2023ರ ವಿಧಾನಸಭೆ ಚುನಾವಣೆಗೆ ಕಾರ್ಯತಂತ್ರ: ಸೋನಿಯಾಗೆ ನೀಲನಕ್ಷೆ ಸಲ್ಲಿಸಿದ ಸಿದ್ದರಾಮಯ್ಯ
Team Udayavani, Oct 7, 2021, 10:24 AM IST
ಬೆಂಗಳೂರು: ರಾಜ್ಯದಲ್ಲಿ ಮುಂದಿನ ವಿಧಾನಸಭೆ ಚುನಾವಣೆಗೆ ಯಾವ ರೀತಿಯ ಕಾರ್ಯತಂತ್ರ ರೂಪಿಸಬಹುದು ಎಂಬ ಬಗ್ಗೆ ಸೋನಿಯಾ ಗಾಂಧಿಯವರಿಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನೀಲನಕ್ಷೆ ಸಲ್ಲಿಸಿ ಬಂದಿದ್ದಾರೆ.
ಕಳೆದ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ದೂರವಾಗಿರುವ ಮತ ಬ್ಯಾಂಕ್ ಮತ್ತೆ ಸೆಳೆಯುವ ನಿಟ್ಟಿನಲ್ಲಿ ಅನುಸರಿಸಬೇಕಾದ ಮಾರ್ಗಗಳ ಕುರಿತು ತಮ್ಮ ಅಭಿಪ್ರಾಯ ಹಾಗೂ ಯೋಜನೆ ಬಗ್ಗೆಯೂ ಸೋನಿಯಾ ಗಾಂಧಿಯವರ ಗಮನಕ್ಕೆ ತಂದಿದ್ದಾರೆ.
ಅಷ್ಟೇ ಅಲ್ಲದೆ, ಪಕ್ಷ ಸಂಘಟನೆ ಹಾಗೂ ಚುನಾವಣೆಗೆ ಸಜ್ಜಾಗುವ ನಿಟ್ಟಿನಲ್ಲಿ ಮುಂದಿನ ಏಪ್ರಿಲ್‌ನಿಂದ ರಾಜ್ಯ ಪ್ರವಾಸ ಹಾಗೂ ಸಮುದಾಯದವಾರು ಸಮಾವೇಶ ಕೈಗೊಳ್ಳುವ ಇಂಗಿತವನ್ನೂ ವ್ಯಕ್ತಪಡಿಸಿದರು ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.
ಕಾಂಗ್ರೆಸ್‌ನ ಸಾಂಪ್ರದಾಯಿಕ ದಲಿತ, ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ಮತ ವಿಭಜನೆಯಿಂದ ಎರಡು ಚುನಾವಣೆಗಳಲ್ಲಿ ಹಿನ್ನೆಡೆಯಾಗಿದ್ದು, ಮುಂದಿನ ಚುನಾವಣೆಯಲ್ಲಿ ಅದಕ್ಕೆ ಅವಕಾಶ ಇಲ್ಲದಂತೆ ಅಭ್ಯರ್ಥಿಗಳ ಆಯ್ಕೆಯಲ್ಲೂ ಎಚ್ಚರಿಕೆ ವಹಿಸಬೇಕಾಗಿದೆ ಎಂದು ಹೇಳಿದರು ಎನ್ನಲಾಗಿದೆ.
ಸ್ವಂತ ಸಾಮರ್ಥ್ಯ ಹಾಗೂ ಕ್ಷೇತ್ರಗಳಲ್ಲಿ ಪ್ರಭಾವ ಹೊಂದಿರುವ ಬಿಜೆಪಿ ಹಾಗೂ ಜೆಡಿಎಸ್‌ನ ಕೆಲವು ಶಾಸಕರು ಸಂಪರ್ಕದಲ್ಲಿದ್ದು ಕಾಂಗ್ರೆಸ್ ಸೇರ್ಪಡೆ ಮಾಡಿಕೊಂಡರೆ ಪಕ್ಷ ಅಧಿಕಾರಕ್ಕೆ ಬರಲು ಸಹಾಯವಾಗಬಹುದು ಎಂಬ ಮಾಹಿತಿ ಹಾಗೂ ಹೆಸರುಗಳನ್ನೂ ನೀಡಿದ್ದಾರೆ ಎಂದು ಹೇಳಲಾಗಿದೆ.
