ಯಾವ ನೈತಿಕತೆ ಆಧಾರದಲ್ಲಿ ಆರಗ ಜ್ಞಾನೇಂದ್ರ ಗೃಹ ಸಚಿವರಾಗಿ ಮುಂದುವರಿದಿದ್ದಾರೆ?:ಸಿದ್ದರಾಮಯ್ಯ
Team Udayavani, Apr 30, 2022, 11:40 AM IST
ಬೆಂಗಳೂರು: ಪಿಎಸ್‌ಐ ನೇಮಕಾತಿ ಪರೀಕ್ಷೆಯನ್ನು ರದ್ದುಗೊಳಿಸುವ ಮೂಲಕ ನಡೆದಿರುವ ಅಕ್ರಮವನ್ನು ಒಪ್ಪಿಕೊಂಡ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಯಾವ ನೈತಿಕತೆ ಆಧಾರದಲ್ಲಿ ಗೃಹ ಸಚಿವ ಸ್ಥಾನದಲ್ಲಿ ಮುಂದುವರಿಯಲು ಸಾಧ್ಯ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಹಗರಣದ ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕಾದರೆ ಆರೋಪಿ ಅಧಿಕಾರಿಗಳಿಗೆ ರಕ್ಷಣೆ ನೀಡುತ್ತಿರುವ, ಸಾಲು -ಸಾಲು ವೈಫಲ್ಯಗಳ ಸರದಾರ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಮುಖ್ಯಮಂತ್ರಿಗಳು ತಕ್ಷಣ ಸಂಪುಟದಿಂದ ಕಿತ್ತುಹಾಕಬೇಕು. ಭ್ರಷ್ಟರು, ಕೊಲೆಗಡುಕರು, ರೇಪಿಸ್ಟ್‌ಗಳನ್ನು ಸಮರ್ಥಿಸುವುದೇ ತನ್ನ ಕರ್ತವ್ಯ ಎಂದು ಗೃಹ ಸಚಿವರು ತಿಳಿದುಕೊಂಡಂತಿದೆ. ಇಂತಹ ವಿಫಲ, ನಿಷ್ಕ್ರಿಯ ‘ಚೌಕಿದಾರ’ನಿಂದ ಪೊಲೀಸ್ ಇಲಾಖೆಯೇ ಸುರಕ್ಷಿತವಾಗಿ ಇರಲಾರದು ಎಂದು ಅಭಿಪ್ರಾಯಪಟ್ಟಿದ್ದಾರೆ.
ಆರಗ ಜ್ಞಾನೇಂದ್ರ ಅವರೇ ಗೃಹಸಚಿವರಾಗಿದ್ದು ಪಿಎಸ್‌ಐ ನೇಮಕಾತಿ ಮರು ಪರೀಕ್ಷೆ ನಡೆದರೆ ಜ್ಞಾನೇಂದ್ರರಂತಹ ಅಸಮರ್ಥ, ಅಪ್ರಾಮಾಣಿಕ, ನಿಷ್ಕ್ರಿಯರೇ ಪಿಎಸ್ಐ ಗಳಾಗಿ ನೇಮಕಗೊಂಡರೂ ಆಶ್ಚರ್ಯವಿಲ್ಲ. ಪಿಎಸ್ಐ ನೇಮಕಾತಿಗೆ ಸರ್ಕಾರ ಯಾವ ಆಧಾರದಲ್ಲಿ ಮರುಪರೀಕ್ಷೆ ನಡೆಸುವ ತೀರ್ಮಾನ ಕೈಗೊಂಡಿದೆ ಎನ್ನುವುದನ್ನು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಬೇಕು. ಅಕ್ರಮ ನಡೆದಿರುವುದು ಸಿಐಡಿ ತನಿಖೆಯಿಂದ ಸಾಬೀತಾಗಿದೆಯೇ? ಹಾಗಿದ್ದರೆ ಆ ವರದಿ ಬಿಡುಗಡೆ ಮಾಡಿ ಎಂದು ಆಗ್ರಹಿಸಿದ್ದಾರೆ.
