ಅತ್ಯಾಚಾರ ಪ್ರಕರಣ: ಸಿಎಂ – ಸಿದ್ದರಾಮಯ್ಯ ವಾಕ್ಸಮರ
Team Udayavani, Sep 23, 2021, 6:14 AM IST
ಬೆಂಗಳೂರು: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದಿದ್ದ ಅತ್ಯಾಚಾರ ಪ್ರಕರಣದ ಚರ್ಚೆಯು ಕಾಂಗ್ರೆಸ್ ಹಾಗೂ ಬಿಜೆಪಿ ಸರಕಾರಗಳ ಸಂದರ್ಭದಲ್ಲಿ ನಡೆದ ಅತ್ಯಾಚಾರ ಪ್ರಕರಣಗಳತ್ತ ತಿರುಗಿ ಮುಖ್ಯಮಂತ್ರಿ ಬೊಮ್ಮಾಯಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ನಡುವೆ ಕೆಲಕಾಲ ವಾಕ್ಸಮರಕ್ಕೆ ಕಾರಣವಾಯಿತು.
ಮೈಸೂರು ಪ್ರಕರಣದಲ್ಲಿ ಎಫ್ಐಆರ್ ತಡವಾಗಿ ದಾಖಲಿಸಲಾಗಿದೆ. ಪೊಲೀಸರಿಂದ ನಿರ್ಲಕ್ಷ್ಯವಾಗಿದೆ ಎಂದು ಸಿದ್ದರಾಮಯ್ಯ ಹೇಳುತ್ತಿದ್ದಾಗ ಮಧ್ಯಪ್ರವೇಶಿಸಿದ ಮುಖ್ಯಮಂತ್ರಿ ಬೊಮ್ಮಾಯಿ ಅವರು, ಯಾವುದೇ ರೀತಿಯ ನಿರ್ಲಕ್ಷ್ಯ ವಿಳಂಬ ಆಗಿಲ್ಲ. ನಿಮ್ಮ ಕಾಲದಲ್ಲಿ ಇದ್ದ ಪೊಲೀಸರೇ ನಮ್ಮ ಕಾಲದಲ್ಲೂ ಇದ್ದಾರೆ. ಆಗಲೂ, ಈಗಲೂ ಅವರೇ ಕೆಲಸ ಮಾಡುತ್ತಿದ್ದಾರೆ ಎಂದರು.
ಕಾಂಗ್ರೆಸ್ ಅವಧಿಯಲ್ಲಿ ನಡೆದ ಅತ್ಯಾಚಾರ ಪ್ರಕರಣಗಳ ಅಂಕಿ ಅಂಶಗಳ ಮಾಹಿತಿ ನೀಡಲು ಮುಂದಾದರು. ಇದರಿಂದ ಸಿಟ್ಟಾದ ಸಿದ್ದರಾಮಯ್ಯ, “ಆಗ ನೀವು ಏನು ಮಾಡುತ್ತಿದ್ದೀರಿ, ಕಡ್ಲೆಪುರಿ ತಿಂತಿದ್ರಾ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದರಿಂದ ಅಸಮಾಧಾನಗೊಂಡ ಮುಖ್ಯಮಂತ್ರಿ, ನಿಮಗೆ ನಮ್ಮ ಮಾತು ಕೇಳುವಷ್ಟು ಸಮಾಧಾನ ಇಲ್ಲ. ಮಣಿಪಾಲದಲ್ಲಿ ನಡೆದ ಪ್ರಕರಣದಲ್ಲಿ ಎಷ್ಟು ದಿನಗಳ ಬಳಿಕ ಎಫ್ಐಆರ್ ಹಾಕಿದಿರಿ? ಏನಾಯ್ತು ಎಂದು ಪ್ರಶ್ನಿಸಿದರು.
ಇದಕ್ಕೆ ಮಾಜಿ ಸಚಿವ ಕೆ.ಜೆ.ಜಾರ್ಜ್, ಆ ಪ್ರಕರಣದಲ್ಲಿ ಸ್ವಯಂ ಪ್ರೇರಿತ ದೂರು ದಾಖಲಿಸಿ ತನಿಖೆ ವಿಚಾರಣೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ಆಗಿದೆ. ಸದನವನ್ನು ತಪ್ಪು ದಾರಿಗೆ ಎಳೆಯುವುದು ಬೇಡ ಎಂದರು.
ಟೀಕೆ ಎದುರಿಸಿ ನನಗೆ ಗೊತ್ತಿಲ್ಲ: ಆರಗ:
“ನನ್ನದು ಕಟುಕ ಹೃದಯವಲ್ಲ…ಟೀಕೆಗಳನ್ನು ಎದುರಿಸಿ ನನಗೆ ಗೊತ್ತಿಲ್ಲ’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಭಾವುಕರಾಗಿ ನುಡಿದರು. ಅತ್ಯಾಚಾರ ಪ್ರಕರಣ ಸಂಬಂಧ ನಡೆದ ಚರ್ಚೆ ವೇಳೆ, ಘಟನಾ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದ್ದೆ. ಎಲ್ಲೂ ನಿರ್ಲಕ್ಷ್ಯ ವಹಿಸಿಲ್ಲ, ಲೋಪವಾಗಿಲ್ಲ ಎಂದರು.
ಸಂತ್ರಸ್ತೆ ಹೇಳಿಕೆ ದಾಖಲು: ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಇತ್ತೀಚೆಗೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯು 28 ದಿನಗಳ ಬಳಿಕ ಬುಧವಾರ ಮೈಸೂರಿನ 3ನೇ ಜೆಎಂಎಫ್ಸಿ ಕೋರ್ಟ್‌ನಲ್ಲಿ ನ್ಯಾಯಾಧೀಶರು, ತನಿಖಾಧಿಕಾರಿ, ಟೈಪಿಸ್ಟ್ ಸಮುಖದಲ್ಲಿ ತಮ್ಮ ಹೇಳಿಕೆಯನ್ನು ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
MUST WATCH
ಹೊಸ ಸೇರ್ಪಡೆ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Team India: ದ.ಆಫ್ರಿಕಾ ವಿರುದ್ದದ ಗೆಲುವಿನೊಂದಿಗೆ ಪಾಕ್ ದಾಖಲೆ ಮುರಿದ ಟೀಂ ಇಂಡಿಯಾ
Udupi: ಸಿಎನ್‌ಜಿ ಪೂರೈಕೆಯಲ್ಲಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಸಂಸದ ಕೋಟ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.