ನಾವು ನಿಮಗೆ ಸಹಾಯ ಮಾಡಿದ್ದೆವು..: ಜೆಡಿಎಸ್ ನಾಯಕರಿಗೆ ಪತ್ರ ಬರೆದ ಸಿದ್ದರಾಮಯ್ಯ


Team Udayavani, Jun 9, 2022, 2:15 PM IST

siddaramaiah writes a letter to JDS MLAs

ಬೆಂಗಳೂರು: ರಾಜ್ಯಸಭಾ ಚುನಾವಣಾ ಕಣ ರಂಗೇರುತ್ತಿದೆ. ಚುನಾವಣೆಗೆ ಕೇವಲ ಒಂದು ದಿನ ಬಾಕಿಯಿದ್ದು, ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರು ಕಸರತ್ತಿನಲ್ಲಿ ತೊಡಗಿದೆ. ಇದೇ ವೇಳೆ ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಖಾನ್ ಗೆ ಬೆಂಬಲ ನೀಡುವಂತೆ ಜೆಡಿಎಸ್ ನಾಯಕರಿಗೆ ಸಿದ್ದರಾಮಯ್ಯ ಪತ್ರ ಬರೆದು ಮನವಿ ಮಾಡಿದ್ದಾರೆ.

ಸಿದ್ದರಾಮಯ್ಯ ಪತ್ರ ಇಲ್ಲಿದೆ.

ಜಾತ್ಯತೀತ ಜನತಾದಳದ ವಿಧಾನಸಭಾ ಸದಸ್ಯರಿಗೆ ಪ್ರೀತಿಯ ನಮಸ್ಕಾರಗಳು.

ದೇಶ ಅತ್ಯಂತ ಆತಂಕಕಾರಿ ಹಾದಿಯಲ್ಲಿ ಸಾಗುತ್ತಿರುವುದು ನಮ್ಮೆಲ್ಲರ ಅರಿವಿನಲ್ಲಿದೆ. ಸಾಮಾಜಿಕ ನ್ಯಾಯ, ಸಮಾನತೆ,ಭಾತೃತ್ವ, ಜಾತ್ಯತೀತತೆ ಮೊದಲಾದ ಸಂವಿಧಾನದ ಆಶಯಗಳ ಮೇಲೆ ಪ್ರಭುತ್ವವೇ ನಡೆಸುತ್ತಿರುವ ನಿರಂತರ ದಾಳಿಯಿಂದ ದೇಶದ ಪ್ರಜಾಪ್ರಭುತ್ವವೇ ಅಪಾಯದಲ್ಲಿದೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಾಮಾಜಿಕ,ಶೈಕ್ಷಣಿಕ,ಆರ್ಥಿಕ ಕ್ಷೇತ್ರಗಳು ಸೇರಿದಂತೆ ಎಲ್ಲ ಬದಲಾವಣೆಗಳಿಗೂ ರಾಜಕೀಯ ಬದಲಾವಣೆಯೇ ಚಾಲನಾ ಶಕ್ತಿ ಎನ್ನುವುದು ನಾವು ಇತಿಹಾಸದಿಂದ ಕಲಿತ ಪಾಠವಾಗಿದೆ. ಕಲಿತ ಪಾಠವನ್ನು ಪ್ರಯೋಗಿಸುವ ಅವಕಾಶ ಎದುರಾದಾಗ ಮುಕ್ತ ಮನಸ್ಸಿನಿಂದ ತೊಡಗಿಸಿಕೊಳ್ಳುವುದು ಪ್ರತಿಯೊಬ್ಬ ಜವಾಬ್ದಾರಿಯುತ ಪ್ರಜೆಯ ಕರ್ತವ್ಯವಾಗಿದೆ.

