ಬಿಜೆಪಿಗೆ ಧಮ್ ಇಲ್ಲ, ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆಯಿದೆ: ಸಿದ್ದರಾಮಯ್ಯ
Team Udayavani, Dec 14, 2021, 2:37 PM IST
ಸುವರ್ಣಸೌಧ (ಬೆಂಗಳೂರು): ವಿಧಾನ ಪರಿಷತ್ ಚುನಾವಣೆಯಲ್ಲಿ 12 ಗೆಲ್ಲಬಹುದು ಎಂದು ನಮ್ಮ ನಿರೀಕ್ಷೆಯಿತ್ತು. 11 ಸ್ಥಾನಗಳನ್ನು ಗೆದ್ದಿದ್ದೇವೆ. ಚಿಕ್ಕಮಗಳೂರಲ್ಲಿ ಗಾಯತ್ರಿ ನಾಲ್ಕು ಮತಗಳ ಅಂತರದಿಂದ ಸೋಲಾಗಿದೆ. ಅದೊಂದು ಕ್ಷೇತ್ರದಲ್ಲಿ ಗೆಲ್ಲುತ್ತೇವೆ ಎಂದು ಭಾವಿಸಿದ್ದೇವೆ. ಆ ಒಂದು ಕ್ಷೇತ್ರದಲ್ಲಿ ಮಾತ್ರ ನಿರೀಕ್ಷೆ ಹುಸಿಯಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ಪರಿಷತ್ ಫಲಿತಾಂಶದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಗಾಯತ್ರಿ ಅವರಿಗೆ ಕರೆ ಮಾತನಾಡಿದ್ದೇನೆ. ವಕೀಲರನ್ನು ಸಂಪರ್ಕ ಮಾಡಿ ಎಂದು ಹೇಳಿದ್ದೇವೆ. ನಾಮ ನಿರ್ದೇಶನ ಅಭ್ಯರ್ಥಿಗಳ ಮತದಾನ ಮಾಡುವ ವಿಚಾರಕ್ಕಾಗಿ ಅವರ ಜೊತೆ ಮಾತುಕತೆ ನಡೆಸಿದ್ದೇನೆ ಎಂದರು.
ಇದನ್ನೂ ಓದಿ:ಬೆಳಗಾವಿ: ಪಕ್ಷೇತರ ಲಖನ್ ಜಾರಕಿಹೊಳಿಗೆ ಭರ್ಜರಿ ಜಯ: ಬಿಜೆಪಿಗೆ ಭಾರೀ ಮುಖಭಂಗ
ಇದು ಜನರ ತೀರ್ಪಲ್ಲ. ಸ್ಥಳೀಯ ನಾಯಕರ ಅಭಿಪ್ರಾಯ. ಆದರೂ ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆಯಿದೆ ಎಂದರು.
ಬೆಳಗಾವಿಯಲ್ಲಿ ಬಿಜೆಪಿ ಸೋಲು ಕಂಡಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಗೆ ಧಮ್ ಇಲ್ಲ. ಪಕ್ಷೇತರರ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ಅವಕಾಶ ಮಾಡಿಕೊಟ್ಟಿದ್ದರು. ನಮ್ಮ ಅಭ್ಯರ್ಥಿ ಮೊದಲ ಪ್ರಾಶಸ್ತ್ಯದಲ್ಲಿ ಜಯಗಳಿಸಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ
Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್
MUST WATCH
ಹೊಸ ಸೇರ್ಪಡೆ
Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್
Bunts Hostel, ಕರಂಗಲ್ಪಾಡಿ ಜಂಕ್ಷನ್: ಶಾಶ್ವತ ಡಿವೈಡರ್ ನಿರ್ಮಾಣ ಕಾಮಗಾರಿ
Mangaluru: ರಾತ್ರಿ ಪ್ರಿಪೇಯ್ಡ್ ಆಟೋ ಇಲ್ಲದೆ ಪ್ರಯಾಣಿಕರ ಪರದಾಟ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.