ಹೋರಾಟಗಾರರ ಪಟ್ಟಿಯಲ್ಲಿ ನೆಹರೂ ಹೆಸರು ಬಿಡುವಷ್ಟು ಕೀಳು ಮಟ್ಟಕ್ಕೆ ಇಳಿಯಬಾರದಿತ್ತು
ಸಿಎಂ ಬೊಮ್ಮಾಯಿ ವಿರುದ್ಧ ಕಿಡಿಕಾರಿದ ಸಿದ್ದರಾಮಯ್ಯ
Team Udayavani, Aug 14, 2022, 1:29 PM IST
ಬೆಂಗಳೂರು: “ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ರಾಜ್ಯ ಸರ್ಕಾರದ ಇಂದಿನ ಜಾಹೀರಾತಿನ ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ಮಾಜಿ ಪ್ರಧಾನಿ ಜವಾಹರಲಾಲ ನೆಹರೂ ಅವರ ಹೆಸರನ್ನು ಕೈಬಿಡುವಷ್ಟು ಕೀಳು ಮಟ್ಟಕ್ಕೆ ನೀವು ಇಳಿಯಬಾರದಿತ್ತು, ಕುರ್ಚಿ ಉಳಿಸಲು ಈ ಪರಿಯ ಗುಲಾಮಗಿರಿಯೇ?”. ಇದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಮಾತು.
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ರಾಜ್ಯ ಸರ್ಕಾರ ನೀಡಿದ ಜಾಹೀರಾತಿನಲ್ಲಿ ನೆಹರೂ ಚಿತ್ರ ಹಾಕದ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಬೊಮ್ಮಾಯಿಯವರೇ, ಪಂಡಿತ ಜವಾಹರಲಾಲ್ ನೆಹರೂ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿ ತಮ್ಮ ಬದುಕಿನ ಒಂಬತ್ತು ವರ್ಷಗಳನ್ನು ಜೈಲಿನಲ್ಲಿ ಕಳೆದವರು ಎನ್ನುವುದು ನೆನಪಿರಲಿ. ಅವರು ನಿಮ್ಮ ವಿ.ಡಿ.ಸಾವರ್ಕರ್ ಅವರಂತೆ ಜೈಲಿನಿಂದ ಬಿಡುಗಡೆಗೊಳ್ಳಲು ಬ್ರಿಟಿಷರ ಕಾಲು ಹಿಡಿದು ಕ್ಷಮೆ ಕೋರಿದ ಹೇಡಿ ಅಲ್ಲ. ಆರ್ ಎಸ್ಎಸ್ ಕೋಮು ರಾಜಕಾರಣವನ್ನು ವಿರೋಧಿಸಿದ್ದ, ಗಾಂಧಿ ಹತ್ಯೆಯ ನಂತರ ಅದನ್ನು ನಿಷೇಧಿಸಿದ್ದ ಮತ್ತು ತನ್ನ ಬದುಕನ್ನು ಜಾತ್ಯತೀತತೆ ಕಾಪಾಡಲು ಮುಡಿಪಾಗಿಟ್ಟಿದ್ದ ಜವಾಹರಲಾಲ್ ನೆಹರೂ ಅವರ ಬಗ್ಗೆ ಆರ್ ಎಸ್ಎಸ್ ಅಲರ್ಜಿಯನ್ನು ಅರ್ಥ ಮಾಡಿಕೊಳ್ಳಬಹುದು, ನಿಮಗೇನಾಗಿದೆ ಬೊಮ್ಮಾಯಿ ಎಂದು ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.