ಇದನ್ನೂ ಓದಿ:ಗಂಗಾವತಿಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಎಸಿಪಿ ಶಿವಕುಮಾರ್ ಎಸ್ ಎಂ ಹೃದಯಾಘಾತದಿಂದ ನಿಧನ
ಮರುಪರೀಕ್ಷೆಯ ನಿರ್ಧಾರ ಪ್ರಾಮಾಣಿಕ ಅಭ್ಯರ್ಥಿಗಳಿಗೆ ನ್ಯಾಯ ಕೊಡಿಸಲಿಕ್ಕಾಗಿಯೇ? ಇಲ್ಲವೇ ಹಗರಣವನ್ನು ಮುಚ್ಚಿಹಾಕಿ ದೊಡ್ಡ ತಲೆಗಳನ್ನು ಉಳಿಸಲಿಕ್ಕಾಗಿಯೇ? ಪಿಎಸ್ಐ ನೇಮಕಾತಿ ಹಗರಣದ ಸೂತ್ರಧಾರಿ ದಿವ್ಯಾ ಹಾಗರಗಿ ಬಂಧನವಾದ ತಕ್ಷಣ ಮರುಪರೀಕ್ಷೆಯ ನಿರ್ಧಾರದ ಹಿಂದಿನ ರಹಸ್ಯ ಏನು? ಆಕೆ ನೀಡಿರುವ ಹೇಳಿಕೆಯಲ್ಲಿ ಅಂತಹ ಸ್ಪೋಟಕ ಸಂಗತಿಗಳೇನಿದೆ? ಈ ಹಗರಣವನ್ನು ನಮ್ಮ ಪಕ್ಷ ಬಯಲಿಗೆಳೆದಾಗ ಬಾಯಿಗೆ ಬಂದಂತೆ ತಲೆಗೊಬ್ಬರಂತೆ ಮಾತನಾಡಿದ್ದ ಬಿಜೆಪಿ ನಾಯಕರು ಈಗ ಯಾವ ಬಿಲದಲ್ಲಿ ಅಡಗಿದ್ದಾರೆ? ಎಂದು ವ್ಯಂಗ್ಯವಾಡಿದ್ದಾರೆ.
ರಾಜ್ಯ ಸರ್ಕಾರವೇ ಅಡಿಯಿಂದ ಮುಡಿವರೆಗೆ ಭ್ರಷ್ಟಗೊಂಡಿರುವಾಗ ಪಿಎಸ್‌ಐ ನೇಮಕಾತಿ ಹಗರಣದ ಸಿಐಡಿ ತನಿಖೆ ನಿಷ್ಪಕ್ಷಪಾತವಾಗಿ ನಡೆಯಲಾರದು. ಹೈಕೋರ್ಟ್ ನ್ಯಾಯಾಧೀಶರ ಮೇಲುಸ್ತುವಾರಿಯ ತನಿಖೆಯೊಂದೇ ಪರಿಹಾರ. ಭ್ರಷ್ಟಾಚಾರ, ಅಪ್ರಾಮಾಣಿಕತೆ ಮತ್ತು ನಿಷ್ಕ್ರಿಯತೆಯನ್ನು ಪ್ರಶ್ನಿಸದೆ ಇದ್ದರೆ ಕೊನೆಗೆ ಈ ಪಿಡುಗಿಗೆ ಬಹುಸಂಖ್ಯೆಯಲ್ಲಿರುವ ಪ್ರಾಮಾಣಿಕರೇ ಕಷ್ಟ-ನಷ್ಟ ಅನುಭವಿಸಬೇಕಾಗುತ್ತದೆ ಎನ್ನುವುದಕ್ಕೆ ಪಿಎಸ್‌ಐ ನೇಮಕಾತಿ ಅಕ್ರಮ ಸಾಕ್ಷಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.