Politics; ಹಾಗೆ ಹೇಳಬಾರದಿತ್ತು….: ಸಿಎಂ ಸಿದ್ದರಾಮಯ್ಯ ಬಳಿ ಕ್ಷಮೆ ಕೇಳಿದ ಬಿಜೆಪಿ ನಾಯಕ
Team Udayavani, Sep 3, 2024, 5:29 PM IST
ಬೆಂಗಳೂರು: ರಾಜಕೀಯದಲ್ಲಿ ಸದಾ ನಾಯಕರುಗಳು ಆರೋಪ – ಪ್ರತ್ಯಾರೋಪಗಳನ್ನು ಮಾಡುತ್ತಲೇ ಇರುತ್ತಾರೆ. ಮಾತಿನ ಪೆಟ್ಟು, ಅಸ್ತ್ರಗಳನ್ನು ಪ್ರಯೋಗಿಸುತ್ತಾ ಎದುರಾಳಿಯನ್ನು ಕಟ್ಟಿ ಹಾಕಲು ನೋಡುತ್ತಿರುತ್ತಾರೆ. ಕೆಲವೊಮ್ಮೆ ಈ ಮಾತಿನ ವರಸೆ ಸಭ್ಯತೆಯ ಗಡಿ ದಾಟಿ ಹೋಗವುದನ್ನು ಈ ರಾಜ್ಯದ ಜನತೆ ಕಂಡಿದೆ. ಆದರೆ ಇದೀಗ ಮಾತಿನ ಭರದಲ್ಲಿ ತಪ್ಪಿ ಆಡಿದ ಮಾತಿಗೆ ಬಿಜೆಪಿ ನಾಯಕರೊಬ್ಬರು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಲ್ಲಿ ಕ್ಷಮೆ ಕೇಳಿದ್ದಾರೆ.
ವಿರೋಧ ಪಕ್ಷದ ಉಪನಾಯಕ, ಹುಬ್ಬಳ್ಳಿ- ಧಾರವಾಡ ಪಶ್ಚಿಮ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ ಬೆಲ್ಲದ್ (Arvind Bellad) ಅವರು ತಪ್ಪಿ ಆಡಿದ ಮಾತಿಗಾಗಿ ಸಿಎಂ ಸಿದ್ದರಾಮಯ್ಯ ಅವರ ಬಳಿ ಕ್ಷಮೆ ಕೇಳಿ ಪತ್ರ ಬರೆದಿದ್ದಾರೆ.
ಜಿಂದಾಲ್ ಕಂಪನಿಗೆ ಭೂಮಿ ನೀಡಿರುವ ರಾಜ್ಯ ಸರ್ಕಾರದ ತೀರ್ಮಾನವನ್ನು ವಿರೋಧಿಸಿ ಮಾತನಾಡುವಾಗ ಅರವಿಂದ ಬೆಲ್ಲದ್ ಅವರು “ಕಡಿಮೆ ದರದಲ್ಲಿ ಭೂಮಿ ಕೊಡುವುದಕ್ಕೆ ʼಸಿದ್ದರಾಮಯ್ಯನವರದ್ದು ಏನು ಅಪ್ಪನ ಮನೆ ಆಸ್ತಿನಾʼ” ಎಂದು ಹೇಳಿದ್ದರು. ಇದೀಗ ಈ ಪದ ಬಳಕೆಯ ಬಗ್ಗೆ ಅರವಿಂದ ಬೆಲ್ಲದ್ ಅವರು ಬೇಸರ ವ್ಯಕ್ತಿ ಪಡಿಸಿ ಪತ್ರದ ಮುಖಾಂತರ ಕ್ಷಮೆಯಾಚಿಸಿದ್ದಾರೆ.
ಇದರ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ ಅವರಿಂದ ಬೆಲ್ಲದ್ ಅವರ ನಡೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ತಮ್ಮ ತಪ್ಪಿನ ಅರಿವಾಗಿ ಪತ್ರದ ಮೂಲಕ ಕ್ಷಮೆ ಕೋರಿದ್ದಾರೆ. ಅವರ ಈ ನಡೆಯನ್ನು ನಾನು ಅತ್ಯಂತ ಮುಕ್ತವಾಗಿ ಸ್ವಾಗತಿಸುತ್ತೇನೆ, ಜೊತೆಗೆ ಅವರ ಬಗ್ಗೆ ನನ್ನ ಮನಸ್ಸಿನಲ್ಲಿ ದ್ವೇಷವಾಗಲೀ, ಬೇಸರವಾಗಲಿ ಯಾವುದು ಇಲ್ಲವೆಂಬುದನ್ನು ಈ ಮೂಲಕ ತಿಳಿಸ ಬಯಸುತ್ತೇನೆ ಎಂದಿದ್ದಾರೆ.
