ತಿಳಿಗೇಡಿ ಯುವಕನಿಂದ ಪಠ್ಯ ಪರಿಷ್ಕರಣೆ ಮಾಡಿಸಿದ್ದಾರೆ: ಸಿದ್ದರಾಮಯ್ಯ ಕಿಡಿ
ಹೆಡಗೆವಾರ್, ಗೋಲ್ವಾಲ್ಕರ್, ಗೋಡ್ಸೆಯನ್ನು ಬೇಕಾದರೆ ಬಿಜೆಪಿ ವೇದಿಕೆಯಲ್ಲಿ ಮೆರೆದಾಡಿಸಲಿ..
Team Udayavani, May 18, 2022, 3:21 PM IST
ಬೆಂಗಳೂರು: ಹೆಡಗೆವಾರ್, ಗೋಲ್ವಾಲ್ಕರ್, ಗೋಡ್ಸೆ ಮೊದಲಾದವರನ್ನು ತಮ್ಮ ಪಕ್ಷದ ವೇದಿಕೆಯಲ್ಲಿ ಬೇಕಾದರೆ ಬಿಜೆಪಿಯವರು ಮೆರೆದಾಡಿಸಲಿ. ಇವರ ಚಿತ್ರಗಳನ್ನೇ ಪ್ರದರ್ಶಿಸಿ ಚುನಾವಣೆಗಳಲ್ಲಿ ಮತಕೇಳಲಿ, ಪ್ರಜ್ಞಾವಂತ ಜನರು ತಪ್ಪು-ಸರಿಗಳನ್ನು ನಿರ್ಧರಿಸುತ್ತಾರೆ. ಶಿಕ್ಷಣ ಕ್ಷೇತ್ರವನ್ನು ರಾಜಕೀಯ ಸ್ವಾರ್ಥಕ್ಕಾಗಿ ಬಲಿಕೊಡಬೇಡಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಈ ಸಂಬಂಧ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಪಠ್ಯಪುಸ್ತಕ ಪರಿಷ್ಕರಣೆ ಬಗ್ಗೆ ಕೇಳಿ ಬರುತ್ತಿರುವ ಆಕ್ಷೇಪಗಳ ಹಿನ್ನೆಲೆಯಲ್ಲಿ ಪರಿಷ್ಕೃತ ಪಠ್ಯದ ಮುದ್ರಣವನ್ನು ತಕ್ಷಣ ತಡೆಹಿಡಿದು ರಾಜ್ಯದ ಶಿಕ್ಷಣ ತಜ್ಞರು, ಸಾಹಿತಿಗಳು ಮತ್ತು ಚಿಂತಕರ ಜೊತೆ ಸಮಾಲೋಚನೆ ನಡೆಸಿ ಮುಂದಿನ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಪಠ್ಯಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳೇ ನಿಜವೆಂದಾದರೆ ಇದು ಅಕ್ಷಮ್ಯ ಅಪರಾಧ. ಈ ಹಿನ್ನೆಲೆಯಲ್ಲಿ ಅನಗತ್ಯ ಊಹಾಪೋಹ ಮತ್ತು ಸಂಘರ್ಷಕ್ಕೆ ಅವಕಾಶ ನೀಡದೆ ಮುಖ್ಯಮಂತ್ರಿಗಳೇ ಖುದ್ದಾಗಿ ಸ್ಪಷ್ಟೀಕರಣ ನೀಡಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ರಾಷ್ಟ್ರ-ಅಂತಾರಾಷ್ಟ್ರೀಯ ಮಟ್ಟದಲ್ಲಿ ಗೌರವಕ್ಕೆ ಪಾತ್ರರಾಗಿರುವ ಸಾಹಿತಿಗಳು, ಚಿಂತಕರು ಮತ್ತು ಶಿಕ್ಷಣ ತಜ್ಞರಿರುವಾಗ ಸಂಘ ಪರಿವಾರಕ್ಕೆ ಸೇರಿದ ತಿಳಿಗೇಡಿ ಯುವಕನಿಂದ ಪಠ್ಯಪರಿಷ್ಕರಣೆ ಮಾಡಿಸಿರುವುದು ರಾಜ್ಯದ ಜನತೆಗೆ ಮಾಡಿರುವ ಅವಮಾನ ಎಂದು ಅಭಿಪ್ರಾಯಪಟ್ಟರು
