Siddaramaiah ಸಚಿವ ಸಂಪುಟ ತುರ್ತು ಸಭೆ; ರಾಜ್ಯಪಾಲರ ವರ್ತನೆಗೆ ತೀವ್ರ ಖಂಡನೆ
ಕುಟಿಲ ನೀತಿಯಿಂದ ಸರಕಾರ ಅಸ್ಥಿರ ಗೊಳಿಸುವ ಯತ್ನ ಅವರ ಭ್ರಮೆ: ಸಿದ್ದರಾಮಯ್ಯ ಕಿಡಿ
Team Udayavani, Aug 17, 2024, 7:51 PM IST
ಬೆಂಗಳೂರು: ಮುಡಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅನುಮತಿ ನೀಡಿದ ಬೆನ್ನಲ್ಲೇ ರಾಜ್ಯ ಸಚಿವ ಸಂಪುಟದ ತುರ್ತು ಸಭೆಯನ್ನು ಶನಿವಾರ (ಆ17) ಸಂಜೆ ಕರೆಯಲಾಯಿತು.
ಸಂಪುಟ ಸಭೆಯ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೊಂದಿಗೆ ಸಿಎಂ ಸಿದ್ದರಾಮಯ್ಯ ಅವರು ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದರು. ಮೊದಲು ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ‘ತುಂಗಭದ್ರಾ ಡ್ಯಾಮ್ ನೀರು ಪೋಲಾಗುತ್ತಿರುವುದನ್ನು ತಡೆಯಲು ಯಶಸ್ವಿಯಾಗಿದ್ದೇವೆ. ರೈತರು ಆತಂಕಕ್ಕೀಡಾಗಿದ್ದರು. ನಾವು ಪರಿಸ್ಥಿತಿ ನಿಭಾಯಿಸುವಲ್ಲಿ ತಜ್ಞರನ್ನು ಬಳಸಿಕೊಂಡು ತುರ್ತು ಕಾರ್ಯಾಚರಣೆ ನಡೆಸಿ ನೀರು ವ್ಯರ್ಥ ವಾಗುವುದನ್ನು ತಡೆಯುವಲ್ಲಿ ಯಶಸ್ವಿಯಾಗಿದ್ದೇವೆ’ ಎಂದು ತಿಳಿಸಿದರು.
ಆ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ ರಾಜ್ಯ ಪಾಲರ ವಿರುದ್ಧ ತೀವ್ರ ಆಕ್ರೋಶ ಹೊರ ಹಾಕಿದರು.’ರಾಜ್ಯಪಾಲರು ದೇಶದ ರಾಷ್ಟ್ರಪತಿಗಳ ಪ್ರತಿನಿಧಿ. ಅವರು ಸಂವಿಧಾನದ ಪ್ರತಿನಿಧಿ ಆಗಿರಬೇಕು. ಅದನ್ನು ಬಿಟ್ಟು ಕೇಂದ್ರ ಸರಕಾರದ ಪ್ರತಿನಿಧಿಯಾಗಿ ಕೆಲಸ ಮಾಡಬಾರದು, ಬಿಜೆಪಿ ಪ್ರತಿನಿಧಿಯಾಗಿ ಕೆಲಸ ಮಾಡಬಾರದು. ಈ ಪ್ರಕರಣದಲ್ಲಿ ಕಾನೂನು ರೀತಿಯಲ್ಲಿ ನಡೆದು ಕೊಂಡಿಲ್ಲ. ಈ ವರ್ತನೆಯನ್ನು ಸಂಪುಟ ತೀವ್ರವಾಗಿ ಖಂಡಿಸಿದೆ’ ಎಂದರು.
‘ಕೇಂದ್ರ ಸರಕಾರ ನಗತ್ಯವಾಗಿ ಕಾಂಗ್ರೆಸ್ ಸರಕಾರವನ್ನು ಅಸ್ಥಿರಗೊಳಿಸಲು ರಾಜ್ಯಪಾಲರನ್ನು ಬಳಸಿಕೊಳ್ಳುತ್ತಿದ್ದು, ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ. ನಡವಳಿಕೆಯಿಂದ ಪ್ರಜಾಪ್ರಭುತ್ವದ ಮೂಲಭೂತ ತತ್ವಕ್ಕೆ ಅಪಾಯ ಎದುರಾಗಿದೆ. ಫೆಡರಲ್ ವ್ಯವಸ್ಥೆಗೆ ಧಕ್ಕೆಯಾಗಿದ್ದು ಇದನ್ನು ತೀವ್ರವಾಗಿ ಖಂಡಿಸಿದ್ದೇವೆ’ ಎಂದರು.
