ಪ್ರತಿ ಬಾರಿ ಭ್ರಷ್ಟರ ರಕ್ಷಣೆ ಅಸಾಧ್ಯ; CMಗೆ ಜಾವ್ಡೇಕರ್ ಹೇಳಿದ್ದೇನು
Team Udayavani, Oct 27, 2017, 6:25 PM IST
ಬೆಂಗಳೂರು: ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ನಗರಾಭಿವೃದ್ಧಿ ಸಚಿವ ಕೆಜೆ ಜಾರ್ಜ್ ಅವರು ರಾಜೀನಾಮೆ ಕೊಡಲೇಬೇಕು. ಕೇಂದ್ರದ ನಿರ್ದೇಶನದಂತೆ ಸಿಬಿಐ ಎಫ್ಐಆರ್ ದಾಖಲಿಸಿಲ್ಲ, ಸುಪ್ರೀಂಕೋರ್ಟ್ ನಿರ್ದೇಶನದಂತೆ ಎಫ್ಐಆರ್ ದಾಖಲಿಸಿದೆ. ಹಾಗಾಗಿ ಜಾರ್ಜ್ ಅವರನ್ನು ರಕ್ಷಿಸಿಕೊಳ್ಳಲು ಸಿಎಂಗೆ ಸಾಧ್ಯವಿಲ್ಲ ಎಂದು ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವ್ಡೇಕರ್ ತಿರುಗೇಟು ನೀಡಿದ್ದಾರೆ.
ಬೆಂಗಳೂರಿನಲ್ಲಿ ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದ ಕುರಿತಂತೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸಿಎಂ ಸಿದ್ದರಾಮಯ್ಯ ಅವರು ರಕ್ಷಣಾತ್ಮಕವಾಗಿ ವರ್ತಿಸುತ್ತಿದ್ದಾರೆ. ಗಣಪತಿ ಪ್ರಕರಣದಲ್ಲಿ ಫೋರೆನ್ಸಿಕ್ ವರದಿಗೂ ಮೊದಲೇ ಬಿ ರಿಪೋರ್ಟ್ ಹಾಕಲಾಗಿತ್ತು, ಆದರೆ ಸುಪ್ರೀಂಕೋರ್ಟ್ ಬಿ ರಿಪೋರ್ಟ್ ಅನ್ನು ಒಪ್ಪಿಕೊಂಡಿಲ್ಲ ಎಂದು ತಿಳಿಸಿದರು.
ಸುಪ್ರೀಂ ನಿರ್ದೇಶನದಂತೆ ಸಿಬಿಐ ಕೆಲಸ ಮಾಡುತ್ತಿದೆ. ಎಲ್ಲಾ ಬಾರಿಯೂ ಭ್ರಷ್ಟರನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ, ಇದರಲ್ಲಿ ನಿಮಗೆ(ಸಿದ್ದರಾಮಯ್ಯ)ಯಶಸ್ವಿಯಾಗಲು ಸಾಧ್ಯವಿಲ್ಲ ಎಂದು ಹೇಳಿದರು.
ಡಿವೈಎಸ್ಪಿ ಗಣಪತಿ ಪ್ರಕರಣದಲ್ಲಿ ಕೆಜೆ ಜಾರ್ಜ್ ಅವರ ರಾಜೀನಾಮೆ ಪಡೆದುಕೊಳ್ಳುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದ ಬಳಿಕ, ಸಂಜೆ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವ್ಡೇಕರ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಜಂಟಿ ಪತ್ರಿಕಾಗೋಷ್ಠಿ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.