ಮಕ್ಕಳ ಭವಿಷ್ಯದ ಕುತ್ತಿಗೆ ಕೊಯ್ಯುವಂಥ ಕೆಲಸದಲ್ಲಿ ಭಾಗಿಯಾದ ಪಶ್ಚಾತ್ತಾಪ ಹೊರಬೇಕಾದೀತು!
ರಾಷ್ಟ್ರೀಯ ಶಿಕ್ಷಣ ನೀತಿ ಆದೇಶ ಹಿಂಪಡೆಯಲು ಸಿದ್ದರಾಮಯ್ಯ ಆಗ್ರಹ
Team Udayavani, Sep 3, 2021, 3:05 PM IST
ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸಿ ಹೊರಡಿಸಿರುವ ಆದೇಶವನ್ನು ಕೂಡಲೇ ವಾಪಸ್ ಪಡೆಯುವಂತೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಈ ಬಗ್ಗೆ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥನಾರಾಯಣ ಅವರಿಗೆ ಪತ್ರ ಬರೆದಿರುವ ಅವರು, ಹೊಸ ಶಿಕ್ಷಣ ನೀತಿ ಕುರಿತಾದ ಚರ್ಚೆಯಲ್ಲಿ ತಾವು ಭಾಗವಹಿಸುವುದಿಲ್ಲ ಎಂದಿದ್ದಾರೆ.
ಒಂದು ಶಿಕ್ಷಣ ನೀತಿಯ ಅನುಷ್ಠಾನವೆಂದರೆ ಸಣ್ಣ ಸಂಗತಿಯೆ? ತಾವೂ ಕೂಡ ಬೆವರಿನ ಸಂಸ್ಕೃತಿಯ ಹಿನ್ನೆಲೆಯ ಸಮುದಾಯದಿಂದ ಬಂದಿದ್ದೀರಿ. ರಾಷ್ಟ್ರಕವಿ ಕುವೆಂಪು ಅವರು ಶಿಕ್ಷಣ, ಅದರ ಗುಣಮಟ್ಟವನ್ನು ಸುಧಾರಣೆ, ಕಲಿಕೆಯ ಮಾಧ್ಯಮ ಹಾಗೂ ಸರ್ಕಾರದ ಜವಾಬ್ಧಾರಿಗಳ ಬಗ್ಗೆ ಮಾತನಾಡಿದ್ದಾರೆ. ಶಿಕ್ಷಣದ ಕುರಿತಂತೆ ಕೆಲಸ ಮಾಡುತ್ತಿರುವವರೆಲ್ಲರೂ ಕುವೆಂಪು ಅವರ ವಿಚಾರಗಳನ್ನು ಓದಿ, ಅದರಂತೆ ನಡೆದುಕೊಳ್ಳಬೇಕಾಗಿದೆ ಎಂದಿದ್ದಾರೆ.
ಮುಂದುವರೆದ ದೇಶಗಳಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳನ್ನು ಸರ್ಕಾರಗಳೇ ನಿರ್ವಹಿಸುತ್ತವೆ. ಯಾವುದೇ ನಾಡಿನಲ್ಲಿ ಉನ್ನತ ಶಿಕ್ಷಣ ವ್ಯವಸ್ಥೆ ಸಮರ್ಪಕವಾಗಿದ್ದರೆ ಆ ನಾಡಿನ ಸಮಸ್ತ ಆರೋಗ್ಯವೂ ಸರಿಯಾಗಿರುತ್ತದೆ. ಇಂದು ಭಾರತದ ಸಮಾಜಗಳು ತೀವ್ರ ರೂಪದ ಬಿಕ್ಕಟ್ಟುಗಳನ್ನು ಎದುರಿಸುತ್ತಿವೆ. ಅದಕ್ಕೆ ಕಾರಣಗಳು ಹಲವಿವೆ. ಮೊದಲನೆಯದಾಗಿ ವಿದ್ಯಾರ್ಥಿ ಶಿಕ್ಷಕ ಪ್ರಮಾಣ ವಿಪರೀತ ಹೆಚ್ಚಾಗಿದೆ, ಅದು ಕಡಿಮೆಯಾಗಬೇಕು. ಶಿಕ್ಷಣ ಕ್ಷೇತ್ರಕ್ಕೆ ಅತಿ ಕಡಿಮೆ ಅನುದಾನ ನೀಡಲಾಗುತ್ತಿದೆ. ಈ ನೀತಿಯ ಶಿಫಾರಸ್ಸುಗಳ ಪ್ರಕಾರ ಜಿಡಿಪಿಯಲ್ಲಿ ಕನಿಷ್ಠ ಶೇ 6 ರಷ್ಟು ಮೀಸಲಿರಿಸಬೇಕು. ಇದಾಗಬೇಕೆಂದರೆ ಕರ್ನಾಟಕದಲ್ಲಿ ಕನಿಷ್ಠ 1.08 ಲಕ್ಷ ಕೋಟಿ ರೂಪಾಯಿಗಳನ್ನು ಮೀಸಲಿರಿಸಬೇಕಾಗುತ್ತದೆ ಎಂದಿದ್ದಾರೆ.
