Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು
Team Udayavani, May 2, 2024, 11:30 PM IST
ಶಿವಮೊಗ್ಗ: ಲೋಕಸಭೆಯಲ್ಲಿ ಕರ್ನಾ ಟಕದ ಧ್ವನಿಯಾಗಿ ಕೆಲಸ ಮಾಡುವಂಥವರನ್ನು ಮತದಾರರು ಆಯ್ಕೆ ಮಾಡಬೇಕು. ಕಳೆದ ಬಾರಿ ರಾಜ್ಯದಿಂದ 25 ಸಂಸದರು ಬಿಜೆಪಿಯಿಂದ ಆಯ್ಕೆಯಾದರು. ಆದರೆ ಯಾರೂ ಕೇಂದ್ರದಿಂದ ಕನ್ನಡಿಗರಿಗೆ ಆದ ಅನ್ಯಾಯದ ಬಗ್ಗೆ ಮಾತ ನಾಡಲಿಲ್ಲ. ಚುನಾವಣೆ ವೇಳೆ ಮಾತ್ರ ಮೋದಿಗೆ ಕರ್ನಾಟಕ ನೆನಪಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.
ಇಲ್ಲಿನ ಅಲ್ಲಮಪ್ರಭು ಮೈದಾನದಲ್ಲಿ ಆಯೋಜಿಸಿದ್ದ ಪ್ರಜಾಧ್ವನಿ ಯಾತ್ರೆ-2 ಕಾರ್ಯಕ್ರಮಲ್ಲಿ ಮಾತನಾ ಡಿದ ಅವರು, ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ. ರಾಜ್ಯಕ್ಕೆ ನಿರಂ ತರ ಅನ್ಯಾಯ ಆಗುತ್ತಿದ್ದರೂ ರಾಜ್ಯದ ಪರವಾಗಿ ಸಂಸತ್‌ನಲ್ಲಿ ನೆಪಕ್ಕೂ ಬಾಯಿ ಬಿಡದ ಬಿ.ವೈ.ರಾಘವೇಂದ್ರ ಸಂಸದರಾಗಿದ್ದೇ ವೇಸ್ಟ್. ಬಿಜೆಪಿ ಯಿಂದ ಗೆದ್ದ 25 ಮಂದಿ ಸಂಸದರು ರಾಜ್ಯದ ಪರವಾಗಿ ಯಾವತ್ತೂ ಧ್ವನಿ ಎತ್ತಲಿಲ್ಲ. ಇಂಥವರನ್ನು ಗೆಲ್ಲಿಸಿದರೆ ಯಾರಿಗೂ ಪ್ರಯೋಜನವಿಲ್ಲ ಎಂದರು.
ಬರಗಾಲ, ಪ್ರವಾಹ ಬಂದಾಗ ಮೋದಿಗೆ ಕರ್ನಾಟಕ ನೆನಪಾಗಿಲ್ಲ. ಚುನಾವಣೆ ಬಂದಾಗ ಬರುತ್ತಾರೆ. ರಾಜ್ಯ ನೆನಪಾಗಲಿಲ್ಲ. ರಾಜ್ಯಕ್ಕೆ ಮೋದಿ ನಿರಂತರವಾಗಿ ಅನ್ಯಾಯ ಮಾಡುತ್ತಿದ್ದಾರೆ. ಅವರು ದ್ವೇಷದ ರಾಜಕಾರಣ ಮಾಡಿ, ಮಲತಾಯಿ ಧೋರಣೆಯನ್ನು ತೋರುತ್ತಿದ್ದಾರೆ. ಪ್ರವಾಹ ಅಥವಾ ಬರಗಾಲ ಬಂದಾಗ ರಾಜ್ಯಕ್ಕೆ ಬಂದು ಜನರ ಕಷ್ಟ-ಸುಖ ಕೇಳುವ ಪ್ರಯತ್ನವನ್ನೂ ಮೋದಿ ಮಾಡಲೇ ಇಲ್ಲ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ ಗೆಲುವು ಸಾಧಿ ಸಲಿದ್ದಾರೆ ಎಂಬ ನಂಬಿಕೆ ಇದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.