ಸದ್ದಿಲ್ಲದೇ ಕಾಣೆಯಾಗಿವೆ ‘ಸಿಟಿ ಬಸ್‌ಗಳು’

Team Udayavani, Mar 19, 2021, 7:00 PM IST

ಗ್ಜಹ್ಗಹಜ್ಗಜಹ್ನ

ಸಿಂಧನೂರು : ನಗರದ ವಿವಿಧ ಮಾರ್ಗ ಹಾಗೂ ಬಸ್‌ ನಿಲ್ದಾಣಗಳಲ್ಲಿ ಕಣ್ಣಿಗೆ ಬೀಳುತ್ತಿದ್ದ ಸಿಟಿ ಬಸ್‌ ಗಳು ಕಾಣೆಯಾಗಿದ್ದು, ತಾಲೂಕಿಗೆ ಲಭಿಸಿದ ಸಾರಿಗೆ ಸೌಲಭ್ಯವನ್ನೇ ಬೇರೆ ತಾಲೂಕುಗಳಿಗೆ ವರ್ಗಾಯಿಸುವ ಮೂಲಕ ಅ ಧಿಕಾರಿಗಳು ಉದಾರತೆ ಮೆರೆದ ಸಂಗತಿ ಬೆಳಕಿಗೆ ಬಂದಿದೆ.

2016-17ನೇ ಸಾಲಿನಲ್ಲಿ ಬೆಳೆಯುತ್ತಿರುವ ತಾಲೂಕಿಗೆ ಅನುಕೂಲವಾಗಲೆಂದು ನಗರದ ಸಾರಿಗೆ ಡಿಪೋಕ್ಕೆ 20 ಸಿಟಿ ಬಸ್‌ ಮಂಜೂರಾಗಿದ್ದವು. ಆರಂಭದ ದಿನಗಳಲ್ಲಿ ಬೇಡಿಕೆ ಆಧರಿಸಿ ಕುಷ್ಟಗಿ ರಸ್ತೆಯ ಹತ್ತಿರದ ಹಳ್ಳಿಗಳು, ಮಸ್ಕಿ ಮಾರ್ಗದ ಹಳ್ಳಿಗಳು, ಗಂಗಾವತಿ ಮಾರ್ಗದ ಹಳ್ಳಿಗಳಿಗೆ ಬಸ್‌ಗಳನ್ನು ಓಡಿಸಲಾಗುತ್ತಿತ್ತು. ಇದರಿಂದ ಜನರಿಗೆ ಅನುಕೂಲವಾಗಿತ್ತು. ಹೆಚ್ಚಿನ ಬಸ್‌ಗಳು ದೊರೆತ ಹಿನ್ನೆಲೆಯಲ್ಲಿ ಜನ ಕಾಯ್ದು ಕುಳಿತುಕೊಳ್ಳಬೇಕಾದ ತೊಂದರೆ ತಪ್ಪಿತ್ತು. ಕೆಲ ವರ್ಷಗಳ ನಂತರ ಹಂತ-ಹಂತವಾಗಿ ಬಸ್‌ಗಳನ್ನೇ ಬೇರೆ ತಾಲೂಕುಗಳಿಗೆ ಕಳಿಸಲಾಗಿದೆ.

ಹೋಗಿದ್ದು ಎಲ್ಲಿಗೆ?: ಇಲ್ಲಿನ ಡಿಪೋದಲ್ಲಿ ಲಭ್ಯವಿದ್ದ 20 ಸಿಟಿ ಬಸ್‌ಗಳ ಪೈಕಿ 2 ಬಸ್‌ಗಳನ್ನು ಸೆಪ್ಟೆಂಬರ್‌ 3, 2019ರಂದು ಲಿಂಗಸುಗೂರು ಸಾರಿಗೆ ಘಟಕಕ್ಕೆ ವರ್ಗಾಯಿಸಲಾಗಿದೆ. ಆಗಸ್ಟ್‌ 11 ಹಾಗೂ ಸೆಪ್ಟೆಂಬರ್‌ 27, 2017ರಂದು 4 ಬಸ್‌ಗಳನ್ನು ಮಸ್ಕಿಗೆ ಕಳಿಸಲಾಗಿದೆ. ಇದೇ ವೇಳೆ ಕಲಬುರಗಿ ಡಿಪೋಗೆ 6 ಬಸ್‌ಗಳನ್ನು ವರ್ಗಾಯಿಸಲಾಗಿದೆ. ಮಾರ್ಚ್‌ 1, 2019ರಂದು ರಾಯಚೂರು ಘಟಕಕ್ಕೆ 1, ಯಾದಗಿರಿ ಘಟಕಕ್ಕೆ 1 ಬಸ್‌ನ್ನು ಕಳಿಸಲಾಗಿದೆ. ಕೊನೆಯಲ್ಲಿ 6 ಸಿಟಿ ಬಸ್‌ ಗಳನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಮಾರ್ಚ್‌ 20, 2015ರವರೆಗೆ ಸ್ಥಳೀಯ ಡಿಪೋದ ವಶದಲ್ಲಿ ಬಸ್‌ ಗಳನ್ನು ಹಂತ-ಹಂತವಾಗಿ ಬೇರೆಡೆ ರವಾನಿಸಲಾಗಿದೆ.