ಇದನ್ನೂ ಓದಿ:ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ‘ಉದ್ಯೋಗಕ್ಕೆ ಮಾರಕ’ : ರಾಹುಲ್ ಗಾಂಧಿ ಗರಂ
ಹೊಸ ಶಿಕ್ಷಣ ನೀತಿಯ ಹೇರಿಕೆಯು ಹಲವು ಸಮಸ್ಯೆಗಳನ್ನು ಒಳಗೊಂಡಿದೆ ಎಂದು ಹೇಳುತ್ತಿದೆ. ಒಕ್ಕೂಟ ವ್ಯವಸ್ಥೆಯ ಮೂಲ ಸ್ಫೂರ್ತಿಯ ನಿರಾಕರಣೆ, ಖಾಸಗೀಕರಣ, ತರಗತಿಗಳನ್ನು ನಿರಾಕರಿಸಿ ಕಾಲೇಜು, ವಿಶ್ವ ವಿದ್ಯಾಲಯಗಳ ಪಾವಿತ್ರ್ಯದ ನಿರಾಕರಣೆ, ಬಡವರು, ಹಿಂದುಳಿದವರು, ದಮನಿತರ ಸಿಗಬಹುದಾದ ಸುಲಭ ಶಿಕ್ಷ,ಣದ ನಿರಾಕರಣೆ, ಕೋಮು ಅಜೆಂಡಾಗಳನ್ನು ತಂದು ಅವೈಜ್ಞಾನಿಕತೆಯನ್ನು, ದ್ವೇಷವನ್ನು ತುಂಬಿ ಭಾರತವನ್ನು ಶಾಶ್ವತ ಅಂಧಕಾರಕ್ಕೆ ತಳ್ಳಲಾಗುತ್ತಿದೆ ಮುಂತಾದ ಗಂಭೀರ ಆರೋಪಗಳಿವೆ. ಸರ್ಕಾರ ಈ ಎಲ್ಲದರ ಕುರಿತು ಚರ್ಚೆ ನಡೆಸಬೇಕಾಗಿತ್ತು. ಇದೇನನ್ನೂ ನೀವು ಮಾಡಿಲ್ಲ. ನನ್ನ, ನಿಮ್ಮ ಆಯಸ್ಸು, ರಾಜಕೀಯ ವೃತ್ತಿ ಎಲ್ಲವೂ ಮುಂದೆಂದೊ ಒಂದು ದಿನ ಮುಗಿಯುತ್ತದೆ. ಆದರೆ ಶಿಕ್ಷಣ ನೀತಿಯ ಹೆಸರಲ್ಲಿ ಬಲಿಪಶುಗಳಾಗುವ ಮಕ್ಕಳ ಮುಂದೆ 70- 80 ವರ್ಷಗಳ ಭವಿಷ್ಯವಿದೆ. ಶಿಕ್ಷಣದ ಹಂತದಲ್ಲಿ ಅವರ ಭವಿಷ್ಯ ಅಲ್ಲೋಲ, ಕಲ್ಲೋಲವಾದರೆ. ಅದರ ಶಾಪವನ್ನು ಹೊರುವವರು ಯಾರು? ಈ ನಾಡಿನ, ರೈತರ, ಪಶುಪಾಲಕರ, ಕುಶಲಕರ್ಮಿಗಳ, ಸಣ್ಣ ಪುಟ್ಟ ವ್ಯಾಪಾರಿಗಳ, ಕಾರ್ಮಿಕರ ಮನೆಗಳಿಂದ ಬಂದ ಮಕ್ಕಳು ಗುಣ ಮಟ್ಟದ ಶಿಕ್ಷಣ ಪಡೆದು ಜಾಗತಿಕ ಮಟ್ಟದ ಉದಾರ ಮಾನವತಾವಾದಿ, ವೈಜ್ಞಾನಿಕ ಶಿಕ್ಷಣ ಪಡೆಯಬಾರದೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ತಾವು ನಿಜವಾಗಿಯೂ ನೈಜ ಸ್ಫೂರ್ತಿಯಲ್ಲಿ ಚರ್ಚೆಮಾಡಬಯಸಿದರೆ, ಕೂಡಲೆ ಈ ಹೊಸ ಶಿಕ್ಷಣ ನೀತಿಯನ್ನು ಹಿಂದಕ್ಕೆ ಪಡೆಯಿರಿ. ಚರ್ಚೆ ನಡೆಸಿದ ಮೇಲೆ ನಿಜವಾಗಿಯೂ ಈ ನೀತಿ ಆರೋಗ್ಯಕರವೆನ್ನಿಸಿ ಅನುಷ್ಠಾನ ಸೂಕ್ತವೆನ್ನಿಸಿದರೆ, ಈ ಶತಮಾನಕ್ಕೆ ಅತ್ಯಗತ್ಯ ಎನ್ನಿಸಿದರೆ ನಾವೆ ನಿಂತು ಅನುಷ್ಠಾನ ಮಾಡಲು ಬೆಂಬಲಿಸುತ್ತೇವೆ. ಇಲ್ಲದಿದ್ದರೆ ಮಕ್ಕಳ ಭವಿಷ್ಯದ ಕುತ್ತಿಗೆ ಕೊಯ್ಯುವಂಥ ಪಾಪದ ಕೆಲಸದಲ್ಲಿ ಭಾಗಿಯಾದೆವು ಎಂಬ ಪಶ್ಚಾತ್ತಾಪವನ್ನು ಹೊರಬೇಕಾಗುತ್ತದೆ ಎಂದು ಸಿದ್ದರಾಮಯ್ಯ ಪತ್ರದಲ್ಲಿ ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
State Budget Meeting: ಇಂದಿನಿಂದ ಸಿಎಂ ಬಜೆಟ್ ಪೂರ್ವಭಾವಿ ಸರಣಿ ಸಭೆ
Naxal Surrender: ಮುಂಡಗಾರು ಲತಾ ಸೇರಿ 6 ನಕ್ಸಲರು ನಾಳೆ ಶರಣಾಗತಿ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
State Budget Meeting: ಇಂದಿನಿಂದ ಸಿಎಂ ಬಜೆಟ್ ಪೂರ್ವಭಾವಿ ಸರಣಿ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.