High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿ ಮೊಹಮ್ಮದ್ ಶಿಯಾಬ್ ಸಲ್ಲಿಸಿದ್ದ ಅರ್ಜಿ
Team Udayavani, Nov 2, 2024, 11:18 AM IST
ಬೆಂಗಳೂರು: ಕ್ರಿಮಿನಲ್ ಕೇಸ್ ಡೈರಿಯ ಪ್ರತೀ ಪುಟಕ್ಕೂ ತನಿಖಾಧಿಕಾರಿಯ ಸಹಿ ಹಾಕಲು ನಿರ್ದೇಶಿಸಬೇಕು ಎಂಬ ಕೊಲೆ ಪ್ರಕರಣದ ಆರೋಪಿಯೊಬ್ಬರ ಮನವಿಯನ್ನು ತಳ್ಳಿಹಾಕಿರುವ ಹೈಕೋರ್ಟ್ ಆ ಅರ್ಜಿಯನ್ನು ವಜಾಗೊಳಿಸಿದೆ.
ಸದ್ಯ ಇರುವ ಕಾನೂನುಗಳಲ್ಲಿ ಕೇಸ್ ಡೈರಿಯಲ್ಲಿ ಸಹಿ ಹಾಕಲು ಅವಕಾಶ ನೀಡುವಂತಹ ನಿಯಮಗಳು ಇಲ್ಲದಿರುವಾಗ, ಹಾಲಿ ಇರುವ ಕಾನೂನುಗಳನ್ನು ವಿಶ್ಲೇಷಣೆ ಮಾಡಬಹುದೇ ಹೊರತು, ವಿಶ್ಲೇಷಣೆ ಹೆಸರಲ್ಲಿ ನ್ಯಾಯಾಲಯಗಳಿಂದ ಹೊಸ ಕಾನೂನು ಜಾರಿಗೊಳಿಸಲಾಗದು ಎಂದೂ ಹೈಕೋರ್ಟ್ ಹೇಳಿದೆ.
2 ವರ್ಷಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಆರೋಪಿ ಮೊಹಮ್ಮದ್ ಶಿಯಾಬ್ ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯನ್ನು ಮುಖ್ಯ ನ್ಯಾ| ಎನ್.ವಿ. ಅಂಜಾರಿಯಾ ಮತ್ತು ನ್ಯಾ| ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠ ವಜಾಗೊಳಿಸಿದೆ.
ತನಿಖಾ ಸಂಸ್ಥೆಗಳು ನಿರ್ವಹಿಸುತ್ತಿರುವ ಕೇಸ್ ಡೈರಿಯನ್ನು ತಿದ್ದುವ ಅಥವಾ ತಿರುಚುವ ಸಾಧ್ಯತೆ ಹಿನ್ನೆಲೆಯಲ್ಲಿ ಅದರ ಪ್ರತೀಪುಟಕ್ಕೂ ತನಿಖಾಧಿಕಾರಿಯ ಸಹಿ ಹಾಕಲು ನಿರ್ದೇ ಶನ ನೀಡಬೇಕೆಂದು ಕೋರಿ ಆರೋಪಿ ಶಿಯಾಬ್ ಅರ್ಜಿ ಸಲ್ಲಿಸಿದ್ದರು.
ಅರ್ಜಿದಾರರ ವಿರುದ್ಧ ಕಾನೂನು ಬಾಹಿರ ಚಟುವಟಿಕೆ ನಿಯಂತ್ರಣ ಕಾಯಿದೆ (ಯುಎಪಿಎ) ಅಡಿ ಪ್ರಕರಣ ದಾಖಲಿಸಲಾಗಿದೆ. ಆದರೆ, ನಿಯಮದಲ್ಲಿ ಎಲ್ಲೂ ಪ್ರತೀ ಪುಟದಲ್ಲೂ ತನಿಖಾಧಿಕಾರಿ ಸಹಿ ಹಾಕಬೇಕು ಎಂಬ ಉಲ್ಲೇಖವಿಲ್ಲ. ಆದ್ದರಿಂದ ನ್ಯಾಯಾಲಯ ಹಾಗೆ ಮಾಡುವಂತೆ ಪದಗಳನ್ನು ಸೇರ್ಪಡೆ ಮಾಡಲಾಗದು. ಹಾಗಾಗಿ ಅರ್ಜಿದಾರರ ಮನವಿ ಮಾನ್ಯ ಮಾಡಲಾಗದು ಎಂದು ನ್ಯಾಯಾಲಯ ಆದೇಶಿಸಿದೆ.
ವ್ಯಾಪ್ತಿ ಮೀರಿ ಕಾನೂನು ಸೃಷ್ಟಿಸಲಾಗದು ನ್ಯಾಯಾಲಯಕ್ಕೆ ಶಾಸನ ಬದ್ಧ ನಿಯಮಗಳ ಅನ್ವಯ ಶಾಸನಗಳಲ್ಲಿರುವ ಪದಗಳನ್ನು ವ್ಯಾಖ್ಯಾನ ಅಥವಾ ವಿಶ್ಲೇಷಣೆ ಮಾಡುವ ಅಧಿಕಾರವಿದೆ. ಕೋರ್ಟ್ ತನ್ನ ವ್ಯಾಪ್ತಿಯನ್ನು ಮೀರಿ ಕಾನೂನು ಸೃಷ್ಟಿಸಲಾಗದು. ಶಾಸನವನ್ನು ರಚಿಸಿದ ಅನಂತರ ಅದರಲ್ಲಿರುವ ಪದಗಳನ್ನು ಹೊರತುಪಡಿಸಿ ನ್ಯಾಯಾಲಯವೇ ಹೆಚ್ಚುವರಿ ಪದಗಳನ್ನು ಸೇರ್ಪಡೆ ಮಾಡಲಾಗದು ಎಂದು ನ್ಯಾಯಪೀಠ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ
Kollywood: ಧನುಷ್ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.