ಸಿದ್ದು ಮಾತಿಗೆ ತಾಳ ತಂತಿನೇ ಇರಲ್ಲ: ಶೆಟ್ಟರ್
Team Udayavani, Nov 9, 2019, 3:06 AM IST
ಧಾರವಾಡ: ಸಿಎಂ ಯಡಿಯೂರಪ್ಪ ಹಾಗೂ ಪ್ರಧಾನಿ ಮೋದಿ ಸರ್ಕಾರ ಟೀಕಿಸಲು ಯಾವ ವಿಷಯವೂ ಇಲ್ಲದ್ದರಿಂದ ಕಾಂಗ್ರೆಸ್ ಆಡಿಯೋ-ವಿಡಿಯೋ ರಾಜಕಾರಣ ಮಾಡುತ್ತಿದೆ ಎಂದು ಬೃಹತ್ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್ ಆರೋಪಿಸಿದರು. ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿ, ಆಡಿಯೋ ವಿಷಯ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಈಗಾಗಲೇ ನ್ಯಾಯಾಲಯ ತನ್ನ ನಿಲುವು ಸ್ಪಷ್ಟಪಡಿಸಿದೆ.
ಆದರೂ ಈಗ ಇದನ್ನು ರಾಷ್ಟ್ರಪತಿ ಅಂಗಳಕ್ಕೆ ತೆಗೆದುಕೊಂಡು ಹೋಗಿರುವುದು ನಾಚಿಕೆಗೇಡು. ಬಿಜೆಪಿಯವರೇ ಆಡಿಯೋ ಬಿಡುಗಡೆ ಮಾಡಿದ್ದಾರೆಂದು ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಅವರು ಹಿಂದೆ-ಮುಂದೆ, ತಾಳ-ತಂತಿ ಏನೂ ಗೊತ್ತಿಲ್ಲ ಎಂಬಂತೆ ಮಾತನಾಡುತ್ತಾರೆ. ಯಾರ ಹೆಸರು ಹೇಳಿದರೂ, ಅದಕ್ಕೆ ದಾಖಲೆ ನೀಡಬೇಕು ಎಂದರು. ಇಂಥವರೇ ಆಡಿಯೋ ಬಿಡುಗಡೆ ಮಾಡಿದ್ದಾರೆಂದು ಆರೋಪಿಸುವ ಕಾಂಗ್ರೆಸ್‌ನವರ ಬಳಿ ಆಡಿಯೋ ಹೇಗೆ ಬಂತು ಎಂಬುದೇ ಗೊತ್ತಿಲ್ಲ.
ಏನೂ ಇಲ್ಲದೇ ದೇಶವ್ಯಾಪಿ ಸುದ್ದಿ ಮಾಡಲೆತ್ನಿಸುತ್ತಿದ್ದಾರೆ. ಇಂಥ ಕೆಲಸಗಳಿಂದಾಗಿಯೇ ಕಾಂಗ್ರೆಸ್ ಅಧೋಗತಿಗೆ ಇಳಿದಿದೆ. ರಾಜ್ಯದ ಜನರಿಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಮಾಡಿದ ಅನ್ಯಾಯವನ್ನು ಬಿಜೆಪಿ ಮಾಡುತ್ತಿಲ್ಲ. ಮೈತ್ರಿ ಸರ್ಕಾರ ಹಾಸನ, ಹೊಳೆನರಸಿಪುರಕ್ಕೆ ಹಣದ ಹೊಳೆ ಹರಿಸಿದೆ. ನಮ್ಮ ಸರ್ಕಾರ ವರದಿ ಆಧಾರದನ್ವಯ ಅನುದಾನ ನೀಡುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
High Court: ಮುಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್ ವಶಕ್ಕೆ ನೀಡಲ್ಲ
Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ
H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.