ಶ್ರೀಗಳ ಹೇಳಿಕೆ ತಿರುಚಿದ್ರೆ ನನ್ನ ಕುಟುಂಬ ಸರ್ವನಾಶವಾಗ್ಲಿ !
Team Udayavani, Sep 12, 2017, 9:47 AM IST
ವಿಜಯಪುರ:ಪ್ರತ್ಯೇಕ ಲಿಂಗಾಯತ ಧರ್ಮದ ಕುರಿತಾಗಿ ಸಿದ್ದಗಂಗಾ ಶ್ರೀಗಳ ಹೇಳಿಕೆ ನಾನು ತಿರುಚಿಲ್ಲ. ಬೇಕಾದರೆ ನಾನು ಕ್ಷೇತ್ರದಲ್ಲಿ ಪ್ರಮಾಣ ಮಾಡಲು ಸಿದ್ದ’ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಮಂಗಳವಾರ ಸವಾಲು ಹಾಕಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಎಂ.ಬಿ.ಪಾಟೀಲ್ ‘ನಾನು ಸಿದ್ದಗಂಗಾ ಶ್ರೀಗಳ ಹೇಳಿಕೆ ತಿರುಚಿಲ್ಲ. ಭಾನುವಾರ ಮಠಕ್ಕೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಉದ್ಘಾಟನೆ ಸಮಾರಂಭದಲ್ಲಿ ಭಾಗಿಯಾಗಲು ತೆರಳಿದ್ದೆ. ಈ ವೇಳೆ ಕಿರಿಯ ಶ್ರೀಗಳು ಪ್ರಸಾದ ಮಾಡಿಕೊಂಡು ಹೋಗಲು ಆಹ್ವಾನ ನೀಡಿದ್ದರು. ನಾನು ಕಾರ್ಯ ಒತ್ತಡದಿಂದ ಬೆಂಗಳೂರಿಗೆ ಹೊರಟಿದ್ದೆ. ಸುಮಾರು 1 ಕಿ.ಮೀ ಪ್ರಯಾಣಿಸಿದ ವೇಳೆ ಮಠದ ಅಧಿಕಾರಿಯೊಬ್ಬರು ಕರೆ ಮಾಡಿ ಹಿರಿಯ ಶ್ರೀಗಳು ನಿಮಗೆ ಆಶೀರ್ವಾದ ಮಾಡಲಿದ್ದಾರೆ ಬನ್ನಿ ಎಂದು ಕರೆದಿದ್ದು, ನಾನು ಕೂಡಲೇ ಮಠಕ್ಕೆ ವಾಪಾಸಾಗಿ ಶ್ರೀಗಳ ಆಶೀರ್ವಾದ ಪಡೆದಿದ್ದೆ’.
‘ಈ ವೇಳೆ ಶ್ರೀಗಳ ಬಳಿ ನಮ್ಮ ಹೋರಾಟದ ಬಗ್ಗೆ ಸ್ಪಷ್ಟ ವಿವರಣೆ ನೀಡಿದ್ದೆ. ಆಗ ಶ್ರೀಗಳು ಸ್ಪಷ್ಟವಾಗಿ ಹೇಳಿದ್ದರು, ”ಪ್ರತ್ಯೇಕ ಧರ್ಮ ಬೇಕು” ಎಂದು. ನಾನು ಸ್ಪಷ್ಟವಾಗಿ ಕೇಳಿಸಿಕೊಂಡು, ಹೋರಾಟ ಮುಂದುವರಿಸುವುದಾಗಿ ಹೇಳಿ ಆಶೀರ್ವಾದ ಪಡೆದು ಬಂದಿದ್ದೆ’ ಎಂದಿದ್ದಾರೆ.
‘ನನ್ನ ತಾಯಿ, ಪತ್ನಿ ಮತ್ತು ಮಕ್ಕಳೊಂದಿಗೆ ಸಿದ್ದಗಂಗಾ ಕ್ಷೇತ್ರಕ್ಕೆ ಬಂದು ಪ್ರಮಾಣ ಮಾಡುತ್ತೇನೆ. ಮಾಧ್ಯಮಗಳ ಎದುರು ಮಠದ ಕಿರಿಯ ಶ್ರೀಗಳು, ಮಠದ ಅಧಿಕಾರಿ ಶಿವಕುಮಾರ್ ಅವರ ಎದುರೇ ಪ್ರಮಾಣ ಮಾಡುತ್ತೇನೆ.ಎಲ್ಲಿಯಾದರೂ ನಾನು ಡಾ. ಶಿವಕುಮಾರ ಸ್ವಾಮೀಜಿಗಳ ಹೇಳಿಕೆ ಒಂದು ಸಣ್ಣ ಸಾಸಿವೆ ಕಾಳಿನಷ್ಟು ತಿರುಚಿದ್ರೆ, ಶ್ರೀಗಳ ಶಾಪ ನಮಗೆ ತಟ್ಟಲಿ. ನಾನು ಸುಳ್ಳು ಹೇಳಿದ್ದರೆ ನನ್ನ ಕುಟುಂಬ ಸರ್ವನಾಶವಾಗಲಿ’ ಎಂದರು.
