ಬಾದಾಮಿಗೆ ಸಿಎಂ: ಮಂಗಳವಾರ ನಾಮಪತ್ರ ಸಲ್ಲಿಸಲಿರುವ ಸಿದ್ದರಾಮಯ್ಯ
Team Udayavani, Apr 22, 2018, 6:00 AM IST
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಬಾದಾಮಿ ಕ್ಷೇತ್ರದಲ್ಲೂ ಸ್ಪರ್ಧೆ ಮಾಡುವ ಕುರಿತ ಪ್ರಶ್ನೆಗೆ ಕೊನೆಗೂ ಉತ್ತರ ದೊರೆ ತಿದ್ದು ಎ. 24ರಂದು ನಾಮಪತ್ರ ಸಲ್ಲಿಸಲಿದ್ದಾರೆ.
ಚಾಮುಂಡೇಶ್ವರಿ ಜತೆಗೆ ಬಾದಾಮಿ ಕ್ಷೇತ್ರದಿಂದಲೂ ಸ್ಪರ್ಧಿಸಲು ಹೈಕಮಾಂಡ್ ಅನುಮತಿ ದೊರೆತಿದ್ದು, ಶನಿವಾರ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅವರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜತೆ ಚರ್ಚಿಸಿ ಒಪ್ಪಿಗೆ ನೀಡಿದ್ದಾರೆ. ಆದರೆ ಚಾಮುಂಡೇಶ್ವರಿಯಲ್ಲಿ ಸೋಲುವ ಭೀತಿಯಿಂದ ಬಾದಾಮಿಯಲ್ಲಿ ಸ್ಪರ್ಧೆ ಮಾಡುತ್ತಿದ್ದಾರೆ ಎಂಬ ಸಂದೇಶ ರವಾನೆಯಾಗದಂತೆ ನೋಡಿಕೊಳ್ಳಲು ಸೂಚಿಸಿದ್ದಾರೆ ಎಂದು ಹೇಳಲಾಗಿದೆ.
ಈ ಮಧ್ಯೆ, ಸಿಎಂ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ಸಂಸದ ಶ್ರೀರಾಮುಲು ಅವರನ್ನು ಕಣಕ್ಕಿಳಿಸುವ ಬಗ್ಗೆ ಗಂಭೀರ ಚಿಂತನೆ ನಡೆಸಿದ್ದು, ಜತೆಗೆ ಬಾಗಲಕೋಟೆ ಸಂಸದ ಗದ್ದಿಗೌಡರ್, ಮಾಜಿ ಸಂಸದ ವಿಜಯ ಸಂಕೇಶ್ವರ ಹೆಸರು ಪರಿಶೀಲನೆಯಲ್ಲಿದೆ ಎಂದು ಮೂಲಗಳು ತಿಳಿಸಿವೆ. ಯಡಿಯೂರಪ್ಪ ಅವರೇ ಕಣಕ್ಕಿಳಿಯಲಿದ್ದಾರೆ ಎಂಬ ಮಾತುಗಳಿವೆಯಾದರೂ ಪಕ್ಷದ ಮೂಲ ಗಳು ಇದನ್ನು ನಿರಾಕರಿಸಿವೆ. ಈ ನಡುವೆ ಜೆಡಿಎಸ್‌ನಿಂದ ಹನುಮಂತಪ್ಪ ಮಾವಿನಮರದ ಅವರು ಕುಮಾರಸ್ವಾಮಿ ಸಮ್ಮುಖದಲ್ಲಿ ಬಾದಾಮಿ ಕ್ಷೇತ್ರಕ್ಕೆ ಶನಿವಾರ ನಾಮಪತ್ರ ಸಲ್ಲಿಸಿದ್ದಾರೆ.
ಈ ಮಧ್ಯೆ ಈಗಾಗಲೇ ಟಿಕೆಟ್ ಘೋಷಿಸಿದ್ದ ಬೆಂಗಳೂರಿನ ಪದ್ಮನಾಭನಗರದಲ್ಲಿ ಗುರಪ್ಪನಾಯ್ಡು ಬದಲಿಗೆ ಮಾಜಿ ಶಾಸಕ ಎಂ. ಶ್ರೀನಿವಾಸ್, ಜಗಳೂರಿನಲ್ಲಿ ಪುಷ್ಪಾ ಬದಲಿಗೆ ಎಚ್.ಪಿ. ರಾಜೇಶ್, ತಿಪಟೂರಿನಲ್ಲಿ ನಂಜಾಮರಿ ಬದಲಿಗೆ ಷಡಕ್ಷರಿ, ಮಲ್ಲೇಶ್ವರದಲ್ಲಿ ಎಂ.ಆರ್.ಸೀತಾರಾಂ ಬದಲಿಗೆ ಕೆಂಗಲ್ ಹನುಮಂತಯ್ಯ ಮೊಮ್ಮಗ ಶ್ರೀಪಾದ ರೇಣು ಅವರಿಗೆ ಟಿಕೆಟ್ ನೀಡಲು ತೀರ್ಮಾನಿಸಲಾಗಿದೆ.
