Siddaramaiah ಅವರಿಗೆ ಸುಳ್ಳು ಹೇಳುವುದರಲ್ಲಿ ಡಾಕ್ಟರೇಟ್ ಕೊಡಬೇಕು: ರೇಣುಕಾಚಾರ್ಯ
ದಾವಣಗೆರೆಯಲ್ಲಿ ಯಾರೇ ಅಭ್ಯರ್ಥಿಯಾದರೂ...
Team Udayavani, Feb 10, 2024, 8:20 PM IST
ದಾವಣಗೆರೆ: ಕೇಂದ್ರ ಸರಕಾರದ ವಿರುದ್ಧ ಸುಳ್ಳಿನ ಪತ್ರ ಬಿಡುಗಡೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸುಳ್ಳು ಹೇಳುವುದರಲ್ಲಿ ಡಾಕ್ಟರೇಟ್ ಕೊಡಬೇಕು ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ವ್ಯಂಗ್ಯವಾಡಿದರು.
ಅವರು ಶನಿವಾರ ಸಂಜೆ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ 40 ಪರ್ಸೆಂಟ್ ಸರ್ಕಾರ ಎಂದು ಆರೋಪ ಮಾಡಿದ್ದಾರೆ. ಬಿಜೆಪಿ ಸರ್ಕಾರದ ವಿರುದ್ಧವೂ ಕೆಂಪಣ್ಣ ಆರೋಪ ಮಾಡಿದಾಗ ಪೇಸಿಎಂ ಅಭಿಯಾನ ಮಾಡಿ ಕಾಂಗ್ರೆಸ್ಸಿನವರು ಹೋರಾಟ ಮಾಡಿದ್ದರು.ಕೆಂಪಣ್ಣ ಆರೋಪಕ್ಕೆ ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ನೀಡಲೇಬೇಕು ಹಾಗೂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಸುಳ್ಳು ಗ್ಯಾರಂಟಿಗಳನ್ನು ನೀಡುವ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಽಕಾರಕ್ಕೆ ಬಂದಿದೆ. ಒಂಭತ್ತಜು ತಿಂಗಳಾದರೂ ಸರ್ಕಾರ ಟೇಕಾಫ್ ಆಗಿಲ್ಲ. ಬರ ಪರಿಹಾರ ನೀಡುವಲ್ಲಿ ಸರ್ಕಾರ ವಿಫಲವಾಗಿದೆ. ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ ಎಂದು ಕಾಂಗ್ರೆಸ್ ಶಾಸಕರೇ ಹೇಳುತ್ತಿದ್ದಾರೆ. ಎಲ್ಲ ಸಚಿವರೂ ಡಿಸಿಎಂ ಆಗಬೇಕು ಎನ್ನುತ್ತಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿ ಕಾಮಗಾರಿ ನಡೆಯುತ್ತಿಲ್ಲ. ಗ್ರಾಮೀಣ ಭಾಗದಲ್ಲಿ ಬಸ್ಗಳ ಕೊರತೆ ಇದ್ದು ಜನರು ಪರದಾಡುವಂತಾಗಿದೆ. ಯುವನಿಧಿ ಯೋಜನೆಯ ಹಣ ಇನ್ನೂ ಬಂದಿಲ್ಲ. ಒಟ್ಟಾರೆ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳು ಫೇಲ್ ಆಗಿವೆ ಎಂದರು.
ಇಂಡಿಯಾ ಒಕ್ಕೂಟ ಈಗಾಗಲೇ ಛಿದ್ರವಾಗಿದೆ. ಲೋಕಸಭಾ ಚುನಾವಣೆ ನಂತರ ರಾಜ್ಯ ಸರ್ಕಾರವೂ ಆಂತರಿಕ ಕಚ್ಚಾಟದಿಂದ ಪತನವಾಗಲಿದೆ. ಲೋಕಸಭೆ ಚುನಾವಣೆಗೆ ನಿಲ್ಲಿಸಲು ಕಾಂಗ್ರೆಸ್ನಲ್ಲಿ ಅಭ್ಯರ್ಥಿಗಳೇ ಇಲ್ಲ. ಸೋಲಿನ ಭೀತಿಯಿಂದ ಸ್ಪರ್ಧೆ ಮಾಡಲು ಎಲ್ಲರೂ ಹಿಂಜರಿಯುತ್ತಿದ್ದಾರೆ ಎಂದರು.
ಈಶ್ವರಪ್ಪ ಕಟ್ಟಾ ಹಿಂದುತ್ವವಾದಿ. ದೇಶ ವಿಭಜನೆ ಮಾಡಬೇಕು ಎಂದರೆ ಯಾರು ತಾನೆ ಸುಮ್ಮನಿರುತ್ತಾರೆ. ದೇಶದ್ರೋಹಿಗಳ ವಿರುದ್ಧ ಗುಂಡಿಕ್ಕುವ ಕಾನೂನು ತರಬೇಕು ಎಂದು ಮಾಜಿ ಈಶ್ವರಪ್ಪ ಹೇಳಿದ್ದಾರೆ. ಇದರಲ್ಲಿ ತಪ್ಪೇನಿದೆ ಎಂದು ಈಶ್ವರಪ್ಪ ಅವರು ನೀಡಿದ್ದ ಹೇಳಿಕೆಯನ್ನು ಸಮರ್ಥಿಸಿಕೊಂಡರು.
ಜಿಲ್ಲಾ ಬಿಜೆಪಿಯಲ್ಲಿ ಬಣ ರಾಜಕೀಯ ಇಲ್ಲ. ಲೋಕಸಭೆ ಚುನಾವಣೆಗೆ ಅಭ್ಯರ್ಥಿ ಯಾರು ಎಂಬುದನ್ನು ವರಿಷ್ಠರು ನಿರ್ಧರಿಸುತ್ತಾರೆ. ಯಾರೇ ಅಭ್ಯರ್ಥಿಯಾದರೂ ಎಲ್ಲರೂ ಒಮ್ಮತದಿಂದ ಅವರ ಪರ ಕೆಲಸ ಮಾಡುತ್ತೇವೆ ಎಂದರು.
ಬಿಜೆಪಿ ರೈತ ಮೋರ್ಚಾ ರಾಜ್ಯ ಘಟಕದ ಉಪಾಧ್ಯಕ್ಷ ಲೋಕಿಕೆರೆ ನಾಗರಾಜ್, ಮುಖಂಡರಾದ ಕೆ.ಪಿ. ಕಲ್ಲಿಂಗಪ್ಪ, ಮಂಜಣ್ಣ, ಪ್ರತಾಪ್, ಪ್ರವೀಣ್ ಜಾಧವ್ , ರಾಜು ವೀರಣ್ಣ ಸುದ್ದಿಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.