ಇದನ್ನೂ ಓದಿ:ಉದಯವಾಣಿ ದಾವಣಗೆರೆ ಆವೃತ್ತಿಯ ದಶಮಾನೋತ್ಸವ ವಿಶೇಷ ಸಂಚಿಕೆ ಬಿಡುಗಡೆ ಮಾಡಿದ ಸಿಎಂ ಬೊಮ್ಮಾಯಿ
ರಾಜ್ಯ ಸರ್ಕಾರದ ಜಾಹೀರಾತಿನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ನಮೂದಿಸಲು ನಿಮಗೆ ಸಿಕ್ಕ ಏಕೈಕ ವ್ಯಕ್ತಿ ಜೈಲಿನಿಂದ ಬಿಡುಗಡೆಗೊಳ್ಳಲು ಬ್ರಿಟಿಷರ ಕ್ಷಮೆ ಯಾಚಿಸಿದ್ದ ಹೇಡಿ ವಿ.ಡಿ.ಸಾವರ್ಕರ್ ಮಾತ್ರ ಎನ್ನುವುದು ನಿಮ್ಮ ಪರಿವಾರದ ಸ್ವಾತಂತ್ರ್ಯ ಹೋರಾಟದ ಸತ್ಯವನ್ನು ಬೆತ್ತಲೆ ಮಾಡಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿ ಎರಡು ಬಾರಿ (1921 ಮತ್ತು 1931) ಜೈಲುಶಿಕ್ಷೆ ಅನುಭವಿಸಿದ್ದ ಆರ್ ಎಸ್ ಎಸ್ ಸಂಸ್ಥಾಪಕ ಕೆ.ಬಿ.ಹೆಡಗೆವಾರ್ ಅವರ ಚಿತ್ರವನ್ನು ಯಾಕೆ ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಿಂದ ಕೈಬಿಟ್ಟಿದ್ದೀರಿ ಬೊಮ್ಮಾಯಿ ಅವರೇ? ತ್ರಿವರ್ಣ ಧ್ವಜವನ್ನು ತಿರಸ್ಕರಿಸಿದ್ದ ಅವರ ಬಂಡವಾಳ ಬಯಲಾಗಬಹುದೆಂಬ ಭಯವೇ ಎಂದು ಕೇಳಿದ್ದಾರೆ.
ಬ್ರಿಟಿಷರ ಕ್ಷಮೆ ಕೇಳಿ ಜೈಲಿನಿಂದ ಬಿಡುಗಡೆಗೊಂಡ ವಿ.ಡಿ.ಸಾವರ್ಕರ್ ಅವರಿಗೆ ಮೊದಲ ಸಾಲಿನ ಗೌರವ, ಸ್ವಾತಂತ್ರ್ಯ ಹೋರಾಟದ ಜೊತೆ ಬಹುಜನ ಸಮಾಜದ ಹಿತಾಸಕ್ತಿಯ ರಕ್ಷಣೆಗಾಗಿಯೂ ಹೋರಾಟ ನಡೆಸಿದ್ದ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಕೊನೆಯ ಸಾಲಿನ ನಿರ್ಲಕ್ಷ್ಯ. ‘ಸುಪ್ತ ಅಸ್ಪೃಶ್ಯತೆಯ ನಗ್ನ ಪ್ರದರ್ಶನ’. ಬೊಮ್ಮಾಯಿ ಅವರೇ, ಜನರ ತೆರಿಗೆ ಹಣದಿಂದ ನೀಡಿರುವ ಜಾಹೀರಾತಿನಲ್ಲಿ ಧೀಮಂತ ಸ್ವಾತಂತ್ರ್ಯ ಹೋರಾಟಗಾರ ಪಂಡಿತ ಜವಾಹರಲಾಲ ನೆಹರೂ ಅವರಿಗೆ ಮಾಡಿರುವ ಅವಮಾನವನ್ನು ಸಹಿಸಲಾಗದು. ಈ ಅವಮಾನಕ್ಕಾಗಿ ಮೊದಲು ರಾಜ್ಯದ ಜನತೆಯ ಕ್ಷಮೆ ಕೇಳಿ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಆರ್ ಎಸ್ ಎಸ್ ಕೋಮುರಾಜಕಾರಣವನ್ನು ವಿರೋಧಿಸಿದ್ದ, ಗಾಂಧಿ ಹತ್ಯೆಯ ನಂತರ ಅದನ್ನು ನಿಷೇಧಿಸಿದ್ದ ಮತ್ತು ತನ್ನ ಬದುಕನ್ನು ಜಾತ್ಯತೀತತೆ ಕಾಪಾಡಲು ಮುಡಿಪಾಗಿಟ್ಟಿದ್ದ ಜವಾಹರಲಾಲ್ ನೆಹರೂ ಅವರ ಬಗ್ಗೆ ಆರ್ ಎಸ್ ಎಸ್ ಅಲರ್ಜಿಯನ್ನು ಅರ್ಥಮಾಡಿಕೊಳ್ಳಬಹುದು, ನಿಮಗೇನಾಗಿದೆ @BSBommai?
3/7 pic.twitter.com/w7RNkVakqY— Siddaramaiah (@siddaramaiah) August 14, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.