ಎಕ್ಸ್ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ನಾನು ಒಂದೆರಡು ಬಾರಿ ಬಾಯ್ತಪ್ಪಿನಿಂದ ಏಕವಚನ ಬಳಕೆ ಮಾಡಿ ನಂತರ ವಿಷಾದ ವ್ಯಕ್ತಪಡಿಸಿದ್ದೇನೆ, ಆ ತಪ್ಪು ಮರುಕಳಿಸದಂತೆ ತಿದ್ದಿಕೊಳ್ಳುವ ಪ್ರಯತ್ನವನ್ನು ಮಾಡಿದ್ದೇನೆ. ನನ್ನ ಸುದೀರ್ಘ 40 ವರ್ಷಗಳ ರಾಜಕೀಯ ಜೀವನದಲ್ಲಿ ವಿಪಕ್ಷಗಳ ಹಲವು ಕಿರಿಯ, ಹಿರಿಯ ನಾಯಕರಿಂದ ವೈಯಕ್ತಿಕ ನಿಂದನೆ, ಚಾರಿತ್ರ್ಯಹನನ ಮಾಡುವಂತಹ ಪದಬಳಕೆ ಎಲ್ಲವನ್ನೂ ಕೇಳಿದ್ದೇನೆ, ಎದುರಿಸಿದ್ದೇನೆ. ಮೊದಲ ಬಾರಿಗೆ ಅರವಿಂದ ಬೆಲ್ಲದ್ ಅವರು ತಾವು ಬಳಸಿದ ಪದದ ಬಗ್ಗೆ ಸ್ವತಃ ಅವರೇ ಬೇಸರ ವ್ಯಕ್ತಪಡಿಸಿ, ಪತ್ರದ ಮೂಲಕ ಕ್ಷಮೆ ಕೇಳಿ ಹೊಸ ತಲೆಮಾರಿನ ರಾಜಕಾರಣಿಗಳಿಗೆ ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದ್ದಾರೆ.
ರಾಜಕೀಯದಲ್ಲಿ ಟೀಕೆ, ಟಿಪ್ಪಣಿಗಳು ಸಹಜ. ಕೆಲವೊಮ್ಮೆ ಉದ್ವೇಗದಲ್ಲಿ ಮತ್ತೊಬ್ಬರ ಘನತೆಗೆ ಚ್ಯುತಿ ತರುವಂತಹ ಹೇಳಿಕೆ ಅರಿವಿಗೆ ಬಾರದೆಯೇ ಬಂದು ಬಿಡುತ್ತದೆ.
ಜಿಂದಾಲ್ ಕಂಪನಿಗೆ ಭೂಮಿ ನೀಡಿರುವ ನಮ್ಮ ಸರ್ಕಾರದ ತೀರ್ಮಾನವನ್ನು ವಿರೋಧಿಸಿ ಮಾತನಾಡುವಾಗ ವಿರೋಧ ಪಕ್ಷದ ಉಪನಾಯಕರಾದ ಅರವಿಂದ ಬೆಲ್ಲದ್ ಅವರು ವೈಯಕ್ತಿಕವಾಗಿ ನನ್ನನ್ನು ನಿಂದನೆ… pic.twitter.com/4tmH5OpGdz
— Siddaramaiah (@siddaramaiah) September 3, 2024
ಅರವಿಂದ್ ಅವರ ತಂದೆ ಚಂದ್ರಕಾಂತ ಬೆಲ್ಲದ್ ಅವರು ನನ್ನ ದೀರ್ಘಕಾಲದ ಸ್ನೇಹಿತರು. ಅವರೊಬ್ಬ ಸಜ್ಜನ ರಾಜಕಾರಣಿ. ಅವರ ಸಜ್ಜನಿಕೆಯ ಪರಂಪರೆಯನ್ನು ಅರವಿಂದ್ ಮುಂದುವರಿಸಿಕೊಂಡು ಹೋಗಲಿ ಎಂದು ಹಾರೈಸುತ್ತೇನೆ. ರಾಜಕೀಯವು ಬರೀ ಟೀಕೆ, ಆರೋಪ-ಪ್ರತ್ಯಾರೋಪಗಳಿಂದಲೇ ತುಂಬಿ ಹೋಗುತ್ತಿರುವ ಈ ಕಾಲದಲ್ಲಿ ಅರವಿಂದ ಬೆಲ್ಲದ್ ಅವರ ನಡೆ ಮೌಲ್ಯಯುತ ರಾಜಕಾರಣದ ಜೀವಂತಿಕೆಯ ಸಂಕೇತವಾಗಿ ಕಾಣುತ್ತಿದೆ. “ಪಶ್ಚಾತಾಪಕ್ಕಿಂತ ದೊಡ್ಡ ಪ್ರಾಯಶ್ಚಿತ ಬೇರೊಂದಿಲ್ಲ” ಎಂಬ ಮಾತು ಈ ಸಂದರ್ಭಕ್ಕೆ ಹೆಚ್ಚು ಅರ್ಥಪೂರ್ಣವೆನಿಸುತ್ತಿದೆ ಎಂದು ಸಿದ್ದರಾಮಯ್ಯ ಅಭಿಪ್ರಾಯ ಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.