ಮೋದಿ ಭಾಷಣ ‘ನಿಮ್ಮ ತಲೆ ಮೇಲೆ ನಿಮ್ಮ ಕೈ’ ಎಂಬ ಸಂದೇಶ ನೀಡಿದೆ: ಸಿದ್ದರಾಮಯ್ಯ ಟೀಕೆ
Team Udayavani, Apr 20, 2021, 10:13 PM IST
ಬೆಂಗಳೂರು: ಇಂದು ರಾತ್ರಿ ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ ಭಾಷಣ ಅತ್ಯಂತ ನಿರಾಶದಾಯಕ. ಕೋವಿಡ್ ಸೋಂಕಿನಿಂದ ತತ್ತರಿಸಿ ಹೋಗಿರುವ ರಾಜ್ಯಗಳಿಗೆ ತುರ್ತಾಗಿ ಬೇಕಾಗಿರುವುದು ನೆರವಿನ ಹಸ್ತವೇ ಹೊರತು ಉಪದೇಶದ ಬುರುಡೆ ಮಾತಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.
ದೇಶದಲ್ಲಿ ಹಬ್ಬುತ್ತಿರುವ ಕೋವಿಡ್ ಹಿನ್ನೆಲೆ ದೇಶದ ಜನರನ್ನುದ್ದೇಶಿಸಿ ಇಂದು ರಾತ್ರಿ 8.45 ಕ್ಕೆ ಮಾತನಾಡಿರುವ ಮೋದಿ, ಎಲ್ಲ ರಾಜ್ಯ ಸರ್ಕಾರಗಳಿಗೆ ಲಾಕ್ ಡೌನ್ ಹೇರದಂತೆ ಸೂಚನೆ ನೀಡಿದರು. ಹಾಗೂ ದೇಶದ ಜನರು ಸ್ವಯಂ ಪ್ರೇರಿತರಾಗಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು.
ಇದೀಗ ಪ್ರಧಾನಿ ನರೇಂದ್ರ ಮೋದಿಯವರ ಭಾಷಣ ಟೀಕಿಸಿರುವ ಸಿದ್ದರಾಮಯ್ಯ, ರಾಜ್ಯದಲ್ಲಿ ಕೋವಿಡ್ ಸೋಂಕಿತರು ಆಮ್ಲಜನಕ ಇಲ್ಲದೆ, ಐಸಿಯು ಹಾಸಿಗೆಗಳಿಲ್ಲದೆ, ರೆಮಿಡಿಸಿವೆರ್‌ನಂತಹ ಪ್ರಾಣರಕ್ಷಕ ಔಷಧಿ ಸಿಗದೆ ಜೀವ ಕಳೆದುಕೊಳ್ಳುತ್ತಿದ್ದಾರೆ. ಈ ಸಮಸ್ಯೆಗಳಿಗೆ ಯಾವುದೇ ಪರಿಹಾರ ನೀಡದ ಮೋದಿ, ಜನತೆಗೆ ಜವಾಬ್ದಾರಿಯ ಪಾಠ ಹೇಳಿದ್ದಾರೆ.
ಪ್ರಧಾನಿಗಳೇ, ಮೊದಲು ನಿಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಿ. ಕೋವಿಡ್ ಉಲ್ಭಣವಾದ ಕಾರಣದಿಂದಾಗಿ ಲಾಕ್‌ಡೌನ್ ಅನಿವಾರ್ಯ ಎಂಬಂತೆ ರಾಜ್ಯ ಬಿಜೆಪಿ ಸರ್ಕಾರ ಮಾತನಾಡುತ್ತಿದೆ. ಲಾಕ್ ಡೌನ್ ಹೇರಿದರೆ ಕಷ್ಟನಷ್ಟಕ್ಕೀಡಾಗುವ ಜನತೆಗೆ ಕೇಂದ್ರ ಬಿಜೆಪಿ ಸರ್ಕಾರ ನೀಡುವ ನೆರವಿನ ಘೋಷಣೆಯನ್ನು ಜನ ನಿರೀಕ್ಷಿಸಿದ್ದರು. ಮೋದಿ ಭಾಷಣ ‘ನಿಮ್ಮ ತಲೆ ಮೇಲೆ ನಿಮ್ಮ ಕೈ’ ಎಂಬ ಸಂದೇಶ ನೀಡಿದೆ ಎಂದು ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.
ಕೋವಿಡ್ ಪರಿಣಾಮವನ್ನು ಸಮರ್ಥವಾಗಿ ನಿರ್ವಹಿಸಲಾಗದೆ ರಾಜ್ಯದ ಆರ್ಥಿಕ ಸ್ಥಿತಿ ದಿವಾಳಿಯ ಅಂಚಿಗೆ ಬಂದು ನಿಂತಿದೆ. ಇದಕ್ಕೆ ನ್ಯಾಯಬದ್ಧವಾಗಿ ತೆರಿಗೆ ಪಾಲನ್ನು ನೀಡದಿರುವ ಕೇಂದ್ರ ಬಿಜೆಪಿ ಸರ್ಕಾರವೂ ಕಾರಣ. ಪ್ರಧಾನಿಯವರೇ, ನೀವು ವಿಶೇಷ ಆರ್ಥಿಕ ನೆರವು ಕೊಡುವುದು ಬೇಡ , ನಮ್ಮ ನ್ಯಾಯಬದ್ಧ ಪಾಲನ್ನಷ್ಟಾದರೂ ನೀಡಿ ಪುಣ್ಯ ಕಟ್ಟಿಕೊಳ್ಳಿ ಎಂದು ಸಿದ್ಧರಾಮಯ್ಯ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.