ಆಕೆಯೇನು ವಿಜಯ ಮಲ್ಯನೋ ಇಲ್ಲವೇ ನೀರವ್ ಮೋದಿಯೋ? ಪೊಲೀಸರ ವೈಫಲ್ಯಕ್ಕೆ ಸಿದ್ದರಾಮಯ್ಯ ಕಿಡಿ

Team Udayavani, Mar 28, 2021, 3:15 PM IST

ಆಕೆಯೇನು ವಿಜಯಮಲ್ಯನೋ ಇಲ್ಲವೇ ನೀರವ್ ಮೋದಿಯೋ? ಪೊಲೀಸರ ವೈಫಲ್ಯಕ್ಕೆ ಸಿದ್ದರಾಮಯ್ಯ ಕಿಡಿ

ಬೆಂಗಳೂರು: ರಾಜ್ಯದ ಪೊಲೀಸ್ ಇಲಾಖೆಯೂ ಸೇರಿದಂತೆ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿರುವುದಕ್ಕೆ ಈ ಸಿಡಿ ಹಗರಣ ಸಾಕ್ಷಿ. ಸಾಮಾನ್ಯ ಕುಟುಂಬದಿಂದ ಬಂದಿರುವ ಯುವತಿಯನ್ನು ಇಷ್ಟು ದಿನಗಳ ನಂತರವೂ ಪತ್ತೆ ಹಚ್ಚಲಾಗಿಲ್ಲವೆಂದರೆ ಏನು ಅರ್ಥ? ಆಕೆಯೇನು ವಿಜಯ ಮಲ್ಯನೋ ಇಲ್ಲವೇ ನೀರವ್ ಮೋದಿಯೋ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸಿಡಿ ಪ್ರಕರಣದಿಂದಾಗಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕದ ಮಾನ ಹರಾಜು ಆಗುತ್ತಿರುವುದಕ್ಕೆ ರಾಜ್ಯ ಸರ್ಕಾರ ಮತ್ತು ಪೊಲೀಸರ ವೈಫಲ್ಯವೇ ಕಾರಣ. ಸಿಡಿ ಮಾಧ್ಯಮದಲ್ಲಿ ಕಾಣಿಸಿಕೊಂಡು 26 ದಿನಗಳು ಕಳೆದರೂ ಸಂತ್ರಸ್ತೆ ಯುವತಿಯನ್ನು ಪೊಲೀಸರಿಗೆ ಪತ್ತೆ ಹಚ್ಚಲಿಕ್ಕಾಗದಿರುವುದು ನಾಚಿಕೆಗೇಡಿನ ಸಂಗತಿ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ:ಸಿಡಿ ಬಗ್ಗೆ ಮಾತನಾಡಲು ನನಗೆ ವಾಕರಿಕೆ ಬರುತ್ತದೆ. ನನಗೆ ಯಾವುದೇ ಆಸಕ್ತಿಯಿಲ್ಲ: ಈಶ್ವರಪ್ಪ

ದಿನಕ್ಕೊಂದು ತಿರುವು ಪಡೆದು ರಾಜಕೀಯ ಕೆಸರೆರೆಚಾಟಕ್ಕೆ ಕಾರಣವಾಗಿರುವ ಸಿಡಿ ಹಗರಣದ ತನಿಖೆ ತಾರ್ಕಿಕ ಅಂತ್ಯ ಕಾಣಬೇಕಾದರೆ ಸಂತ್ರಸ್ತ ಯುವತಿ ಅಜ್ಞಾತ ಸ್ಥಳದಿಂದ ಹೊರಬಂದು ಪೊಲೀಸರ ಮುಂದೆ ಹಾಜರಾಗಿ ಹೇಳಿಕೆ ನೀಡಬೇಕು. ಕಾನೂನುಬದ್ಧವಾದ ಅವಳ ಹಕ್ಕನ್ನು ಚಲಾಯಿಸದಂತೆ ತಡೆಯುತ್ತಿರುವವರು ಯಾರು ಎಂದು ಅವರು ಪ್ರಶ್ನಿಸಿದ್ದಾರೆ.

ಮಾಧ್ಯಮಗಳಲ್ಲಿ ಪ್ರಕಟ/ಪ್ರಸಾರವಾಗಿರುವ ಯುವತಿಯದ್ದೆನ್ನಲಾದ ಹೇಳಿಕೆಗಳನ್ನು ಗಮನಿಸಿದರೆ ಆಕೆಗೆ ರಾಜ್ಯ ಸರ್ಕಾರದ ಮೇಲಾಗಲಿ, ಪೊಲೀಸರ ಮೇಲಾಗಲಿ ನಂಬಿಕೆ ಇಲ್ಲ. ಪೊಲೀಸರು ತನ್ನ ವಿರುದ್ಧವೇ ಸಂಚು ಮಾಡುತ್ತಿದ್ದಾರೆಂಬ ಅರ್ಥದಲ್ಲಿ ಯುವತಿ ಮಾತನಾಡುತ್ತಿದ್ದಾಳೆ. ಗೃಹಸಚಿವ ಬಸವರಾಜ ಬೊಮ್ಮಾಯಿ ಈ ಬಗ್ಗೆ ಗಮನಹರಿಸಬೇಕು ಎಂದಿದ್ದಾರೆ.

ಇದನ್ನೂ ಓದಿ: ಮಂದಿರ ಕಟ್ಟುವ ವರ್ಷದಲ್ಲೇ ಹೆಣ್ಣಿನ ಮೇಲೆ ದೌರ್ಜನ್ಯ; ರಾಮರಾಜ್ಯವೋ, ರಾವಣರಾಜ್ಯವೋ?: ಉಗ್ರಪ್ಪ

ಸಿಡಿಯಲ್ಲಿರುವ ಯುವತಿ ಅಜ್ಞಾತ ಸ್ಥಳದಿಂದ ನಿರಂತರವಾಗಿ ತನ್ನ ಹೇಳಿಕೆಗಳ ಸಿಡಿಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡುತ್ತಿದ್ದಾಳೆ, ತನ್ನ ವಕೀಲನ ಮೂಲಕ ಪೊಲೀಸರಿಗೆ ದೂರು ಕಳುಹಿಸಿಕೊಡುತ್ತಿದ್ದಾಳೆ, ತಂದೆ-ತಾಯಿ ಜೊತೆ ಮಾತನಾಡುತ್ತಿದ್ದಾಳೆ. ಹೀಗಿದ್ದರೂ ಪೊಲೀಸರ ಕೈಗೆ ಮಾತ್ರ ಸಿಗುತ್ತಿಲ್ಲ ಎಂದರೆ ಏನು ಅರ್ಥ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

ಟಾಪ್ ನ್ಯೂಸ್

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Video: ತನ್ನ ಮನೆಯ ಮುಂದೆಯೇ ಚಾಟಿಯಿಂದ ಹೊಡೆದುಕೊಂಡ ಕೆ.ಅಣ್ಣಾಮಲೈ…

Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…

Madhya Pradesh Education Minister’s substitute statement sparks political storm

Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

Yatnal-Team

Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್‌ ಬಿಜೆಪಿ ವಕ್ಫ್ ಪ್ರವಾಸ

Congress-Session

Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್‌ ಪಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

2

Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

1(1

Puttur ನಗರಕ್ಕೂ ಬೇಕು ಟ್ರಾಫಿಕ್‌ ಸಿಗ್ನಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.