ಪೆಟ್ರೋಲ್, ಡಿಸೇಲ್ ದರ ಹೆಚ್ಚಿಸಲು ಬಿಜೆಪಿ ನಾಯಕರಿಗೆ ನಾಚಿಕೆಯಾಗಲ್ವೇ : ಸಿದ್ದು ಕಿಡಿ
ಬೆಲೆ ಏರಿಕೆ ಹಿನ್ನೆಲೆಯಲ್ಲಿ ರಾಷ್ಟ್ರೀಯ ಕಾಂಗ್ರೆಸ್ ನ ಸೂಚನೆ ಮೇರೆಗೆ ರಾಜ್ಯದಲ್ಲಿ 5 ದಿನಗಳ ಕಾಲ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ : ಸಿದ್ದರಾಮಯ್ಯ
Team Udayavani, Jun 10, 2021, 6:35 PM IST
ಬೆಂಗಳೂರು : ಪೆಟ್ರೋಲ್ ಮತ್ತು ಡಿಸೇಲ್ ದರ ಏರಿಕೆ ವಿರುದ್ಧವೇ ಪ್ರತಿಭಟನೆ ಮಾಡಿ ಅಧಿಕಾರಕ್ಕೆ ಬಂದ ಕೇಂದ್ರದ ಬಿಜೆಪಿ ಸರ್ಕಾರ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಪೆಟ್ರೋಲ್ ಡೀಸೆಲ್ ದರ 100 ರೂ. ಗಡಿ ದಾಟಿದರೂ ತುಟಿಕ್ ಪಿಟಿಕ್ ಎನ್ನುತ್ತಿಲ್ಲ ಎಂಬ ಜನ ಸಾಮಾನ್ಯರ ಆಕ್ರೊಶದ ಬೆನ್ನಿಗೆ ಈಗ ಕಾಂಗ್ರೆಸ್ ಕೂಡ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದು, ಪ್ರತಿಭಟನೆಯ ಎಚ್ಚರಿಕೆಯನ್ನು ಕೂಡ ನೀಡಿದೆ.
ಈ ಬಗ್ಗೆ ಟ್ವೀಟರ್ ಖಾತೆಯ ಮೂಲಕ ಸರಣಿ ಟ್ವೀಟ್ ಮಾಡಿ ಬಿಜೆಪಿ ವಿರುದ್ಧ ಕಿಡಿಕಾರಿದ ರಾಜ್ಯ ವಿಪಕ್ಷ ನಾಯಕ ಸಿದ್ದರಾಮಯ್ಯ, ವಿದ್ಯುತ್, ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ದರವನ್ನು ಮನಸೋಯಿಚ್ಛೆ ಹೆಚ್ಚಿಸುವ ಮೂಲಕ ಕೋವಿಡ್ ಸಂಕಷ್ಟದಲ್ಲಿರುವ ಜನರ ತಲೆಯ ಮೇಲೆ ಬಿಜೆಪಿ ಸರ್ಕಾರ ಚಪ್ಪಡಿ ಎಳೆದಿದೆ ಎಂದಿದ್ದಾರೆ.
ಇದನ್ನೂ ಓದಿ : ಕೋವಿಡ್ ಸ್ಥಿತಿಯಲ್ಲಿ ಜಾತಿ, ಧರ್ಮದ ಆಧಾರದ ಮೇಲೆ ವಿಂಗಡಣೆ ಮಾಡುವುದು ಸರಿಯಲ್ಲ :ಸಿದ್ದರಾಮಯ್ಯ
ಮಾಜಿ ಪ್ರಧಾನಿ ಮನಮೋಹನ್ ಸೀಂಗ್ ಅವರನ್ನು ಉಲ್ಲೇಖಿಸಿದ ಸಿದ್ದರಾಮಯ್ಯ, ಸಿಂಗ್ ಕಾಲದಲ್ಲಿ ಪೆಟ್ರೋಲ್ ಬೆಲೆ ಕೇವಲ 1 ರೂ ಏರಿಕೆ ಮಾಡಿದಾಗ ಗುಜರಾತ್ ನ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ತೀವ್ರ ವಿರೋಧ ಮಾಡಿದ್ದರು. ಈಗ ತಾವೇ ಬೆಲೆಯೇರಿಕೆ ಮಾಡಲು ಬಿಜೆಪಿ ನಾಯಕರಿಗೆ ನಾಚಿಕೆಯಾಗಲ್ವೇ ಎಂದು ಪ್ರಶ್ನೆ ಕೇಳುವುದರ ಮೂಲಕ ಕಿಡಿ ಕಾರಿದ್ದಾರೆ.