‘ಕೇಂದ್ರ ಸರಕಾರ SOP ಯಲ್ಲಿ (Standard operating procedure) ಸ್ಪಷ್ಟವಾಗಿ ಹೇಳಿದ್ದಾರೆ 2021 ಸೆಪ್ಟೆಂಪರ್ 3 ರಂದು ಎಲ್ಲ ಮುಖ್ಯ ಕಾರ್ಯದರ್ಶಿಗಳಿಗೆ, ಕೇಂದ್ರಾಡಳಿತ ಪ್ರದೇಶಗಳಿಗೆ ವಿವರಗಳನ್ನು ಕಳುಹಿಸಿದ್ದಾರೆ. Standard operating procedure ಪ್ರಕಾರ ರಾಜ್ಯಪಾಲರು ನಡೆದುಕೊಂಡಿಲ್ಲ. ಕಾನೂನು ಬಾಹಿರವಾಗಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಇದು ಸಂವಿಧಾನಕ್ಕೆ ವಿರುದ್ಧವಾಗಿದೆ’ ಎಂದು ಸಿಎಂ ಹೇಳಿದರು.
‘ಎಲ್ಲ ಸಂಪುಟ ಸದಸ್ಯರಿಗೆ ಧನ್ಯವಾದ ಸಲ್ಲಿಸುತ್ತೇನೆ. ರಾಜಕೀಯ ದುರುದ್ದೇಶದಿಂದ ರಾಜ್ಯಪಾಲರು ನೀಡಿರುವ ಅಕ್ರಮ ಪ್ರಾಸಿಕ್ಯೂಷನ್ ವಿರುದ್ಧ ಕಾನೂನಾತ್ಮಕ ಹೋರಾಟ ಮಾಡುತ್ತವೆ. ನನ್ನ ಮೇಲೆ ರಾಜ್ಯಪಾಲರನ್ನು ಬಳಸಿಕೊಳ್ಳುತ್ತಿದ್ದಾರೆ. ನಮ್ಮ ಸರಕಾರ ಬಡವರ ಪರವಾಗಿರುವ ಸರಕಾರ. ಎಲ್ಲ ಗ್ಯಾರಂಟಿ ಜಾರಿ ಮಾಡಿದ್ದೇವೆ. ಅವರು ಗ್ಯಾರಂಟಿ ಗಳಿಗೆ ವಿರುದ್ದವಾಗಿದ್ದರು. ಪ್ರಧಾನ ಮಂತ್ರಿ ನರೇಂದ್ರ ಮೋದಿ, ಅಮಿತ್ ಶಾ ವಿರೋಧ ಮಾಡಿದ್ದರು. ನಾವು ನಡೆದಂತೆ ನುಡಿದಿದ್ದೇವೆ. ಬಿಜೆಪಿ, ಜೆಡಿಎಸ್ ನವರು ಒಂದಾಗಿ ಅಸ್ಥಿರಗೊಳಿಸಲು ಯತ್ನಿಸುತ್ತಿದ್ದಾರೆ. ನನ್ನನ್ನು ರಾಜಕೀಯವಾಗಿ ತೇಜೋವಧೆಮಾಡಲು ಸಾಧ್ಯವಿಲ್ಲ. ನಾಡಿನ ಜನತೆಯ ಆಶೀರ್ವಾದ ನನ್ನ ಮೇಲೆ, ಪಕ್ಷದ ಮೇಲೆ , ಮುಖಂಡರ ಮೇಲಿದೆ. ಕುಟಿಲ ನೀತಿಯಿಂದ ಸರಕಾರ ಅಸ್ಥಿರ ಗೊಳಿಸುವ ಯತ್ನ ಅವರ ಭ್ರಮೆ. 135+1ಸ್ಥಾನ ನಾವು ಗೆದ್ದಿರುವುದು ಅವರಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ’ ಎಂದು ಕಿಡಿ ಕಾರಿದರು.