ಇಂತಹದ್ದೊಂದು ಮಹತ್ವದ ಜವಾಬ್ದಾರಿಯನ್ನು ನಿರ್ವಹಿಸುವ ಅವಕಾಶವನ್ನು ಇದೇ ಜೂನ್ ಹತ್ತರಂದು ರಾಜ್ಯದಿಂದ ರಾಜ್ಯಸಭೆಗೆ ನಡೆಯುತ್ತಿರುವ ಚುನಾವಣೆ ನಮಗೆ ನೀಡಿದೆ. ಕಾಂಗ್ರೆಸ್  ಕೋಮುವಾದದ ಜೊತೆ ಎಂದೂ ರಾಜಿಯಾಗದೆ ಜಾತ್ಯತೀತತೆ ಪರವಾಗಿ ಗಟ್ಟಿಯಾಗಿ ನಿಂತಿರುವ ಪಕ್ಷ.  ಕೋಮುವಾದಿ ಶಕ್ತಿಗಳನ್ನು ಸೋಲಿಸುವ ಪ್ರಸಂಗ ಎದುರಾದಾಗ ರಾಜಕೀಯ ಲಾಭ-ನಷ್ಟದ ಲೆಕ್ಕಾಚಾರವನ್ನು ಲೆಕ್ಕಿಸದೆ ಜಾತ್ಯತೀತತೆ ಪರವಾಗಿ ಕಾಂಗ್ರೆಸ್ ಪಕ್ಷ ನಿಂತಿರುವುದಕ್ಕೆ ಇತಿಹಾಸ ಸಾಕ್ಷಿಯಾಗಿದೆ.

ಜಾತ್ಯತೀತ ಜನತಾದಳದ ಹಿರಿಯ ನಾಯಕ ಹೆಚ್.ಡಿ.ದೇವೇಗೌಡರಿಗೆ ಪ್ರಧಾನಿಯಾಗುವ ಅವಕಾಶ ಎದುರಾದಾಗ ಕಾಂಗ್ರೆಸ್ ಪಕ್ಷ ಮುಕ್ತ ಹೃದಯದಿಂದ ಬೆಂಬಲಿಸಿತ್ತು. ಎರಡು ವರ್ಷಗಳ ಹಿಂದೆ ಹೆಚ್.ಡಿ.ದೇವೇಗೌಡರು ರಾಜ್ಯಸಭಾ ಚುನಾವಣೆಯನ್ನು ಎದುರಿಸಿದಾಗ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸದೆ ಗೌಡರನ್ನು ಬೆಂಬಲಿಸಿ  ಗೆಲ್ಲಿಸಿತ್ತು. ನಾಲ್ಕು ವರ್ಷಗಳ ಹಿಂದೆ ಕೇವಲ 37 ಶಾಸಕರನ್ನು ಹೊಂದಿದ್ದ ಜಾತ್ಯತೀತ ಜನತಾದಳಕ್ಕೆ ನಮ್ಮ ಕಾಂಗ್ರೆಸ್ ಪಕ್ಷ ಬೆಂಬಲಿಸಿ ಹೆಚ್.ಡಿ.ಕುಮರಾಸ್ವಾಮಿ ಅವರನ್ನು ರಾಜ್ಯದ ಮುಖ್ಯಮಂತ್ರಿ ಮಾಡಿತ್ತು.

ಇದು ನಮ್ಮ ಸೈದ್ದಾಂತಿಕ ಬದ್ದತೆ. ಈ ಬಾರಿ ರಾಜ್ಯಸಭೆಗೆ ನಡೆಯುತ್ತಿರುವ ಚುನಾವಣೆಯಲ್ಲಿ  ಇದೇ ಸೈದ್ದಾಂತಿಕ ಬದ್ದತೆಯಿಂದ ಜಾತ್ಯತೀತ ಜನತಾದಳ ನಮ್ಮ ಎರಡನೇ ಅಭ್ಯರ್ಥಿಯನ್ನು ಬೆಂಬಲಿಸಿ ಗೆಲ್ಲಿಸಬಹುದು ಎಂಬ ನಿರೀಕ್ಷೆಯಿಂದ ನಮ್ಮ ಯುವನಾಯಕ ಮನ್ಸೂರ್ ಅಲಿ ಖಾನ್ ಅವರನ್ನು ಕಣಕ್ಕಿಳಿಸಿದ್ದೆವು. ನಮ್ಮ ಅಭ್ಯರ್ಥಿ ಘೋಷಣೆ ಮಾಡಿದ ಮರುದಿನ ತಮ್ಮಲ್ಲಿ ಒಬ್ಬ ಅಭ್ಯರ್ಥಿಯನ್ನೂ ಗೆಲ್ಲಿಸುವಷ್ಟು ಮತಗಳು ಲಭ್ಯವಿಲ್ಲದೆ ಇದ್ದರೂ ಜೆಡಿಎಸ್ ಪಕ್ಷ, ಹಠಾತ್ತನೆ ತನ್ನ ಅಭ್ಯರ್ಥಿಯನ್ನು ಘೋಷಿಸಿರುವುದು ನಮಗೆ ಆಘಾತವುಂಟುಮಾಡಿದೆ.