ಸೋನಿಯಾ ಸಲಹೆ: ಸಿದ್ದರಾಮಯ್ಯ ಅವರ ಅಭಿಪ್ರಾಯ ಆಲಿಸಿದ ಸೋನಿಯಾ ಗಾಂಧಿಯವರು ಅಹಿಂದ ವರ್ಗದ ಜತೆಗೆ ಮೇಲ್ವರ್ಗದ ಮತಬ್ಯಾಂಕ್ ಸೆಳೆಯುವ ನಿಟ್ಟಿನಲ್ಲಿ ಗಮನಹರಿಸಿ, ಕಳೆದ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಎಲ್ಲಿ ವ್ಯತ್ಯಾಸಗಳಾಗಿವೆ ಎಂಬುದನ್ನು ಪತ್ತೆ ಹಚ್ಚಿ ಸರಿಪಡಿಸಿ. ಪ್ರಮುಖವಾಗಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ನೀವು ಮತ್ತು ಅಧ್ಯಕ್ಷರು ಒಗ್ಗಟ್ಟಿ ನಿಂದ ಪಕ್ಷ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿ ಎಂದು ಸಲಹೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮುಂದಿನ ಮಾರ್ಚ್ ವೇಳೆಗೆ ಪ್ರತಿ ವಿಧಾನಸಭೆ ಕ್ಷೇತ್ರಾವಾರು ಚಿತ್ರಣ ಹಾಗೂ ಗೆಲುವಿನಲ್ಲಿ ಪಾತ್ರ ವಹಿಸುವ ಪ್ರಮುಖ ಅಂಶಗಳ ಕುರಿತು ವರದಿ ಸಿದ್ಧಪಡಿಸಲು ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದೆ. ಈ ಮಧ್ಯೆ, ರಾಜ್ಯ ಬಿಜೆಪಿ ಬೆಳವಣಿಗೆಗಳ ಬಗ್ಗೆಯೂ ಸಿದ್ದರಾಮಯ್ಯ ಅವರ ಬಳಿ ಸೋನಿಯಾ ಗಾಂಧಿಯವರು ಮಾಹಿತಿ ಪಡೆದುಕೊಂಡರು. ಬಿ.ಎಸ್.ಯಡಿಯೂರಪ್ಪ ಅವರ ನಿರ್ಗಮನ, ನೂತನ ಮುಖ್ಯಮಂತ್ರಿ ಕಾರ್ಯವೈಖರಿ, ಬಿಜೆಪಿಯ ಆಂತರಿಕ ಲೆಕ್ಕಾಚಾರಗಳ ಬಗ್ಗೆಯೂ ಇದೇ ವೇಳೆ ಚರ್ಚಿಸಿದರು ಎಂದು ಹೇಳಲಾಗಿದೆ.
ಇದನ್ನೂ ಓದಿ:ಜೆಡಿಎಸ್ ಪಕ್ಷದ ಟಾರ್ಗೆಟ್ ಕಾಂಗ್ರೆಸ್ ಮಾತ್ರ, ಬಿಜೆಪಿಯಲ್ಲ: ಸಿದ್ದರಾಮಯ್ಯ
ಬಿಜೆಪಿ ಜತೆಗೆ ಜೆಡಿಎಸ್‌ನ ವಿಚಾರವೂ ಚರ್ಚೆ ಸಂದರ್ಭದಲ್ಲಿ ಪ್ರಸ್ತಾಪವಾಯಿತು. ಆಗ, ಸಿದ್ದರಾಮಯ್ಯ ಅವರು ಬೆಳಗಾವಿ, ಬಸವಕಲ್ಯಾಣ, ಮಸ್ಕಿ ಕ್ಷೇತ್ರಗಳ ಉಪ ಚುನಾವಣೆ ವಿಚಾರ ಹಾಗೂ ಹಾನಗಲ್, ಸಿಂದಗಿ ಕ್ಷೇತ್ರಗಳ ವಿದ್ಯಮಾನಗಳ ಬಗ್ಗೆಯೂ ಗಮನಕ್ಕೆ ತಂದಿದ್ದಾರೆಂದು ತಿಳಿದು ಬಂದಿದೆ.
ಮೇಡಂ ಭೇಟಿಯಿಂದ ಸಿದ್ದು ಖುಷ್: ಹೈಕಮಾಂಡ್‌ನಿಂದ ಸೋಮವಾರ ಸಂಜೆ ದಿಢೀರ್ ಕರೆ ಬಂದ ತಕ್ಷಣ ಸಿದ್ದರಾಮಯ್ಯ ಅವರು ಮಾನಸಿಕವಾಗಿ ತಯಾರಿ ಮಾಡಿಕೊಂಡೇ ದೆಹಲಿಗೆ ಹೊರಟಿದ್ದರು. ಮುಂದಿನ ವಿಧಾನಸಭೆ ಚುನಾವಣೆ ಎದುರಿಸುವ ಸಂಬಂಧ ತಮ್ಮದೇ ಆದ ಪ್ಲ್ರಾನ್ ಸೋನಿಯಾಗಾಂಧಿ ಅವರ ಮುಂದಿಡಲು ಸಜ್ಜಾಗಿಯೇ ಹೋಗಿದ್ದರು ಎಂದು ಹೇಳಲಾಗಿದೆ. ಸೋನಿಯಾ ಗಾಂಧಿ ಅವರ ಭೇಟಿ ನಂತರ ಸಿದ್ದರಾಮಯ್ಯ ಅವರು ಆಪ್ತರ ಬಳಿ ಸಂತಸ ಹಂಚಿಕೊಂಡಿದ್ದಾರೆ. ಎರಡು ವರ್ಷದ ನಂತರ ನಡೆದ ಒಳ್ಳೆಯ ಭೇಟಿ ಎಂದು ಹೇಳಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಎಸ್. ಲಕ್ಷ್ಮಿನಾರಾಯಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಶ್ರೀಗಂಧದ ಮರ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ
Max movie review: ಮಾಸ್ ಮನಸುಗಳಿಗೆ ʼಮ್ಯಾಕ್ಸ್ʼ ಅಭಿಷೇಕ
Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.