ಮನಮೋಹನಸಿಂಗ್ ಅವರು ಪೆಟ್ರೋಲ್ ಬೆಲೆ ಕೇವಲ ರೂ.1 ಏರಿಕೆ ಮಾಡಿದಾಗ ಗುಜರಾತ್ ಮುಖ್ಯಮಂತ್ರಿಯಾಗಿದ್ದ @narendramodi ಅವರು ತೀವ್ರ ವಿರೋಧ ಮಾಡಿದ್ದರು. ಬಿಜೆಪಿ ದೇಶವ್ಯಾಪಿ ಪ್ರತಿಭಟನೆ ನಡೆಸಿತ್ತು. ಈಗ ನಿತ್ಯವೂ ದರ ಏರಿಕೆಯಾಗುತ್ತಲೇ ಇದೆ. ತಾವೇ ವಿರೋಧಿಸಿ, ಈಗ ತಾವೇ ಬೆಲೆಯೇರಿಕೆ ಮಾಡಲು ಬಿಜೆಪಿ ನಾಯಕರಿಗೆ ನಾಚಿಕೆಯಾಗಲ್ವೇ? 3/17
— Siddaramaiah (@siddaramaiah) June 10, 2021
ಇನ್ನು, ಸಿಂಗ್ ಪ್ರಧಾನಿಯಾಗಿದ್ದಾಗ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾತೈಲ 125 ಡಾಲರ್ ಇತ್ತು. ಆಗ ಪೆಟ್ರೋಲ್, ಡಿಸೇಲ್ ದರವನ್ನು ಈ ಪ್ರಮಾಣದಲ್ಲಿ ಏರಿಕೆ ಮಾಡಿರಲಿಲ್ಲ. ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಒಂದು ಹಂತದಲ್ಲಿ ಕಚ್ಛಾತೈಲ ದರ 46-47 ಡಾಲರ್ ಕುಸಿದಿತ್ತು. ಆಗ ಗ್ರಾಹಕರಿಗೆ ಕಡಿಮೆ ಬೆಲೆಗೆ ಕೊಟ್ಟಿದ್ದರೆ ? ಎಂದು ಪ್ರಶ್ನೆ ಮಾಡಿದ್ದಾರೆ.
ಮನಮೋಹನಸಿಂಗ್ ಅವರು ಪ್ರಧಾನಿಯಾಗಿದ್ದಾಗ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾತೈಲ 125 ಡಾಲರ್ ಇತ್ತು. ಆಗ ಪೆಟ್ರೋಲ್, ಡೀಸೆಲ್ ದರವನ್ನು ಈ ಪ್ರಮಾಣದಲ್ಲಿ ಏರಿಕೆ ಮಾಡಿರಲಿಲ್ಲ. @narendramodi ಪ್ರಧಾನಿಯಾದ ಬಳಿಕ ಒಂದು ಹಂತದಲ್ಲಿ ಕಚ್ಛಾತೈಲ ದರ 46-47 ಡಾಲರ್ಗೆ ಕುಸಿದಿತ್ತು. ಆಗ ಗ್ರಾಹಕರಿಗೆ ಕಡಿಮೆ ಬೆಲೆಗೆ ಕೊಟ್ಟಿದ್ದರೆ? 4/17
— Siddaramaiah (@siddaramaiah) June 10, 2021
ಪ್ರತಿಭಟನೆಗೆ ಸಂಬಂಧಿಸಿದಂತೆ ಟ್ವಿಟ್ ಮಾಡಿದ ಅವರು, ಬೆಲೆ ಏರಿಕೆ ಹಿನ್ನೆಲೆಯಲ್ಲಿ ರಾಷ್ಟ್ರೀಯ ಕಾಂಗ್ರೆಸ್ ನ ಸೂಚನೆ ಮೇರೆಗೆ ರಾಜ್ಯದಲ್ಲಿ 5 ದಿನಗಳ ಕಾಲ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕೋವಿಡ್ ನಿಂದ ಸುಮ್ಮನಿರ್ತಾರೆ, ಲಾಕ್ ಡೌನ್ ಇರುವ ಕಾರಣ ಹೊರಗೆ ಬಂದು ಪ್ರತಿಭಟನೆ ಮಾಡುವುದಿಲ್ಲ ಎಂದು ಜನರ ತಲೆಯ ಮೇಲೆ ಚಪ್ಪಡಿ ಎಳೆಯುವ ಕೆಲಸವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಾಡುತ್ತಿವೆ ಎಂದಿದ್ದಾರೆ.
ಬೆಲೆ ಏರಿಕೆ ಹಿನ್ನೆಲೆಯಲ್ಲಿ @INCIndia ಸೂಚನೆ ಮೇರೆಗೆ ರಾಜ್ಯದಲ್ಲಿ 5 ದಿನಗಳ ಕಾಲ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕೊರೊನಾದಿಂದ ಸುಮ್ಮನಿರ್ತಾರೆ, ಲಾಕ್ಡೌನ್ ಇರುವ ಕಾರಣ ಹೊರಗೆ ಬಂದು ಪ್ರತಿಭಟನೆ ಮಾಡುವುದಿಲ್ಲ ಎಂದು ಜನರ ತಲೆಯ ಮೇಲೆ ಚಪ್ಪಡಿ ಎಳೆಯುವ ಕೆಲಸವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ಮಾಡುತ್ತಿವೆ. 7/17#ಮಾಧ್ಯಮ_ಹೇಳಿಕೆ
— Siddaramaiah (@siddaramaiah) June 10, 2021
ಇದನ್ನೂ ಓದಿ : ಗೋವಾ : ಸಿಎಂ ಹಾಗೂ ಎಚ್ ಎಮ್ ನಡುವೆ ಯಾವ ಭಿನ್ನಾಭಿಪ್ರಾಯಗಳಿಲ್ಲ : ರವಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.