ಇದನ್ನೂ ಓದಿ:ನಿಮ್ಮ ಪ್ರತಿಭಟನೆ ಕುವೆಂಪು ವಿರುದ್ಧವೇ? ಕಾಂಗ್ರೆಸ್ ನವರೇ ಉತ್ತರ ಕೊಡಿ ಎಂದ ಬಿಜೆಪಿ

ಈ ಚುನಾವಣೆ ಬಹುಮುಖ್ಯವಾಗಿ ಜಾತ್ಯತೀತತೆ ಮತ್ತು ಕೋಮುವಾದ ಎಂಬ ಎರಡು ಸಿದ್ದಾಂತಗಳ ನಡುವಿನ ಸಮರವೂ ಆಗಿದೆ ಎನ್ನುವುದನ್ನು ನೀವು ಬಲ್ಲಿರಿ. ರಾಷ್ಟ್ರಕವಿ ಕುವೆಂಪು ಅವರು ಹೆಮ್ಮೆಯಿಂದ ಹೇಳಿಕೊಂಡ ಸರ್ವಜನಾಂಗದ ಶಾಂತಿಯ ತೋಟವನ್ನು ಬಿಜೆಪಿ, ಧಾರ್ಮಿಕ ದ್ವೇಷಾಸೂಯೆಗಳಿಂದ ಹಾಳುಗೆಡಹುತ್ತಿರುವುದನ್ನು ನಾವು ನಿತ್ಯ ನೋಡುತ್ತಿದ್ದೇವೆ. ಪಠ್ಯಪುಸ್ತಕ ಪರಿಷ್ಕರಣೆಯ ನೆಪದಲ್ಲಿ ಬಸವಣ್ಣ,ಅಂಬೇಡ್ಕರ್,ನಾರಾಯಣ ಗುರು, ನಾಡಪ್ರಭು ಕೆಂಪೇಗೌಡ,ಕುವೆಂಪು ಸೇರಿದಂತೆ ನಾವು ಗೌರವಿಸುವ ಮಹಾಪುರುಷರಿಗೆ ಮಾಡಿರುವ ಅವಮಾನ ಇದಕ್ಕೆ ಇತ್ತೀಚಿನ ಜ್ವಲಂತ ಉದಾಹರಣೆ.

ಕನ್ನಡಿಗರೆಲ್ಲರ ಆತ್ಮಸ್ವರೂಪಿಯಾದ ಕುವೆಂಪು ವಿರಚಿತ ನಾಡಗೀತೆಯನ್ನೇ ತಿರುಚಿದ ಕಿಡಿಗೇಡಿಯಿಂದಲೇ ಈ ಎಲ್ಲ ದುಷ್ಕತ್ಯಗಳನ್ನು ಮಾಡಿಸುವ ಧಾರ್ಷ್ಟ್ಯವನ್ನು ಬಿಜೆಪಿ ತೋರಿದೆ. ರಾಜ್ಯಸಭಾ ಚುನಾವಣೆಯ ಮೂಲಕ ಒದಗಿ ಬಂದ ಅವಕಾಶವನ್ನು ಬಳಸಿಕೊಂಡು ಕೋಮುವಾದಿ ಮತ್ತು ಜಾತಿವಾದಿ ಬಿಜೆಪಿಗೆ ತಕ್ಕ ಉತ್ತರ ನೀಡಬೇಕೆಂದು ಜಾತ್ಯತೀತತೆ,ಸೌಹಾರ್ದತೆ ಮತ್ತು ಸಹಬಾಳ್ವೆಯ ಮೇಲೆ ನಂಬಿಕೆ ಇಟ್ಟಿರುವ ನಾಡಬಾಂಧವರೆಲ್ಲರ ಮನದಾಳದ ಹಾರೈಕೆಯಾಗಿದೆ.

