ಕೆಎಸ್‌ಆರ್‌ಟಿಯ 283 ಚಾಲಕರಿಗೆ ಬೆಳ್ಳಿಪದಕ
Team Udayavani, Jan 20, 2019, 12:45 AM IST
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ)ಯು ಅಪಘಾತರಹಿತ ಮತ್ತು ಅಪರಾಧರಹಿತ ಚಾಲಕರಿಗೆ ಗಣರಾಜ್ಯೋತ್ಸವದ ಅಂಗವಾಗಿ ಬೆಳ್ಳಿಪದಕ ನೀಡಲಿದ್ದು, ಪ್ರಸಕ್ತ ಸಾಲಿನಲ್ಲಿ 283 ಚಾಲಕರು ಈ ಸನ್ಮಾನಕ್ಕೆ ಭಾಜನರಾಗಿದ್ದಾರೆ.
ನಿಗಮದ ವ್ಯಾಪ್ತಿಯ 17 ವಿಭಾಗಗಳಲ್ಲಿ ಕಳೆದ ಐದು ವರ್ಷಗಳಿಂದ ಅಪಘಾತರಹಿತ ಮತ್ತು ಅಪರಾಧರಹಿತ ಸೇವೆ ಸಲ್ಲಿಸಿದ ಒಟ್ಟಾರೆ 283 ಚಾಲಕ-ಕಂ-ನಿರ್ವಾಹಕರಿಗೆ “ಸುರಕ್ಷತಾ ಚಾಲಕ’ ಎಂಬ ಬಿರುದು ನೀಡಿ, ಗಂಡಭೇರುಂಡ ಲಾಂಛನವುಳ್ಳ 32 ಗ್ರಾಂ ಬೆಳ್ಳಿಪದಕ ಹಾಗೂ ಎರಡು ಸಾವಿರ ನಗದು ಮತ್ತು ಪ್ರಶಂಸನಾ ಪತ್ರ ನೀಡಿ ಗೌರವಿಸಲಾಗುವುದು. ಜತೆಗೆ ಮಾಸಿಕ 50 ರೂ. ಪ್ರೋತ್ಸಾಹ ಭತ್ಯೆಯನ್ನೂ ನೀಡಲಾಗುತ್ತದೆ.
ಬೆಂಗಳೂರು (ಕೇಂದ್ರೀಯ) ವಿಭಾಗದ 32 ಸಿಬ್ಬಂದಿ, ರಾಮನಗರ 17, ತುಮಕೂರು 10, ಕೋಲಾರ 62, ಚಿಕ್ಕಬಳ್ಳಾಪುರ 23, ಮೈಸೂರು ನಗರ 1 ಮತ್ತು ಗ್ರಾಮಾಂತರ 12, ಮಂಡ್ಯ 13, ಚಾಮರಾಜನಗರ 12, ಹಾಸನ 24, ಚಿಕ್ಕಮಗಳೂರು 11, ಮಂಗಳೂರು 6, ಪುತ್ತೂರು 15, ದಾವಣಗೆರೆ 26, ಶಿವಮೊಗ್ಗ 11, ಕೆಂಪೇಗೌಡ ಬಸ್ ನಿಲ್ದಾಣ 2 ಹಾಗೂ ಕೇಂದ್ರ ಕಚೇರಿ ವಿಭಾಗದ 6 ಚಾಲಕ- ಕಂ-ಸಿಬ್ಬಂದಿ ಬೆಳ್ಳಿಪದಕಕ್ಕೆ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ
Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.