SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

Team Udayavani, Apr 30, 2024, 12:32 AM IST

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

ಬೆಂಗಳೂರು: ಪ್ರಜ್ವಲ್‌ ರೇವಣ್ಣ ಅವರ ಅಶ್ಲೀಲ ವೀಡಿಯೋ ಪ್ರಕರಣದ ತನಿಖೆ ಆರಂಭಿ ಸಿರುವ ಸಿಐಡಿ ವಿಶೇಷ ತನಿಖಾ ತಂಡ(ಎಸ್‌ಐಟಿ)ದ ಅಧಿಕಾರಿಗಳು ಸೋಮವಾರ ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಮತ್ತೊಂದೆಡೆ ಎಸ್‌ಐಟಿಗೆ ಡಿವೈಎಸ್ಪಿ ಪ್ರಭಾವತಿ ಸಹಿತ 25ಕ್ಕೂ ಅಧಿಕ ಸಿಬಂದಿಯನ್ನು ನೇಮಿಸಿಕೊಳ್ಳಲಾಗಿದೆ.

ಹೊಳೇನರಸೀಪುರ ಠಾಣೆಯಲ್ಲಿ ದಾಖಲಾ ಗಿದ್ದ ಪ್ರಕರಣಗಳ ಕಡತಗಳು ಎಸ್‌ಐಟಿಗೆ ಹಸ್ತಾಂತರ ವಾಗಿದ್ದು, ಇದರ ಬೆನ್ನಲ್ಲೇ ಸೋಮ ವಾರ ದೂರುದಾರೇ ಸೇರಿ ಇಬ್ಬರು ಸಂತ್ರಸ್ತೆಯ ರನ್ನು ಸಿಐಡಿ ಕಚೇರಿಗೆ ಕರೆಸಿಕೊಂಡು ಹೇಳಿಕೆ ದಾಖಲಿಸಿ ಕೊಳ್ಳಲಾಗಿದೆ. ಸಂತ್ರಸ್ತೆಯರನ್ನು ಮೈಸೂರು ಎಸ್ಪಿ ಸೀಮಾ ಲಾಟ್ಕರ್‌ ವಿಚಾರಣೆ ನಡೆಸಿದ್ದಾರೆ.

ಈ ವೇಳೆ ಪ್ರಕರಣದ ಆರೋಪಿಗಳಾದ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಮತ್ತು ಅವರ ಪುತ್ರ ಸಂಸದ ಪ್ರಜ್ವಲ್‌ ರೇವಣ್ಣ ಎಷ್ಟು ವರ್ಷಗಳಿಂದ ಪರಿಚಯ? 2019ರಿಂದ 2022ರ ವರೆಗೆ ದೌರ್ಜನ್ಯ ನಡೆದಿದೆ ಎಂದು ದೂರಿನಲ್ಲಿ ಆರೋಪಿಸಿದ್ದಿರಿ?ಇದುವರೆಗೂ ಯಾಕೆ ದೂರು ನೀಡಿಲ್ಲ? ಯಾರಿಂದಾದರೂ ಪ್ರಾಣ ಬೆದರಿಕೆ ಇತ್ತೇ? ಯಾವ ರೀತಿ ಆಮಿಷವೊಡ್ಡಿ ಅಥವಾ ಬೆದರಿಕೆಯೊಡ್ಡಿ ತಮ್ಮ ಮೇಲೆ ದೌರ್ಜನ್ಯ ಎಸಗಿದ್ದಾರೆ ಮುಂತಾದ ಹಲವಾರು ಪ್ರಶ್ನೆಗಳನ್ನು ಕೇಳಲಾಗಿದೆ. ಅದಕ್ಕೆ ಸಂತ್ರಸ್ತೆಯರು, ತಮ್ಮ ಮೇಲಿನ ದೌರ್ಜನ್ಯವನ್ನು ಈ ಹಿಂದೆಯೂ ಹಲವು ಬಾರಿ ಖಂಡಿಸಿದ್ದೆವು. ಆಗ ತಮ್ಮ ಮತ್ತು ತಮ್ಮ ಕುಟುಂಬಕ್ಕೆ ಜೀವ ಬೆದರಿಕೆ ಹಾಕಲಾಗಿತ್ತು. ಹೀಗಾಗಿ ದೂರು ನೀಡಿರಲಿಲ್ಲ ಎಂದಿದ್ದಾರೆ. ಮಧ್ಯಾಹ್ನ 2ರಿಂದ ರಾತ್ರಿ 7 ಗಂಟೆವರೆಗೆ ಸಂತ್ರಸ್ತೆಯರ ವಿಚಾರಣೆ ನಡೆಸಲಾಗಿದೆ ಎಂದು ಸಿಐಡಿ ಮೂಲಗಳು ತಿಳಿಸಿವೆ.