ಜಾತ್ಯತೀತತೆಯ ಸಾವು-ಬದುಕಿನ ಪ್ರಶ್ನೆಯಾಗಿ ರಾಜ್ಯಸಭಾ ಚುನಾವಣೆ ನಮ್ಮ ಮುಂದಿದೆ. ಸೈದ್ದಾಂತಿಕವಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ಒಂದು ಕಡೆ ಇದ್ದರೆ, ಕೋಮುವಾದವನ್ನೇ ಉಸಿರಾಡುವ ಬಿಜೆಪಿ ಇನ್ನೊಂದು ಕಡೆ ಇದೆ. ಈ ಹಿನ್ನೆಲೆಯಲ್ಲಿ ನಮ್ಮ ಎರಡನೇ ಅಭ್ಯರ್ಥಿಯಾಗಿರುವ ಮನ್ಸೂರ್ ಅಲಿ ಖಾನ್ ಅವರ ಸೋಲು-ಗೆಲುವನ್ನು ರಾಜ್ಯದ ಅಲ್ಪಸಂಖ್ಯಾತ ಸಮುದಾಯ ಮಾತ್ರವಲ್ಲ ಜಾತ್ಯತೀತತೆಯ ಮೇಲೆ ನಂಬಿಕೆ ಇಟ್ಟಿರುವ ಪ್ರತಿಯೊಬ್ಬ ಪ್ರಜೆಯೂ ಕುತೂಹಲದಿಂದ ಗಮನಿಸುತ್ತಿದ್ದಾರೆ. ಸೈದ್ದಾಂತಿಕ ಬದ್ದತೆಯಿಂದ ಜಾತ್ಯತೀತ ಜನತಾದಳ ಬೆಂಬಲಿಸಿದರೆ ಈ ಯುವನಾಯಕನ ಆಯ್ಕೆ ನಿರಾತಂಕವಾಗಿ ನಡೆದುಹೋಗುತ್ತದೆ.

ಮನ್ಸೂರು ಅಲಿ ಖಾನ್ ಅವರ ಗೆಲುವು ಯಾವುದೇ ಒಂದು ಪಕ್ಷದ ಗೆಲುವಾಗದೆ ಜಾತ್ಯತೀತ ಸಿದ್ದಾಂತದ ಮೇಲೆ ನಂಬಿಕೆ ಇಟ್ಟಿರುವ ಕಾಂಗ್ರೆಸ್ ಮತ್ತು ಜಾತ್ಯತೀತ ಜನತಾದಳ ಪಕ್ಷಗಳೆರಡರ ಸೈದ್ದಾಂತಿಕ ಗೆಲುವಾಗುತ್ತದೆ.  ಪ್ರಜಾಪ್ರತಿನಿಧಿಗಳಾದ ನಾವೆಲ್ಲರೂ ನಮ್ಮ ಪ್ರಭುಗಳಾದ ಪ್ರಜೆಗಳ ಆತ್ಮಸಾಕ್ಷಿಗೆ ದನಿಯಾಗಬೇಕಾಗಿರುವುದು ಕರ್ತವ್ಯವಾಗಿದೆ. ಈ ಆತ್ಮಸಾಕ್ಷಿಯ ಮತವನ್ನು ಜಾತ್ಯತೀತತೆಗೆ ಬದ್ದವಾಗಿರುವ ನಮ್ಮ ಪಕ್ಷದ ಮನ್ಸೂರ್ ಅಲಿ ಖಾನ್ ಅವರಿಗೆ ಚಲಾಯಿಸಬೇಕೆಂದು ನನ್ನ ಸವಿನಯ ವಿನಂತಿ.

ಟಾಪ್ ನ್ಯೂಸ್

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

1-eee

Shiradi: ಬಸ್‌ ಢಿಕ್ಕಿಯಾಗಿ ಪಾದಚಾರಿ ಸಾ*ವು

death

Bengaluru:ಮೂಲ್ಕಿಯ ಬಡಗಿ ಖಾಸಗಿ ಹೊಟೇಲ್‌ ನಲ್ಲಿ ಆತ್ಮಹ*ತ್ಯೆ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.