ಚಾಮರಾಜನಗರ ಘಟನೆಯ ನಂತರವೂ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿಲ್ಲ: ಸಿದ್ದರಾಮಯ್ಯ
Team Udayavani, May 13, 2021, 3:20 PM IST
ಬೆಂಗಳೂರು: ಬೆಂಗಳೂರು ನಗರಕ್ಕೆ ಹೋಲಿಸಿದರೆ ಜಿಲ್ಲೆಗಳಲ್ಲಿ ವೈದ್ಯಕೀಯ ಚಿಕಿತ್ಸಾ ವ್ಯವಸ್ಥೆಯ ತೀವ್ರ ಕೊರತೆಯಿರುವುದು ಕೋವಿಡ್ ಮೊದಲ ಅಲೆಯ ಸಂದರ್ಭದಲ್ಲಿಯೇ ಜಗಜ್ಜಾಹೀರಾಗಿದೆ. 25 ಅಮಾಯಕರನ್ನು ಬಲಿ ತೆಗೆದುಕೊಂಡ ಚಾಮರಾಜನಗರ ಜಿಲ್ಲೆಯ ದುರಂತ ಘಟನೆಯ ನಂತರವೂ ರಾಜ್ಯ ಬಿಜೆಪಿ ಸರ್ಕಾರ ಎಚ್ಚೆತ್ತುಕೊಂಡಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕೋವಿಡ್ ಸೋಂಕು ತ್ವರಿತ ಗತಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಹರಡುತ್ತಿರುವುದು ಆಘಾತಕಾರಿ ಬೆಳವಣಿಗೆ. ರಾಜ್ಯದಲ್ಲಿ ಈಗಿನ ಶೇಕಡಾ 55ರಷ್ಟು ಸೋಂಕಿನ ಪ್ರಕರಣಗಳು ಗ್ರಾಮೀಣ ಪ್ರದೇಶದಿಂದ ವರದಿಯಾಗುತ್ತಿರುವುದನ್ನು ತಜ್ಞರು ಗುರುತಿಸಿದ್ದಾರೆ. ತಿಂಗಳ ಹಿಂದೆ ಈ ಪ್ರಮಾಣ ಶೇಕಡಾ 30 ರಷ್ಟಿತ್ತು. ರಾಜ್ಯ ಬಿಜೆಪಿ ಸರ್ಕಾರ ಬೆಂಗಳೂರು ನಗರಕ್ಕಷ್ಟೇ ಸೀಮಿತವಾಗದೆ ಜಿಲ್ಲೆ, ತಾಲೂಕು, ಗ್ರಾಮಗಳ ಕಡೆ ಗಮನಹರಿಸಬೇಕಾಗಿದೆ. ಈಗಲೂ ಕಾಲ ಮಿಂಚಿಲ್ಲ, ರಾಜ್ಯ ಸರ್ಕಾರ ತಕ್ಷಣ ಎಚ್ಚೆತ್ತುಕೊಂಡು ಗ್ರಾಮೀಣ ಪ್ರದೇಶದ ಆಸ್ಪತ್ರೆಗಳಲ್ಲಿ ಹಾಸಿಗೆ, ಆಮ್ಲಜನಕ, ಐಸಿಯು, ವೆಂಟಿಲೇಟರ್ ಮತ್ತು ವೈದ್ಯಕೀಯ ಸಿಬ್ಬಂದಿಯ ವ್ಯವಸ್ಥೆಯನ್ನು ಬಲಪಡಿಸಬೇಕು ಎಂದಿದ್ದಾರೆ.
ಇದನ್ನೂ ಓದಿ:ಯಾರೋ ಸೋತವರು ದೆಹಲಿಗೆ ಹೋದ ತಕ್ಷಣ ಮುಖ್ಯಮಂತ್ರಿ ಬದಲಾವಣೆ ಮಾಡಲ್ಲ: ರೇಣುಕಾಚಾರ್ಯ
ಜಿಲ್ಲೆಗಳಲ್ಲಿ ಕೋವಿಡ್ ಚಿಕಿತ್ಸೆ ಮತ್ತು ನಿಯಂತ್ರಣ ವ್ಯವಸ್ಥೆಯ ಹೊಣೆಯನ್ನು ಜಿಲ್ಲಾ ಉಸ್ತುವಾರಿ ಸಚಿವರಿಗೆ ವಹಿಸಿಕೊಡಬೇಕು. ಉಸ್ತುವಾರಿ ಸಚಿವರು ಜಿಲ್ಲೆಯಲ್ಲಿಯೇ ಮೊಕ್ಕಾಂ ಹೂಡಿ ಮೇಲ್ವಿಚಾರಣೆ ನಡೆಸುವಂತೆ ರಾಜ್ಯ ಬಿಜೆಪಿ ಸರ್ಕಾರ ಅವರಿಗೆ ತಾಕೀತು ಮಾಡಬೇಕು ಎಂದಿದ್ದಾರೆ.
ಕೋವಿಡ್ ಮೊದಲ ಅಲೆಯ ಸಂದರ್ಭದಲ್ಲಿ ಜಿಲ್ಲಾ ಮಟ್ಟದಲ್ಲಿ ಅನುಸರಿಸಲಾಗಿದ್ದ ಸುರಕ್ಷತಾ ಕ್ರಮಗಳನ್ನು ಎರಡನೇ ಅಲೆ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಸರ್ಕಾರ ಮತ್ತು ಜಿಲ್ಲಾಡಳಿತ ಸಂಪೂರ್ಣವಾಗಿ ನಿರ್ಲಕ್ಷಿಸಿರುವುದು ಕೂಡಾ ಗ್ರಾಮೀಣ ಪ್ರದೇಶಗಳಲ್ಲಿ ಸೋಂಕು ಉಲ್ಭಣಗೊಳ್ಳಲು ಕಾರಣ. ಕಳೆದೆರಡು ತಿಂಗಳ ಅವಧಿಯಲ್ಲಿ ಹೆಚ್ಚು ಸೋಂಕಿನ ಪ್ರಕರಣಗಳಿದ್ದ ಮಹಾರಾಷ್ಟ್ರ ಸೇರಿದಂತೆ ಬೇರೆ ರಾಜ್ಯಗಳಿಂದ ಜನ ಯಾವುದೇ ತಪಾಸಣೆಯಿಲ್ಲದೆ ಇಲ್ಲಿಗೆ ಬಂದಿದ್ದಾರೆ. ಬೆಂಗಳೂರಿನ ಸ್ಥಿತಿ ಬಿಗಡಾಯಿಸಿದ ನಂತರ ಅಲ್ಲಿಂದಲೂ ಜನ ಹಿಂಡುಗಟ್ಟಿಕೊಂಡು ಜಿಲ್ಲೆಗಳಿಗೆ ತೆರಳಿದ್ದಾರೆ. ಅಂತರರಾಜ್ಯ ಮಾತ್ರವಲ್ಲ ಅಂತರಜಿಲ್ಲಾ ಸಂಚಾರವನ್ನು ನಿರ್ಬಂಧಿಸಬೇಕು ಎಂದು ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.