ನನ್ನ ವಿರುದ್ಧ ದೂರು ನೀಡಿದ ತತ್ ಕ್ಷಣ ತರಾತುರಿಯಲ್ಲಿ ರಾತ್ರಿ 10 ಗಂಟೆಗೆ ಶೋಕಾಸ್ ನೋಟಿಸ್ ಸಿದ್ದವಾಗಿತ್ತು. ಲೋಕಾಯುಕ್ತ ದವರು ಶಶಿಕಲಾ ಜೊಲ್ಲೆ, ಎಚ್.ಡಿ.ಕುಮಾರಸ್ವಾಮಿ,ಮುರುಗೇಶ್ ನಿರಾಣಿ, ಜನರ್ದನ ರೆಡ್ಡಿ ಅವರ ಅಕ್ರಮದ ಕುರಿತು ದಾಖಲೆಗಳನ್ನು ನೀಡಿದರೂ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರಲಿಲ್ಲ. ಆದರೆ ಮುಡಾ ಪ್ರಕಣದಲ್ಲಿ ತನಿಖೆ ನಡೆದಿಲ್ಲ, ದಾಖಲೆಗಳೇ ಇಲ್ಲದೆ ಇದ್ದರೂ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ರಾಜ್ಯಪಾಲರು ಸ್ವತಂತ್ರ ಬುದ್ದಿಯಿಂದ ಕೊಟ್ಟಿಲ್ಲ. ಬಿಜೆಪಿಯವರ ಮಾತು ಕೇಳಿ ನೀಡಿದ್ದಾರೆ ಎನ್ನುವುದು ಮೇಲ್ನೋಟಕ್ಕೆ ಸ್ಪಷ್ಟವಾಗಿದೆ ಎಂದು ಕಿಡಿ ಕಾರಿದರು. ಜೆಡಿಎಸ್ ಕಾನೂನು ಘಟಕದ ಅಧ್ಯಕ್ಷ ಪ್ರದೀಪ್ ಕುಮಾರ್ ಅವರೂ ರಾಜ್ಯಪಾಲರಿಗೆ ದೂರು ನೀಡಿದ್ದಾರೆ ಎಂದು ಸಿಎಂ ತಿಳಿಸಿದರು.
ಮುಖ್ಯಮಂತ್ರಿಗಳಾಗಿ ಮುಂದುವರೆಯುತ್ತಾರೆ : ಡಿಸಿಎಂ
‘ರಾಜ್ಯಪಾಲರ ಕಚೇರಿ ದುರ್ಬಳಕೆ ಮಾಡಿಕೊಂಡು ಸುಳ್ಳು ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿಲುಕಿಸಿ ಸರ್ಕಾರ ಅಸ್ಥಿರಗೊಳಿಸುವ ಷಡ್ಯಂತ್ರ ನಡೆಯುತ್ತಿದೆ. ಇಡೀ ಕಾಂಗ್ರೆಸ್ ಪಕ್ಷ ಹಾಗೂ ಸರ್ಕಾರ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಲ್ಲುತ್ತದೆ, ಅವರು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ.ಸಿದ್ದರಾಮಯ್ಯ ಅವರು ನಮ್ಮ ಮುಖ್ಯಮಂತ್ರಿಗಳು, ಅವರು ಮುಖ್ಯಮಂತ್ರಿಗಳಾಗಿ ಮುಂದುವರೆಯುತ್ತಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
ಕೇವಲ ಕಾಂಗ್ರೆಸ್ ಪಕ್ಷ ಮಾತ್ರವಲ್ಲ ಇಡೀ ಇಂಡಿಯಾ ಒಕ್ಕೂಟ ನಮ್ಮ ಮುಖ್ಯಮಂತ್ರಿಗಳ ಬೆನ್ನಿಗೆ ನಿಲ್ಲಲಿದೆ. ಮುಖ್ಯಮಂತ್ರಿಗಳ ವಿರುದ್ಧ ಸುಳ್ಳು ಪ್ರಕರಣ ಸೃಷ್ಟಿಸಲಾಗಿದೆ. ಹೀಗಾಗಿ ಕಾನೂನು ಚೌಕಟ್ಟಿನಲ್ಲಿ ಹೋರಾಟ ಮುಂದುವರಿಸುತ್ತೇವೆ. ಇದರ ಜತೆಗೆ ರಾಜಕೀಯವಾಗಿಯೂ ಜನರ ಮಧ್ಯೆ ಹೋರಾಟ ಮಾಡಲಾಗುವುದು ಎಂದು ಡಿ.ಕೆ.ಶಿವಕುಮಾರ್ ಹೋರಾಟದ ಕುರಿತು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.