Siddaramaiah; ಶೋಷಿತರ ಪರ ಇದ್ದಿದ್ದಕ್ಕೆ ಮಸಿ ಬಳಿಯುವ ಯತ್ನ
ಮಸಿ ಬಳಿಯುವ ಪ್ರಯತ್ನ ಹೇಗೆ ಯಶಸ್ವಿಯಾಗುತ್ತೆ ನೋಡೋಣ: ಮುಖ್ಯಮಂತ್ರಿ ಸಿದ್ದರಾಮಯ್ಯ
Team Udayavani, Oct 7, 2024, 6:40 AM IST
ಬೆಂಗಳೂರು: ಕುರಿ ಕಾಯುವವನ ಮಗ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದು ಸಹಿಸಲಾಗುತ್ತಿಲ್ಲ ಎಂದು ಹೇಳಿದ್ದ ಬೆನ್ನಲ್ಲೇ ಮತ್ತೂಂದು ಭಾವನಾತ್ಮಕ ದಾಳ ಉರುಳಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾನು ಸಾಮಾಜಿಕ ನ್ಯಾಯದ ಪರವಾಗಿ, ಶೋಷಿತರ ದಮನಿತರ ಪರವಾಗಿ ಹಾಗೂ ಜಾತಿ ವ್ಯವಸ್ಥೆ ವಿರುದ್ದವಾಗಿ ಇದ್ದೇನೆ ಎನ್ನುವ ಕಾರಣದಿಂದ ನನ್ನ ಮೇಲೆ ಮಸಿ ಬಳಿಯುವ ಕೆಲಸ ಮಾಡಿದ್ದಾರೆ ಎಂದು ಹೇಳಿದರು.
ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ರವಿವಾರ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ವಿ.ಎಸ್. ಉಗ್ರಪ್ಪ ಅವರ ಕುರಿತ “ಸಮರ್ಥ ಜನನಾಯಕ’ ಪುಸ್ತಕ ಬಿಡುಗಡೆಗೊಳಿಸಿ ಅವರು ಮಾತನಾಡಿದರು.
ಸಾಮಾಜಿಕ ನ್ಯಾಯದ ಪರವಾಗಿ ಇದ್ದೇನೆ ಎಂಬ ಕಾರಣಕ್ಕಾಗಿ ಕೆಲವರು ನನ್ನ ಮೇಲೆ ಮಸಿ ಬಳಿಯುವ ಪ್ರಯತ್ನ ನಡೆಸಿದ್ದಾರೆ. ಅವರ ಪ್ರಯತ್ನ ಏನಾಗುತ್ತೋ ನೋಡೋಣ. ಈ ಬಗ್ಗೆ ಮಾತನಾಡುವುದಿಲ್ಲ. ಅದು ಜನರಿಗೂ ಗೊತ್ತಿದೆ. ಉಗ್ರಪ್ಪ ಮತ್ತು ನಾನು ಸಾಮಾಜಿಕ ನ್ಯಾಯದ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿ ಮಾಡಿಕೊಂಡವರಲ್ಲ. ಈ ಕಾರಣಕ್ಕೇ ನನಗೆ ಮಸಿ ಬಳಿಯಲು ಕೆಲವರು ಯತ್ನಿಸುತ್ತಿದ್ದಾರೆ. ಅವರ ಈ ಪ್ರಯತ್ನಗಳು ಹೇಗೆ ಯಶಸ್ವಿ ಆಗ್ತದೆ ನಾನೂ ನೋಡ್ತೀನಿ ಎಂದು ಇದೇ ಸಂದರ್ಭದಲ್ಲಿ ಎಚ್ಚರಿಕೆ ಕೂಡ ರವಾನಿಸಿದರು.
ಬಡವರ ಪರ ಯೋಜನೆ ತಂದ ಸಿದ್ದರಾಮಯ್ಯಗೆ ಕಾಟ: ಸಿಂಧ್ಯಾ
ಗಾಜಿನ ಮನೆಯಲ್ಲಿ ಕುಳಿತವರು ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಕೇಳುತ್ತಿದ್ದಾರೆ. ಸಿಎಂ ರಾಜೀನಾಮೆ ಕೇಳಲು ಅವರು ಯಾರು? ಎಂದು ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯಾ ಕಿಡಿಕಾರಿದರು. ಜನತಾ ಪರಿವಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ದೇವರಾಜ ಅರಸು ಮತ್ತು ಬಂಗಾರಪ್ಪ ಕಾರಣರಾಗಿದ್ದಾರೆ. ದೇವರಾಜ ಅರಸರು ಬಡವರ ಪರವಾದ ಕಾರ್ಯಕ್ರಮ ರೂಪಿಸಿದರು. ಅಂಥವರನ್ನೇ ಕೆಲವರು ಕಟಕಟೆಗೆ ನಿಲ್ಲಿಸಿದರು. ಅಂಥವರೇ ಈಗ ಹಲವು ಯೋಜನೆ ಜಾರಿ ತಂದಿರುವ ಸಿದ್ದರಾಮಯ್ಯ ಅವರನ್ನು ಅದೇ ರೀತಿ ಕಾಟ ಕೊಡುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ಅವರು ಬಂಡೆ ರೀತಿ ನಿಮ್ಮ ಹಿಂದೆ ಇದ್ದಾರೆ. ರಾಜೀನಾಮೆ ಕೊಡುವ ಅಗತ್ಯ ಇಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.