ಕೋವಿಡ್ ಸ್ಥಿತಿಯಲ್ಲಿ ಜಾತಿ, ಧರ್ಮದ ಆಧಾರದ ಮೇಲೆ ವಿಂಗಡಣೆ ಮಾಡುವುದು ಸರಿಯಲ್ಲ :ಸಿದ್ದರಾಮಯ್ಯ
ದೇವಾಲಯಗಳಿಗೆ ನೀಡುವ ತಸ್ತೀಕ್ ಹಣ, ಮಸೀದಿ, ಚರ್ಚ್, ಗುರುದ್ವಾರಗಳಿಗೆ ನೀಡುತ್ತಿರುವ ಅನುದಾನವನ್ನು ಸರ್ಕಾರ ಮುಂದುವರಿಸಬೇಕು : ಸಿದ್ದು ಒತ್ತಾಯ
Team Udayavani, Jun 10, 2021, 5:19 PM IST
ಬೆಂಗಳೂರು : ಹಿಂದೂ ಧಾರ್ಮಿಕ ಸಂಸ್ಥೆ ಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯಲ್ಲಿನ ಅನುದಾನ ಅನ್ಯ ಧರ್ಮದ ಪ್ರಾರ್ಥನಾ ಮಂದಿರಗಳಿಗೆ ತಸ್ತೀಕ್ ರೂಪದಲ್ಲಿ ಹಣ ನೀಡುವು ದನ್ನು ತಡೆ ಹಿಡಿಯಲು ಆದೇಶ ಮಾಡಿರುವುದಾಗಿ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿರುವ ಬೆನ್ನಿಗೆ ಸಿದ್ದರಾಮಯ್ಯ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ತಮ್ಮ ಅಧಿಕೃತ ಟ್ವೀಟರ್ ಖಾತೆಯಲ್ಲಿ ಟ್ವಿಟ್ ಮೂಲಕ ಆಕ್ರೊಶ ವ್ಯಕ್ತಪಡಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ದೇವಾಲಯಗಳಿಗೆ ನೀಡುವ ತಸ್ತೀಕ್ ಹಣ, ಮಸೀದಿ, ಚರ್ಚ್ ಹಾಗೂ ಗುರುದ್ವಾರಗಳಿಗೆ ನೀಡುತ್ತಿರುವ ಅನುದಾನವನ್ನು ರಾಜ್ಯ ಬಿಜೆಪಿ ಸರ್ಕಾರ ಮುಂದುವರಿಸಬೇಕು ಎಂದಿದ್ದಾರೆ.
ಇದನ್ನೂ ಓದಿ : ಕಿಮ್ಸ್ ಗೆ 48 ಲಕ್ಷ ರೂ.ಮೌಲ್ಯದ ವೈದ್ಯಕೀಯ ಸಲಕರಣೆ ದೇಣಿಗೆ
ಕೋವಿಡ್ ಸಂಕಷ್ಟ ಯಾರನ್ನೂ ಬಿಟ್ಟಿಲ್ಲ, ಹೀಗಿರುವಾಗ ಜಾತಿ, ಧರ್ಮದ ಆಧಾರದ ಮೇಲೆ ವಿಂಗಡಣೆ ಮಾಡುವುದು ಸರಿಯಲ್ಲ ಎಂದು ಅವರು ಟ್ವೀಟ್ ನಲ್ಲಿ ಹೇಳಿದ್ದಾರೆ.
ದೇವಾಲಯಗಳಿಗೆ ನೀಡುವ ತಸ್ತೀಕ್ ಹಣ, ಮಸೀದಿ, ಚರ್ಚ್ ಹಾಗೂ ಗುರುದ್ವಾರಗಳಿಗೆ ನೀಡುತ್ತಿರುವ ಅನುದಾನವನ್ನು ರಾಜ್ಯ @BJP4Karnataka ಸರ್ಕಾರ ಮುಂದುವರಿಸಬೇಕು. ಕೊರೊನಾ ಸಂಕಷ್ಟ ಯಾರನ್ನೂ ಬಿಟ್ಟಿಲ್ಲ, ಹೀಗಿರುವಾಗ ಜಾತಿ, ಧರ್ಮದ ಆಧಾರದ ಮೇಲೆ ವಿಂಗಡಣೆ ಮಾಡುವುದು ಸರಿಯಲ್ಲ. 8/17#ಮಾಧ್ಯಮ_ಹೇಳಿಕೆ
— Siddaramaiah (@siddaramaiah) June 10, 2021
ಇನ್ನು, ಈ ಬಗ್ಗೆ ನಿನ್ನೆ(ಗುರುವಾರ, ಜೂನ್ 09) ಹೇಳಿಕೆ ನೀಡಿದ್ದ ಸಚಿವ ಕೋಟ, ಇತರ ಯಾವುದೇ ಧರ್ಮದ ಧಾರ್ಮಿಕ ಕೇಂದ್ರಗಳಿಗೆ ಹಣದ ಅವಶ್ಯಕತೆಯಿದ್ದಲ್ಲಿ ಆಯಾ ಇಲಾಖೆಯಿಂದ ಹಣ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲು ಸೂಚಿಸಲಾಗುವುದು ಎಂದು ಹೇಳಿದ್ದರು.
ಹಿಂದೂ ಧಾರ್ಮಿಕ ದತ್ತಿ ಇಲಾಖೆಯಿಂದ ಮಸೀದಿ, ಮದ್ರಸಾಗಳಿಗೆ ತಸ್ತೀಕ್ ನೀಡುವುದಕ್ಕೆ ವಿಹಿಂಪ, ಬಜರಂಗದಳ ಸಹಿತ ಹಿಂದೂ ಪರ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದವು.
ಇದನ್ನೂ ಓದಿ : ಪಡುಬಿದ್ರಿ: ಪೊಲೀಸ್ ಸಿಬ್ಬಂದಿಗೆ ಆ್ಯಂಬುಲೆನ್ಸ್ ಢಿಕ್ಕಿ; ಅಪಾಯದಿಂದ ಪಾರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.