SIT ಪ್ರಜ್ವಲ್ ಕರೆತರಲು ವಿದೇಶಕ್ಕೆ ಹೋಗುವುದಿಲ್ಲ: ಡಾ.ಜಿ.ಪರಮೇಶ್ವರ್ ಸ್ಪಷ್ಟನೆ
ರಾಜಕೀಯ ಮುಖಂಡರಿಗೆ ಎಚ್ಚರಿಕೆ ನೀಡಿದ ಗೃಹ ಸಚಿವ
Team Udayavani, May 12, 2024, 2:00 PM IST
ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳ ಆರೋಪದ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT) ಅವರನ್ನು ವಾಪಸ್ ಕರೆತರಲು ವಿದೇಶಕ್ಕೆ ಹೋಗುವುದಿಲ್ಲ. ಇಂಟರ್ಪೋಲ್ ಅವರ ಬಗ್ಗೆ ಮಾಹಿತಿಯನ್ನು ಹಂಚಿಕೊಳ್ಳುತ್ತದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಅವರು ಭಾನುವಾರ ಹೇಳಿದ್ದಾರೆ.
ಸೂಕ್ಷ್ಮವಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಹೇಳಿಕೆಗಳನ್ನು ನೀಡುವುದು ಅಥವಾ ಮಾಹಿತಿಯನ್ನು ಹಂಚಿಕೊಳ್ಳುವ ಬಗ್ಗೆ ರಾಜಕೀಯ ಮುಖಂಡರಿಗೆ ಎಚ್ಚರಿಕೆಯನ್ನೂ ಗೃಹ ಸಚಿವರು ನೀಡಿದ್ದಾರೆ.
”ಕರೆತರಲು ವಿದೇಶಕ್ಕೆ ತೆರಳುವ ಯಾವುದೇ ಆಯ್ಕೆ ಇಲ್ಲ. ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಲಾಗಿದ್ದು, ಇಂಟರ್ ಪೋಲ್ ಮಾಹಿತಿ ಹಂಚಿಕೊಳ್ಳಲಿದೆ. ಪ್ರಜ್ವಲ್ ಪತ್ತೆಯಾದ ದೇಶದವರು ಇಂಟರ್ಪೋಲ್ ಗೆ ತಿಳಿಸುತ್ತಾರೆ, ನಂತರ ನಮ್ಮ ಏಜೆನ್ಸಿಗಳು, ಸಿಬಿಐ ತಿಳಿದು ಅವರ ಮೂಲಕ ನಾವು ತಿಳಿದುಕೊಳ್ಳುತ್ತೇವೆ. ಇಲ್ಲಿಯವರೆಗೆ ಪ್ರಜ್ವಲ್ ಕುರಿತು ಯಾವುದೇ ಮಾಹಿತಿ ಇಲ್ಲ’ ಎಂದು ಪರಮೇಶ್ವರ್ ಹೇಳಿದರು.
ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ನಡೆದ ಒಂದು ದಿನದ ನಂತರ ಅಂದರೆ ಏಪ್ರಿಲ್ 27 ರಂದು ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಿದ್ದಾರೆ. ಮೊದಲ ಹಂತದಲ್ಲಿ ಚುನಾವಣೆ ನಡೆದ ಹಾಸನ ಲೋಕಸಭೆ ಕ್ಷೇತ್ರದಿಂದ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಜಂಟಿ ಅಭ್ಯರ್ಥಿಯಾಗಿ ಸ್ಫರ್ಧಿಸಿದ್ದು ಈಗಾಗಲೇ ಜೆಡಿಎಸ್ ಅವರನ್ನು ಪಕ್ಷದಿಂದ ಅಮಾನತು ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.