ಕೋಲಾರದಿಂದ ಸಿದ್ದು ಸ್ಪರ್ಧೆ ಸದ್ಯ ಪಕ್ಕಾ
Team Udayavani, Oct 28, 2022, 8:00 AM IST
ಬೆಂಗಳೂರು: ಮುಂದಿನ ವಿಧಾನ ಸಭೆ ಚುನಾವಣೆಯಲ್ಲಿ ಸುರಕ್ಷಿತ ಕ್ಷೇತ್ರದ ಹುಡುಕಾಟದಲ್ಲಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಕೋಲಾರ ಕ್ಷೇತ್ರದಲ್ಲಿ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ.
ಬಾದಾಮಿ, ವರುಣಾ, ಚಾಮುಂಡೇಶ್ವರಿ, ಚಾಮರಾಜಪೇಟೆ, ಕೋಲಾರ, ಹೆಬ್ಟಾಳ ಕ್ಷೇತ್ರ ಗಳ ಹೆಸರು ಪರಿಶೀಲನೆ ಯಲ್ಲಿತ್ತಾದರೂ ಅಂತಿಮವಾಗಿ ಕೋಲಾರದಲ್ಲಿ ಸ್ಪರ್ಧೆಗೆ ಒಪ್ಪಿಗೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವಂತೆ 6 ತಿಂಗಳಿನಿಂದ ಒತ್ತಡ ಹೇರುತ್ತಿದ್ದ ಮಾಜಿ ಸ್ಪೀಕರ್ ರಮೇಶ್‌ಕುಮಾರ್, ಮಾಜಿ ಸಚಿವರಾದ ಕೃಷ್ಣಬೈರೇ ಗೌಡ, ನಜೀರ್ ಅಹಮದ್ ತಂಡ ಸಿದ್ದು ಮನವೊಲಿಸುವಲ್ಲಿ ಯಶಸ್ವಿಯಾಗಿದೆ ಎನ್ನಲಾಗಿದೆ. ಪುರಾಣ ಪ್ರಸಿದ್ಧ ಸೀತಿ ಬೆಟ್ಟದಲ್ಲಿ ಪೂಜೆ ಸಲ್ಲಿಸುವ ಮೂಲಕ ಶೀಘ್ರವೇ ಚುನಾ ವಣೆ ಪ್ರಚಾರಕ್ಕೂ ಚಾಲನೆ ನೀಡಲು ತೀರ್ಮಾನಿಸ ಲಾಗಿದೆ. ಇದೇ ಸಂದರ್ಭ ದಲ್ಲಿ ಕೋಲಾರದಲ್ಲಿ ಬೃಹತ್ ಸಮಾವೇಶ ಸಹ ಆಯೋ ಜಿಸಲು ನಿರ್ಧರಿಸಲಾಗಿದೆ ಎಂದು ಹೇಳಲಾಗಿದೆ.
ಒಕ್ಕಲಿಗ ಹಾಗೂ ಮುಸ್ಲಿಂ ಮತದಾರರ ಪ್ರಾಬಲ್ಯ ಇರುವ ಕೋಲಾರ ಕ್ಷೇತ್ರದಲ್ಲಿ ಹಿಂದುಳಿದ ಹಾಗೂ ಪರಿಶಿಷ್ಟ ಜಾತಿ ಮತದಾರರು ಹೆಚ್ಚಾಗಿದ್ದಾರೆ. ಸಿದ್ದರಾಮಯ್ಯ ಸ್ಪರ್ಧಿಸಿದರೆ ಮುಸ್ಲಿಂ ಮತ ಕ್ರೋಡೀಕರಣ ವಾಗ ಬಹುದು. ಕುರುಬ ಹಾಗೂ ಹಿಂದುಳಿದ ಮತ ಗಳು ಸಿಗಲಿವೆ. ಅಹಿಂದ ಮತಬ್ಯಾಂಕ್ ಒಗ್ಗೂಡಿ ಸುವ ಲೆಕ್ಕಾ ಚಾರವೂ ಇದೆ.
ಜತೆಗೆ ಸಿದ್ದರಾಮಯ್ಯ ಸ್ಪರ್ಧೆಯ ಪರಿಣಾಮ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂ ತರ ಜಿಲ್ಲೆಗಳ ಕ್ಷೇತ್ರಗಳ ಮೇಲೂ ಪ್ರಭಾವ ಬೀರಬಹು ದೆಂಬ ನಿರೀಕ್ಷೆ ಪಕ್ಷದ ಮುಖಂಡರದ್ದು.
ಕೋಲಾರ ಕ್ಷೇತ್ರಕ್ಕೆ ಹಲವು ಆಕಾಂಕ್ಷಿಗಳು ಈಗಾಗಲೇ ಸ್ಪರ್ಧೆ ಬಯಸಿದ್ದು ಒಬ್ಬರಿಗೆ ಟಿಕೆಟ್ ಕೊಟ್ಟರೆ ಮತ್ತೂಬ್ಬರು ಬಂಡಾಯ ಏಳಬಹುದು. ಸಿದ್ದರಾಮಯ್ಯ ಸ್ಪರ್ಧೆ ಮಾಡಿದರೆ ಎಲ್ಲರೂ ಒಗ್ಗೂಡಿ ಕೆಲಸ ಮಾಡುತ್ತಾರೆ ಎಂಬುದು ಸ್ಥಳೀಯ ನಾಯಕರ ಅಭಿಪ್ರಾಯ.
ಮುನಿಯಪ್ಪ ನಡೆಯೇನು?:
ಮಾಜಿ ಸ್ಪೀಕರ್ ರಮೇಶ್ ಕುಮಾರ್ ಮಾತಿನಂತೆ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತಿದೆ ಎಂದು ಮುನಿಸಿಕೊಂಡಿರುವ ಕೇಂದ್ರದ ಮಾಜಿ ಸಚಿವ ಕೆ.ಎಚ್. ಮುನಿಯಪ್ಪ ಹಾಗೂ ಅವರ ಬೆಂಬಲಿಗರು ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಯಾವ ನಿಲುವು ತಾಳಲಿದ್ದಾರೆ ಎಂಬುದು ಕಾದು ನೋಡಬೇಕಾಗಿದೆ.
ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ ಬಳಿಕ ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದ ಕೆ.ಎಚ್. ಮುನಿಯಪ್ಪ ಭಾರತ್ ಜೋಡೋ ಯಾತ್ರೆ ಯಲ್ಲೂ ಪಾಲ್ಗೊಂಡಿದ್ದರು. ಎಐಸಿಸಿ ರಚಿಸಿರುವ ಪ್ರಮುಖ ನಾಯಕರ ತಂಡದಲ್ಲೂ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ಜಿಲ್ಲೆ ಮಟ್ಟಿಗೆ ಬಂದರೆ ಸ್ಥಳೀಯ ನಾಯಕರ ಬಗ್ಗೆ ಅಸಮಾಧಾನವಿದೆ. ಹೀಗಾಗಿ, ಸಿದ್ದರಾಮಯ್ಯ ಸ್ಪರ್ಧೆ ವಿಷಯದಲ್ಲಿ ಮುನಿಯಪ್ಪ ಅವರ ನಿಲುವೂ ಪ್ರಮುಖವಾಗಲಿದೆ.
-ಎಸ್. ಲಕ್ಷ್ಮಿನಾರಾಯಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.