‘ಯಡಿಯೂರಪ್ಪ, ಸೋಮಣ್ಣನವರಂತಹ ಬಿಜೆಪಿ ನಾಯಕರು ಪ್ರತ್ಯೇಕ ಧರ್ಮ ಹೋರಾಟದ ವಿಚಾರದಲ್ಲಿ ಅನಗತ್ಯ ಗೊಂದಲ ಹುಟ್ಟು ಹಾಕಿ ಹೋರಾಟದ ದಾರಿ ತಪ್ಪಿಸುವ ಯತ್ನ ಮಾಡುತ್ತಿದ್ದಾರೆ’ ಎಂದು ಕಿಕಿಕಾರಿದರು.
ಲಿಂಗಾಯತ ಧರ್ಮ ವಿಚಾರ ಮಹತ್ವದ ಘಟ್ಟ ತಲುಪಿದ್ದು, ಸಿದ್ಧಗಂಗಾ ಶ್ರೀಗಳೇ ಪ್ರತ್ಯೇಕ ಧರ್ಮಕ್ಕೆ ಬೆಂಬಲ ನೀಡಿದ್ದಾರೆ ಎಂದು ಎಂ.ಬಿ. ಪಾಟೀಲ್ ಹೇಳಿದ್ದರು.
ಸ್ವಾಮೀಜಿ ಜೈಲಿಗೆ ಹೋಗುವುದು ಬೇಡ!
‘ಸ್ವಾಮೀಜಿಯೊಬ್ಬರು ಬಸವರಾಜ್ ಹೊರಟ್ಟಿ ಬಳಿ ನನ್ನನ್ನು ಸರ್ವನಾಶ ಮಾಡುವುದಾಗಿ ಹೇಳಿದ ಸಿಡಿ ಇದೆ. ಅದನ್ನು ಬಿಡುಗಡೆ ಮಾಡಿದರೆ ಅವರು ಜೈಲಿಗೆ ಹೋಗುತ್ತಾರೆ. ಆದರೆ ನಾನು ಸಿಡಿ ಬಿಡುಗಡೆ ಮಾಡುವುದಿಲ್ಲ. ಎಂ.ಬಿ.ಪಾಟೀಲ್ ಸ್ವಾಮೀಜಿಯೊಬ್ಬರನ್ನು ಜೈಲಿಗೆ ಕಳುಹಿಸಿದರು ಎಂದು ಜನ ಆಡಿಕೊಳ್ಳುವುದು ಬೇಡ’ ಎಂದು ಅಡ್ಡಗೋಡೆಯ ಮೇಲೆ ದೀಪ ಇಟ್ಟರು.
‘ನನ್ನನ್ನು ಸರ್ವನಾಶ ಮಾಡುವ ಅಧಿಕಾರ ಸ್ವಾಮೀಜಿಗೆ ಇಲ್ಲ.ಆದರೆ ಬಸವನಾಡಿನ ಜನತೆಗೆ ಇದೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Army Vehicle Tragedy:ಕೊಡಗಿನ ಗಾಯಾಳು ಯೋಧ ಚಿಕಿತ್ಸೆ ಫಲಕಾರಿಯಾಗದೆ ಸಾ*ವು
ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು
Davanagere: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿ: ಜಗದೀಶ್ ಶೆಟ್ಟರ್
ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ
Ambedkar ಅವರ ಸಂವಿಧಾನ ಖರ್ಗೆ ಕುಟುಂಬಕ್ಕೆ ಅನ್ವಯಿಸುವುದಿಲ್ಲವೇ?: ಬಿಜೆಪಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
World Test Championship: ದಕ್ಷಿಣ ಆಫ್ರಿಕಾ ಫೈನಲ್ ಪ್ರವೇಶ
Pro Kabaddi-2024: ಹರಿಯಾಣಕ್ಕೆ ಮೊದಲ ಕಿರೀಟ
Army Vehicle Tragedy:ಕೊಡಗಿನ ಗಾಯಾಳು ಯೋಧ ಚಿಕಿತ್ಸೆ ಫಲಕಾರಿಯಾಗದೆ ಸಾ*ವು
Ullala: ಸಮುದ್ರ ವಿಹಾರಕ್ಕೆ ಆಗಮಿಸಿದ ವ್ಯಕ್ತಿ ಅಲೆಗಳಿಗೆ ಸಿಲುಕಿ ಮೃತ್ಯು!
ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.