![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Jul 28, 2021, 5:25 PM IST
ಮೈಸೂರು: ಬಸವರಾಜ್ ಬೊಮ್ಮಾಯಿ ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಸಾಧ್ಯವಾ? ಎಂದು ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.
ಬಸವರಾಜ್ ಬೊಮ್ಮಾಯಿ ಹೆಸರು ಸೂಚಿಸಿರುವುದು ಯಡಿಯೂರಪ್ಪ. ಈ ಕಾರಣದಿಂದ ಸರ್ಕಾರದ ಮೇಲೆ ಬಿಎಸ್ ವೈ ಸಹಜವಾಹಿ ಹಿಡಿತಹೊಂದಿರುತ್ತಾರೆ. ಈಗಿರುವಾಗ ಬೊಮ್ಮಾಯಿ ಸ್ವತಂತ್ರವಾಗಿ ಸರ್ಕಾರ ನಡೆಸಲು ಸಾಧ್ಯನಾ?. ಆದ್ರೆ ಈ ಕ್ಷಣದಲ್ಲೆ ನಾನು ಬೊಮ್ಮಯಿ ಬಗ್ಗೆ ಏನು ಹೇಳುವುದಿಲ್ಲ. ಅವರ ಆಡಳಿತವನ್ನು ಕಾದು ನೋಡೋಣ ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.
ಈಗಲೇ ಅವರ ಮೇಲೆ ಸುಮ್ಮನೆ ದೂರುವುದಿಲ್ಲ. ಒಳ್ಳೆಯ ಕೆಲಸ ಮಾಡಲಿ ಎಂದು ಆಶಿಸುತ್ತೇನೆ. ಮುಖ್ಯ ಮಂತ್ರಿ ಬದಲಾದ್ರೆ ಎಲ್ಲವೂ ಬದಲಾಗುತ್ತಾ..? ಯಡಿಯೂರಪ್ಪ ಇಳಿದ್ದಿದ್ದಾರೆ. ಬೊಮ್ಮಾಯಿ ಸಿಎಂ ಆಗಿದ್ದಾರೆ ಎಂದ ಮಾತ್ರಕ್ಕೆ ಬಿಜೆಪಿಯ ಐಡಿಯಾಲಜಿ ಬದಲಾಗುತ್ತಾ.? ಕೋಮುವಾದ ಹೊರಟುಹೋಗುತ್ತ.? ಹಿಂದುತ್ವದ ಅವರ ಅಜೆಂಡಾ ಬದಲಾಗುತ್ತಾ.? ಬಿಜೆಪಿಯವರು ಯಾವತ್ತಿಗೂ ಅಲ್ಪಸಂಖ್ಯಾತರು, ದಲಿತರು, ಬಡವರ ಪರವಾಗಿ ಇಲ್ಲ. ಆದರಿಂದ ಬಿಜೆಪಿ ಸರ್ಕಾರದಿಂದ ಯಾವುದೇ ನೀರೀಕ್ಷೆ ಮಾಡೋದಿಲ್ಲ ಎಂದರು.
ಬಸವರಾಜ ಬೊಮ್ಮಾಯಿಗೆ ಒಂದು ಅವಕಾಶ ಸಿಕ್ಕಿದೆ. ಈ ಅವಕಾಶವನ್ನ ಸದುಪಯೋಗಪಡಿಸಿಕೊಂಡು ಒಳ್ಳೆಯ ಆಡಳಿತ ನೀಡಲಿ. ಎಸ್.ಆರ್.ಬೊಮ್ಮಾಯಿ ಗುಣ ಮಗನಿಗೆ ಬರುತ್ತೆ ಎಂದು ಹೇಳಲು ಸಾಧ್ಯವಿಲ್ಲ. ಮಹಾತ್ಮಾ ಗಾಂಧಿ ಮಗ ಕುಡುಕನಾದ. ಮಹಾತ್ಮಾ ಗಾಂಧಿಯ ಮಗ ಮಹಾತ್ಮಾ ಗಾಂಧಿಯಾಗಲಿಲ್ಲ. ಅದೇ ರೀತಿ ಬೊಮ್ಮಯಿ ಮಗ ತಂದೆಯಂತೆ ಆಗುತ್ತಾರೆ ಎಂದು ಹೇಳಲು ಸಾಧ್ಯವಿಲ್ಲ. ತಂದೆಯ ಗುಣ ಕೆಲವು ಮಕ್ಕಳಿಗೆ ಬರುವುದಿಲ್ಲ ಎಂದು ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
You seem to have an Ad Blocker on.
To continue reading, please turn it off or whitelist Udayavani.