ಇದನ್ನೂ ಓದಿ : ಮತಾಂತರ ನಿಷೇಧದ ಸುಗ್ರೀವಾಜ್ಞೆಯು ಉದ್ಯೋಗಗಳನ್ನು ಸೃಷ್ಟಿಸುವುದೇ?: ಡಿಕೆಶಿ ಪ್ರಶ್ನೆ
ಪಠ್ಯಪುಸ್ತಕ ಪರಿಷ್ಕರಣೆಯ ವಿವಾದದಿಂದಾಗಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕ ತಲೆ ತಗ್ಗಿಸುವಂತಾಗಿದೆ. ಪಠ್ಯಪುಸ್ತಕ ಪರಿಷ್ಕರಣೆಯಂತಹ ಗಂಭೀರ ಕಾರ್ಯವನ್ನು ನಾಡಿನ ಹಿರಿಯ ಲೇಖಕರು, ಸಮಾಜ ಸುಧಾರಕರನ್ನು ಅವಹೇಳನ ಮಾಡುತ್ತಾ ಬಂದಿರುವ ಅನರ್ಹ, ಪೂರ್ವಗ್ರಹ ಪೀಡಿತ ವ್ಯಕ್ತಿಯಿಂದ ಮಾಡಿಸಿರುವುದೇ ನಾಡು-ನುಡಿಗೆ ಬಗೆದಿರುವ ದ್ರೋಹ. ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ನೀಡಿರುವ ಕರಡನ್ನು ತಕ್ಷಣ ವಾಪಸು ಪಡೆದು ಸಮಿತಿಯನ್ನು ಬರ್ಖಾಸ್ತುಗೊಳಿಸಬೇಕು ಮತ್ತು ನಾಡಿನ ಚಿಂತಕರು ಮತ್ತು ಶಿಕ್ಷಣ ತಜ್ಞರ ಜೊತೆ ಸಮಾಲೋಚನೆ ನಡೆಸಿ ಹೊಸ ಸಮಿತಿಯನ್ನು ರಚಿಸಬೇಕು ಎಂದು ಒತ್ತಾಯಿಸಿದ್ದಾರೆ.
ಧರ್ಮವನ್ನು ರಾಜಕೀಯ ದುರುದ್ದೇಶಕ್ಕೆ ಬಳಸಿ ಅದಕ್ಕೆ ಇರುವ ಪಾವಿತ್ರ್ಯವನ್ನು ಹಾಳುಗೆಡಹಿದ ಬಿಜೆಪಿ ಈಗ ಎಳೆಯ ಮಕ್ಕಳ ಬುದ್ದಿಕೆಡಿಸುವ ಮೂಲಕ ಶಿಕ್ಷಣ ಕ್ಷೇತ್ರವನ್ನು ರಾಜಕೀಯದ ಅಖಾಡ ಮಾಡಲು ಹೊರಟಿರುವುದು ಖಂಡನೀಯ. ನಾಡಿನ ಪ್ರಜ್ಞಾವಂತರೆಲ್ಲರೂ ಇದರ ವಿರುದ್ಧ ದನಿ ಎತ್ತಬೇಕಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ರಾಜಕೀಯ ಪಕ್ಷಗಳಿಗೆ ತಮಗೆ ಸರಿಕಂಡ ವ್ಯಕ್ತಿಗಳನ್ನು ಆರಾಧಿಸುವ, ಅವರ ಚಿಂತನೆಗಳನ್ನು ಪ್ರಚಾರಮಾಡುವ ಅಧಿಕಾರವಿದೆ, ಆದರೆ ಶಿಕ್ಷಣ ಕ್ಷೇತ್ರವನ್ನು ಸ್ವಾರ್ಥ ರಾಜಕೀಯದ ರಾಡಿಯಿಂದ ಮಲಿನಗೊಳಿಸ ಬಾರದು. ಬುದ್ದ, ಬಸವಣ್ಣ, ಅಂಬೇಡ್ಕರ್, ನಾರಾಯಣ ಗುರುಗಳು ಜಾತಿ,ಧರ್ಮ, ಪಕ್ಷ, ಪಂಥಗಳನ್ನು ಮೀರಿದ ಚೇತನಗಳು. ಇವರನ್ನು ಸ್ವಾರ್ಥ ರಾಜಕೀಯಕ್ಕೆ ದುರ್ಬಳಕೆ ಮಾಡಬಾರದು. ರಾಜಕೀಯ ದುರುದ್ದೇಶದಿಂದ ಮಾಡುವ ಈ ರೀತಿಯ ಅವಮಾನವನ್ನು ಸಹಿಸಲಾಗದು ಎಂದು ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.