ಸಿದ್ದು “ಕಾವೇರಿ’ ನಿವಾಸ ಭಾಗ್ಯ ಬಿಎಸ್‌ವೈಗೆ
Team Udayavani, Sep 28, 2019, 3:00 AM IST
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ “ಕಾವೇರಿ’ ನಿವಾಸ ಹಂಚಿಕೆಯಾಗಿದ್ದು, ಆ ನಿವಾಸದಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸವನ್ನು “ಖಾಲಿ’ ಮಾಡಬೇಕಾಗಿದೆ. ಈ ಹಿಂದೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ರೇಸ್‌ಕೋರ್ಸ್ ರಸ್ತೆಯ ರೇಸ್‌ವ್ಯೂ ಕಾಟೇಜ್ ವಸತಿ ಗೃಹವನ್ನು ಹಂಚಿಕೆ ಮಾಡಲಾಗಿತ್ತು.
ಇದೀಗ ಆ ಆದೇಶ ಬದಲಾಯಿಸಿ, ಕಾವೇರಿ ನಿವಾಸ ಹಂಚಿಕೆ ಮಾಡಲಾಗಿದೆ. ಗೃಹ ಕಚೇರಿ “ಕೃಷ್ಣಾ’ ಪಕ್ಕದಲ್ಲಿರುವ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಾಸ್ತವ್ಯ ಹೂಡಿದರೆ ದೈನಂದಿನ ಕೆಲಸ ಕಾರ್ಯಗಳಿಗೆ ಸುಗಮವಾಗಲಿದೆ ಎಂಬ ಕಾರಣಕ್ಕೆ ಕಾವೇರಿಯಲ್ಲಿ ವಾಸ್ತವ್ಯ ಹೂಡಲು ತೀರ್ಮಾನಿಸಿದ್ದಾರೆಂದು ಹೇಳಲಾಗಿದೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಯಾಗಿದ್ದಾಗ ಕಾವೇರಿ ನಿವಾಸದಲ್ಲಿ ವಾಸ್ತವ್ಯ ಇದ್ದರು.
ನಂತರ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದಾಗ ಆ ನಿವಾಸ ಸಚಿವರಾಗಿದ್ದ ಕೆ.ಜೆ.ಜಾರ್ಜ್ ಅವರಿಗೆ ಹಂಚಿಕೆಯಾಗಿತ್ತಾದರೂ ಸಿದ್ದರಾಮಯ್ಯ ಅವರೇ ಅಲ್ಲಿ ವಾಸ್ತವ್ಯ ಮುಂದುವರಿಸಿದ್ದರು. ಬಿಜೆಪಿ ಸರ್ಕಾರ ಬಂದ ನಂತರವೂ ಸಿದ್ದರಾಮಯ್ಯ ಅವರೇ ಅಲ್ಲಿ ವಾಸ್ತವ್ಯವಿದ್ದರು. ಪ್ರತಿಪಕ್ಷ ನಾಯಕರಾಗಿ ನೇಮಕಗೊಂಡರೆ ಅದೇ ನಿವಾಸಕ್ಕೆ ಬೇಡಿಕೆ ಇಡುವ ಯೋಚನೆಯೂ ಅವರಿಗೆ ಇತ್ತು ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
VAO ಹುದ್ದೆ: ಅಂತಿಮ ಕೀ ಉತ್ತರ ಪ್ರಕಟ
ವಾಲ್ಮೀಕಿ ನಿಗಮ ಅಕ್ರಮ ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್ ಸೂಚನೆ
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.