್ನು ಬೆಂಬಲಿಸಿದರೆ ಕೈಕಟ್ಟಿಕೊಂಡು ಸುಮ್ಮನಿರ ಬೇಕೇ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಬಿ. ಶ್ರೀರಾಮುಲು ಪ್ರಶ್ನಿಸಿದರು.
ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾಶ್ಮೀರ ಭಾರತಕ್ಕೆ ಸೇರಿದ್ದು, ಅದನ್ನು ಫ್ರೀ ಕಾಶ್ಮೀರ ಮಾಡಲು ಬಿಡುವುದಿಲ್ಲ. ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಮುಖಂಡರು ಇಂತಹ ದೇಶ ವಿರೋಧಿ ಶಕ್ತಿಗಳಿಗೆ ಕುಮ್ಮಕ್ಕು ನೀಡುತ್ತಿದ್ದಾರೆ. ಪಾಕಿಸ್ತಾನಕ್ಕೆ ಜೈಕಾರ ಹಾಕುವವರನ್ನು ನೋಡುತ್ತಾ ಸರ್ಕಾರ ಸುಮ್ಮನಿರಲು ಸಾಧ್ಯವಿಲ್ಲ. ದೇಶ ವಿರೋಧಿ ಘೋಷಣೆ ಕೂಗಿದವರ ವಿರುದ್ಧ ಕಠಿಣ ಕ್ರಮ ಜರುಗಿಸುತ್ತೇವೆ ಎಂದರು.
ಬೀದರ್ನ ಶಾಹೀನ್ ಪ್ರಾಥಮಿಕ ಶಾಲೆಯ ಶಿಕ್ಷಕಿ ಹಾಗೂ ಪೋಷಕಿ ಅಮಾಯಕರಲ್ಲ. ಶಾಲಾ ಮಕ್ಕಳು ಪಾಕಿಸ್ತಾನಕ್ಕೆ ಜೈಕಾರ ಹಾಕಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋ ಧಿಸುವ ನೆಪದಲ್ಲಿ ನಡೆಯುತ್ತಿರುವ ಹೋರಾಟದ ಮೂಲಕ ದೇಶದ್ರೋಹ ಎಸಗಲಾಗುತ್ತಿದೆ. ಬಿಜೆಪಿ ಸೇಡಿನ ರಾಜಕಾರಣ ಮಾಡಿದ್ದರೆ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಮನೆಯಲ್ಲಿರುವ ಬದಲು ಬೇರೆಲ್ಲೋ ಇರಬೇಕಾಗಿತ್ತು.
ಆ ಪಕ್ಷಗಳಂತೆ ಸೇಡಿನ ರಾಜಕಾರಣ ಮಾಡುವ ಸಂಸ್ಕೃತಿ ನಮ್ಮದಲ್ಲ. ಜೆಡಿಎಸ್ ಹಾಗೂ ಕಾಂಗ್ರೆಸ್ ಸರ್ಕಾರ ಹೇಗೆ ನಡೆದುಕೊಂಡಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ಸಿಎಂ ಯಡಿಯೂರಪ್ಪ ನೇತೃತ್ವದ ಸರ್ಕಾರ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Bidar: ಬಂದ್ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.