Prajwal Revanna Case: ಚಾರ್ಜ್‌ಶೀಟ್ ಪರಿಶೀಲಿಸಿ ಗೌಪ್ಯ ವಿಚಾರಣೆ ತೀರ್ಮಾನ
Team Udayavani, Sep 10, 2024, 6:10 AM IST
ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣಗಳಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಸಲ್ಲಿಸಲಾಗಿರುವ ಚಾರ್ಜ್‌ಶೀಟ್‌ನಲ್ಲಿನ ಅಂಶಗಳನ್ನು ಪರಿಶೀಲಿಸಿ, ಅರ್ಜಿಗಳ ಗೌಪ್ಯ ವಿಚಾರಣೆ ಸಂಬಂಧಿಸಿದಂತೆ ನಿರ್ಧರಿಸಲಾಗುವುದು ಎಂದು ಹೈಕೋರ್ಟ್ ಹೇಳಿದೆ.
ಹಾಸನ ಜಿಲ್ಲೆ ಯ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಹಾಗೂ ಬೆಂಗಳೂರಿನ ಸಿಐಡಿ ಪೊಲೀಸರು ದಾಖಲಿಸಿರುವ ಮತ್ತೆರಡು ಪ್ರಕರಣಗಳಲ್ಲಿ ನಿರೀಕ್ಷಣ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಅರ್ಜಿಗಳನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.
ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಪ್ರಾಸಿಕ್ಯೂಷನ್ ಸಲ್ಲಿಸಿರುವ ಚಾರ್ಜ್‌ಶೀಟ್ ಪರಿಶೀಲಿಸಿದ ಬಳಿಕ, ಅರ್ಜಿಗಳ ಗೌಪ್ಯ ವಿಚಾರಣೆ (ಇನ್ ಕ್ಯಾಮರಾ) ನಡೆಸುವ ಸಂಬಂಧ ಮುಖ್ಯ ನ್ಯಾಯಮೂರ್ತಿಗಳಿಂದ ಸೂಕ್ತ ಆದೇಶ ಪಡೆದುಕೊಳ್ಳಲಾಗುವುದು ಎಂದು ಮೌಖಿಕವಾಗಿ ಹೇಳಿ ವಿಚಾರಣೆಯನ್ನು ಸೆ. 12ಕ್ಕೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.