ಅಕ್ರಮ ಅದಿರು ರಫ್ತು ಕುರಿತುಎಸ್‌ಐಟಿ ತನಿಖೆ: ವರದಿ ಸಲ್ಲಿಕೆ
Team Udayavani, Nov 8, 2017, 7:35 AM IST
ಬೆಂಗಳೂರು: ರಾಜ್ಯದ ಬೇಲೆಕೇರಿ ಮತ್ತು ನವ ಮಂಗಳೂರು ಬಂದರಿನಿಂದ ಅಕ್ರಮವಾಗಿ ಅದಿರು ರಫ್ತು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಕೈಬಿಟ್ಟಿರುವ ತನಿಖೆಯನ್ನು ಎಸ್‌ಐಟಿಗೆ ವಹಿಸುವಂತೆ ಸಚಿವ ಎಚ್.ಕೆ.ಪಾಟೀಲ್ ನೇತೃತ್ವದ ಸಂಪುಟ ಉಪಸಮಿತಿ ಸರ್ಕಾರಕ್ಕೆ ವರದಿ ಸಲ್ಲಿಸಿದೆ.
ಅದಿರು ರಫ್ತು ಪ್ರಕರಣವನ್ನು ಎಸ್‌ಐಟಿ ತನಿಖೆಗೆ ವಹಿಸುವುದರ ಜತೆಗೆ ಅಕ್ರಮ ಗಣಿಗಾರಿಕೆ ಮತ್ತು ಅದಿರು ರಫ್ತು ಮೂಲಕ ರಾಜ್ಯದ ಬೊಕ್ಕಸಕ್ಕೆ ನಷ್ಟ ಉಂಟುಮಾಡಿರುವ 44 ಕಂಪೆನಿಗಳಿಂದ ಆ ಮೊತ್ತ ವಸೂಲಿ ಮಾಡಬೇಕು. ಅದಕ್ಕಾಗಿ ಅಗತ್ಯ ಬಿದ್ದರೆ ಅವುಗಳ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಪ್ರಕ್ರಿಯೆ ಆರಂಭಿಸಬೇಕು ಎಂದೂ ಶಿಫಾರಸು ಮಾಡಲಾಗಿದೆ. ಸಂಪುಟ ಉಪಸಮಿತಿ ಅಧ್ಯಕ್ಷ ಎಚ್. ಕೆ.ಪಾಟೀಲ್ ಅವರು ಮಂಗಳವಾರ ಸಮಿತಿಯ ವರದಿಯನ್ನು ಮುಖ್ಯಮಂತ್ರಿಗಳಿಗೆ ನೀಡಿದ್ದು, ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ವರದಿ ಕುರಿತು ಚರ್ಚಿಸಿ ಸರ್ಕಾರ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.
ರಾಜ್ಯದಿಂದ 50 ಕೋಟಿ ರೂ.ಗಿಂತ ಹೆಚ್ಚು ಮೌಲ್ಯದ ಅದಿರು ಅಕ್ರಮವಾಗಿ ರಫ್ತಾಗಿರುವ ಕುರಿತ ಪ್ರಕರಣದ ತನಿಖೆ ನಡೆಸಿದ್ದ ಸಿಬಿಐ, ನವಮಂಗಳೂರು ಮತ್ತು ಬೇಲೆಕೇರಿ ಬಂದರುಗಳಿಂದ ಅಕ್ರಮವಾಗಿ ಅದಿರು ರಫ್ತಾಗಿದೆ. ಆದರೆ, ಈ ಕುರಿತು ದಾಖಲೆಗಳನ್ನು ಸಂಗ್ರಹಿಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿ ತನಿಖೆ ಕೈಬಿಟ್ಟಿತ್ತು. ಈ ಕುರಿತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣದ ಕುರಿತು ಪರಿಶೀಲನೆ ನಡೆಸಿರುವ ಸಂಪುಟ ಉಪಸಮಿತಿ, ಅಕ್ರಮ ನಡೆದಿರುವುದು ಸಿಬಿಐ ತನಿಖೆಯಲ್ಲೇ ಗೊತ್ತಾಗಿದೆ. ಹೀಗಾಗಿ ಈ ಕುರಿತು ದಾಖಲೆಗಳನ್ನು ಸಂಗ್ರಹಿಸಬೇಕಾಗಿ ರುವುದರಿಂದ ಪ್ರಕರಣವನ್ನು ಎಸ್‌ಐಟಿಗೆ ವಹಿಸಬೇಕು ಎಂದು ಶಿಫಾರಸು ಮಾಡಲು ತೀರ್ಮಾನಿಸಿತ್ತು. ಜತೆಗೆ ಈ ಅಕ್ರಮದಿಂದ ರಾಜ್ಯದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿರುವ ಕಂಪನಿಗಳಿಂದ ಆ ಮೊತ್ತವನ್ನು ಭರಿಸಬೇಕು ಎಂಬ ನಿರ್ಧಾರಕ್ಕೂ ಬಂದಿತ್ತು. ಅದರಂತೆ ವರದಿ ಅಂತಿಮಗೊಳಿಸಿ ಸರ್ಕಾರಕ್ಕೆ ಸಲ್ಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ
Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.