25 ಮಂದಿ ನೇಮಕ
ವೀಡಿಯೋ ಸಂಬಂಧ ಸಿಐಡಿ ಎಡಿಜಿಪಿ ಬಿ.ಕೆ.ಸಿಂಗ್‌ ನೇತೃತ್ವದಲ್ಲಿ ಇಬ್ಬರು ಮಹಿಳಾ ಐಪಿಎಸ್‌ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಪ್ರಭಾವತಿ ಸಹಿತ ಮೂವರು ಮಹಿಳಾ ಡಿವೈಎಸ್ಪಿ, ಮೂವರು ಇನ್‌ಸ್ಪೆಕ್ಟರ್‌, ನಾಲ್ವರು ಪಿಎಸ್‌ಐ, ಸಿಐಡಿ ಸೈಬರ್‌ ತಂಡ ಸಹಿತ 25ಕ್ಕೂ ಹೆಚ್ಚು ಅಧಿಕಾರಿ-ಸಿಬಂದಿ ಕಾರ್ಯನಿರ್ವಹಿಸಲಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋಗಳು ವೈರಲ್‌ ಆಗಿವೆ. ಅವುಗಳ ಸತ್ಯಾಸತ್ಯತೆ ತಿಳಿಯಲು ಸೈಬರ್‌ ತಂಡದ ಅಧಿಕಾರಿಗಳ ನೆರವು ಪಡೆಯಲಾಗಿದೆ. ಅದರಲ್ಲಿ ಆರೋಪಿ ಪ್ರಜ್ವಲ್‌ ರೇವಣ್ಣನ ಮುಖ ಚಹರೆ ಪತ್ತೆಯಾಗಿಲ್ಲ. ಆತನ ಧ್ವನಿ ಆಧರಿಸಿ ಆತನೇ ವೀಡಿಯೋದಲ್ಲಿರುವ ವ್ಯಕ್ತಿ ಎಂದು ಖಚಿತಪಡಿಸಿಕೊಳ್ಳಬೇಕಿದೆ. ಹೀಗಾಗಿ ಕೆಲ ತಜ್ಞರನ್ನು ನೇಮಿಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸಂತ್ರಸ್ತೆಯರ ಪತ್ತೆ
ಕಾರ್ಯವೇ ತಲೆನೋವು
ಮೂಲಗಳ ಪ್ರಕಾರ ಸಾವಿರಾರು ವೀಡಿಯೋಗಳು ವೈರಲ್‌ ಆಗಿವೆ ಎಂದು ಹೇಳಲಾಗಿದೆ. ಈ ವೀಡಿಯೋದಲ್ಲಿರುವ ಎಲ್ಲ ಮಹಿಳೆಯರನ್ನು ಪತ್ತೆ ಹಚ್ಚುವುದು ಕಷ್ಟ. ಈ ಪೈಕಿ ಕೆಲವರನ್ನು ಪತ್ತೆ ಹಚ್ಚಿ ಹೇಳಿಕೆ ನೀಡುವಂತೆ ಪರೋಕ್ಷವಾಗಿ ಮನವಿ ಮಾಡಬಹುದು. ಒಂದು ವೇಳೆ ಅವರು ನಿರಾಕರಿಸಿದರೆ, ಯಾರಿಗೂ ಬಲವಂತ ಮಾಡುವಂತಿಲ್ಲ. ಹೇಳಿಕೆ ನೀಡಿದರೆ, ಸಾಕ್ಷ್ಯಗಳನ್ನಾಗಿ ಪರಿಗಣಿಸಬಹುದು ಎಂದು ಮೂಲಗಳು ತಿಳಿಸಿವೆ.