ತಾಲೂಕು ಕಡೆಗಣನೆ: ಜಿಲ್ಲೆಯ ಬೇರೆ ಡಿಪೋಗಳಲ್ಲಿ ಸಿಟಿ ಬಸ್‌ಗಳಿಗೆ ಭಾರಿ ಬೇಡಿಕೆ ಇದೆ ಎಂಬುದನ್ನು ಸಾರಿಗೆ ಇಲಾಖೆ ಅ ಧಿಕಾರಿಗಳೇ ಪರೋಕ್ಷವಾಗಿ ಒಪ್ಪಿಕೊಳ್ಳುತ್ತಿದ್ದಾರೆ. ಮಸ್ಕಿ, ಲಿಂಗಸುಗೂರು, ರಾಯಚೂರು, ಯಾದಗಿರಿ, ಕಲಬರುಗಿಯಲ್ಲಿ ಸಿಟಿ ಬಸ್‌ಗಳು ಸೇವೆಗೆ ಬೇಕಾಗಿವೆ. ಅಲ್ಲಿನ ಅಧಿ ಕಾರಿಗಳು ಇಲ್ಲಿನ ಸಿಬ್ಬಂದಿಯ ಮೇಲೆ ಒತ್ತಡ ತಂದು ಬಸ್‌ ಗಳನ್ನು ವರ್ಗಾಯಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ನಿತ್ಯ ವಿದ್ಯಾರ್ಥಿಗಳು ಸಾರಿಗೆ ಬಸ್‌ ಸೌಕರ್ಯವಿಲ್ಲದ ಕಾರಣಕ್ಕೆ ನಿಲ್ದಾಣದಲ್ಲಿ ಕಾದು ಕುಳಿತುಕೊಳ್ಳುವುದು ಸಾಮಾನ್ಯವಾಗಿದೆ. ಆದರೆ, ಇರುವ ಬಸ್‌ಗಳನ್ನೇ ಬೇರೆ ತಾಲೂಕುಗಳಿಗೆ ಕಳಿಸಿ, ಇಲ್ಲಿನ ಜನರಿಗೆ ಸಿಗಬೇಕಾದ ಸೌಲಭ್ಯ ಕಡಿತಗೊಳಿಸಿದ ಅಧಿ ಕಾರಿಗಳ ನಡೆ ಅಚ್ಚರಿಗೆ ಕಾರಣವಾಗಿದೆ.

ಟಾಪ್ ನ್ಯೂಸ್

Gundlupet-Arrest

Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು

amit Shah (2)

Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ

ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ

ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ

renukaacharya

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ

Team India: ದ.ಆಫ್ರಿಕಾ ವಿರುದ್ದದ ಗೆಲುವಿನೊಂದಿಗೆ ಪಾಕ್‌ ದಾಖಲೆ ಮುರಿದ ಟೀಂ ಇಂಡಿಯಾ

Team India: ದ.ಆಫ್ರಿಕಾ ವಿರುದ್ದದ ಗೆಲುವಿನೊಂದಿಗೆ ಪಾಕ್‌ ದಾಖಲೆ ಮುರಿದ ಟೀಂ ಇಂಡಿಯಾ

BGT: Another shock for Team India; After Virat and Rahul, another batsman is injured

BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್‌, ರಾಹುಲ್‌ ಬಳಿಕ ಮತ್ತೊಬ್ಬ ಬ್ಯಾಟರ್‌ ಗೆ ಗಾಯ

1-ragaaa

PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

renukaacharya

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

Gundlupet-Arrest

Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು

amit Shah (2)

Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ

ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ

ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ

renukaacharya

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.