ಕಾಂಗ್ರೆಸ್‌ಗೆ ಬೇಳೂರು
ಸಾಗರ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ವಂಚಿತ ಬೇಳೂರು ಗೋಪಾಲಕೃಷ್ಣ ಕಾಂಗ್ರೆಸ್ ಸೇರಲು ನಿರ್ಧರಿಸಿದ್ದಾರೆ. ಶನಿವಾರ ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯ ಕೈ ಉಸ್ತುವಾರಿ ವೇಣುಗೋಪಾಲ್ ಜತೆ ಚರ್ಚಿಸಿ ಈ ತೀರ್ಮಾನಕ್ಕೆ ಬಂದಿದ್ದಾರೆ.
ಸೋಮಣ್ಣ ಪುತ್ರನಿಂದ ಟಿಕೆಟ್ ತ್ಯಾಗ?
ಈ ನಡುವೆ ಅರಸೀಕೆರೆ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಪಡೆದಿರುವ ಮಾಜಿ ಸಚಿವ ವಿ.ಸೋಮಣ್ಣ ಪುತ್ರ ಡಾ| ಅರುಣ್ ಸೋಮಣ್ಣ ಸ್ಪರ್ಧಿಸಲು ನಿರಾಕರಿಸುತ್ತಿದ್ದಾರೆ ಎನ್ನಲಾಗುತ್ತಿದ್ದು, ಇಲ್ಲಿ ಬಸವರಾಜ್‌ಗೆ ಬಿಜೆಪಿ ಟಿಕೆಟ್ ನೀಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ವಿ. ಸೋಮಣ್ಣ ಅವರಿಗೆ ಗೋವಿಂದರಾಜನಗರ, ಅವರ ಕಟ್ಟಾ ಬೆಂಬಲಿಗ ರವೀಂದ್ರ ಅವರಿಗೆ ವಿಜಯ ನಗರ, ಲಕ್ಷ್ಮೀನಾರಾಯಣ ಅವರಿಗೆ ಚಾಮರಾಜಪೇಟೆ ಟಿಕೆಟ್ ದೊರೆತಿರುವುದರಿಂದ ಮೂರೂ ಕ್ಷೇತ್ರಗಳಲ್ಲಿ ಓಡಾಡಿ ಪಕ್ಷದ ಗೆಲುವಿಗೆ ಶ್ರಮಿಸಬೇಕೆಂಬ ಹಿನ್ನೆಲೆಯಲ್ಲಿ ಪುತ್ರ ಟಿಕೆಟ್ ತ್ಯಾಗ ಮಾಡಲು ನಿರ್ಧರಿಸಿದ್ದಾರೆ ಎಂದು ಹೇಳಲಾಗಿದೆ. ಮಧುಗಿರಿಯ ಟಿಕೆಟ್ ಪಡೆದಿರುವ ಹುಲಿ ನಾಯ್ಕರ್ ಸಹ ಸ್ಪರ್ಧೆಗೆ ಹಿಂದೇಟು ಹಾಕಿ ಬೇರೆಯವರಿಗೆ ಅವಕಾಶ ಕೊಡಿ ಎಂದಿದ್ದಾರೆ.
ಐದು ಕ್ಷೇತ್ರಗಳಿಗೆ ಕೈ ಟಿಕೆಟ್
ನಾಗಠಾಣ ಕ್ಷೇತ್ರದಲ್ಲಿ ಹಾಲಿ ಶಾಸಕ ರಾಜು ಅಲಗೂರು ಬದಲು ಬಿಜೆಪಿಯಿಂದ ವಲಸೆ ಬಂದ ಮಾಜಿ ಶಾಸಕ ವಿಠಲ್ ಕಟಕದೊಂಡ ಅವರಿಗೆ ಟಿಕೆಟ್ ನೀಡಲು ತೀರ್ಮಾನಿಸ ಲಾಗಿದೆ. ಅದೇ ರೀತಿ ರಾಯಚೂರು ಗ್ರಾಮೀಣ ಕ್ಷೇತ್ರದಿಂದ ಸಿ.ಕೆ.ಜಾಫರ್ ಷರೀಫ್ ಅಳಿಯ ಸೈಯದ್ ಯಾಸೀನ್, ಶಾಂತಿನಗರದಿಂದ ಹ್ಯಾರೀಸ್, ಕಿತ್ತೂರಿನಿಂದ ಹಾಲಿ ಶಾಸಕ ಡಿ.ಬಿ. ಇನಾಂದಾರ್, ಸಿಂಧಗಿಯಿಂದ ಶಾಣಪ್ಪ ಸುಣಗಾರ ಅವರಿಗೆ ಟಿಕೆಟ್ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.