ವಿದೇಶದಲ್ಲಿರುವ ಪ್ರಜ್ವಲ್‌
ಪ್ರಕರಣದ 2ನೇ ಆರೋಪಿ ಪ್ರಜ್ವಲ್‌ ರೇವಣ್ಣ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ವಿದೇಶಕ್ಕೆ ತೆರಳಿದ್ದಾರೆ. ಸದ್ಯ ಜರ್ಮನಿಯಲ್ಲಿದ್ದಾರೆ ಎಂದು ಹೇಳಲಾಗಿದೆ. ಹೀಗಾಗಿ ಪ್ರಕರಣದಲ್ಲಿ ಅವರ ಹೇಳಿಕೆ ಪಡೆಯಲೇಬೇಕಿದೆ. ಆದರಿಂದ ಅವರ ಮನೆಯವರ ಮೂಲಕ ಸಂಪರ್ಕಿಸಿ ಮೌಖಿಕ ಮತ್ತು ವಾಟ್ಸ್‌ಆ್ಯಪ್‌ ಮೂಲಕ ನೋಟಿಸ್‌ ನೀಡಲಾಗುತ್ತದೆ. ಒಂದು ವೇಳೆ ಅದಕ್ಕೆ ಸರಿಯಾದ ರೀತಿಯಲ್ಲಿ ಸ್ಪಂದಿಸದಿದ್ದರೆ ಕಾನೂನು ಮೂಲಕ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

hk-patil

Waqf ಗೆಜೆಟ್ ನೋಟಿಫಿಕೇಶನ್ ನಲ್ಲಿ ಬಿಜೆಪಿ ಪಾಲಿದೆ: ಎಚ್.ಕೆ. ಪಾಟೀಲ್ ಕಿಡಿ

lakshaman-savadi

Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ‌‌‌: ಲಕ್ಷ್ಮಣ ಸವದಿ

Khandre

Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ

firing

Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!

BBK11: ಬಿಗ್‌ಬಾಸ್‌ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ

BBK11: ಬಿಗ್‌ಬಾಸ್‌ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ

ARMY (2)

Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್‌ಗಳು

Tollywood: ಲೋಕೇಶ್‌, ಪ್ರಶಾಂತ್‌ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್ ಗೆ ಪ್ರಭಾಸ್‌ ಎಂಟ್ರಿ?

Tollywood: ಲೋಕೇಶ್‌, ಪ್ರಶಾಂತ್‌ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್ ಗೆ ಪ್ರಭಾಸ್‌ ಎಂಟ್ರಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hk-patil

Waqf ಗೆಜೆಟ್ ನೋಟಿಫಿಕೇಶನ್ ನಲ್ಲಿ ಬಿಜೆಪಿ ಪಾಲಿದೆ: ಎಚ್.ಕೆ. ಪಾಟೀಲ್ ಕಿಡಿ

lakshaman-savadi

Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ‌‌‌: ಲಕ್ಷ್ಮಣ ಸವದಿ

Khandre

Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ

ಸಿಎಂ ಗೆ ರೈತ ಬಗ್ಗೆ ಕಾಳಜಿ ಇದ್ದರೆ ವಕ್ಫ್‌ ಗೆಜೆಟ್ ನೋಟಿಫಿಕೇಶನ್ ರದ್ದು ಮಾಡಲಿ: ಬೊಮ್ಮಾಯಿ

ಸಿಎಂ ಗೆ ರೈತರ ಬಗ್ಗೆ ಕಾಳಜಿ ಇದ್ದರೆ ವಕ್ಫ್‌ ಗೆಜೆಟ್ ನೋಟಿಫಿಕೇಶನ್ ರದ್ದು ಮಾಡಲಿ: ಬೊಮ್ಮಾಯಿ

ಹಾಸನಾಂಬೆ ದರ್ಶನಕ್ಕೆ ವಿಧ್ಯುಕ್ತ ತೆರೆ; 9 ದಿನದಲ್ಲಿ 19 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ

ಹಾಸನಾಂಬೆ ದರ್ಶನಕ್ಕೆ ವಿಧ್ಯುಕ್ತ ತೆರೆ; 9 ದಿನದಲ್ಲಿ 19 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

hk-patil

Waqf ಗೆಜೆಟ್ ನೋಟಿಫಿಕೇಶನ್ ನಲ್ಲಿ ಬಿಜೆಪಿ ಪಾಲಿದೆ: ಎಚ್.ಕೆ. ಪಾಟೀಲ್ ಕಿಡಿ

lakshaman-savadi

Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ‌‌‌: ಲಕ್ಷ್ಮಣ ಸವದಿ

20

Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು

Khandre

Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ

firing

Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.