ಆರನೇ ವೇತನ ಆಯೋಗದ ವರದಿ ರಾಜ್ಯ ಸರ್ಕಾರಕ್ಕೆ ಸಲ್ಲಿಕೆ ಇಂದು
Team Udayavani, Jan 31, 2018, 7:42 AM IST
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಬಹುನಿರೀಕ್ಷಿತ ಆರನೇ ವೇತನ ಆಯೋಗದ ವರದಿ ಬುಧವಾರ ಸರ್ಕಾರಕ್ಕೆ ಸಲ್ಲಿಕೆಯಾಗುತ್ತಿದ್ದು, ಶೇ.25 ರಿಂದ 35ರಷ್ಟು ವೇತನ ಹೆಚ್ಚಳಕ್ಕೆ ಶಿಫಾರಸು ಮಾಡಲಿದೆ ಎಂದು ತಿಳಿದು ಬಂದಿದೆ.
ಲಕ್ಷಾಂತರ ರಾಜ್ಯ ಸರ್ಕಾರಿ ನೌಕರರು ವರ್ಷದಿಂದ ಆಯೋಗದ ವರದಿಯತ್ತ ಚಿತ್ತ ಹರಿಸಿದ್ದು ಯಾವೆಲ್ಲಾ ಬೇಡಿಕೆಗಳು ಈಡೇರವಲಿವೆ, ಏನೆಲ್ಲಾ ಶಿಫಾರಸು ಮಾಡಲಾಗಿದೆ ಎಂಬುದರ ಬಗ್ಗೆ ಕುತೂಹಲ ಇದೆ. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಸ್ವಲ್ಪ ಹೆಚ್ಚಿನ ಪ್ರಮಾಣದಲ್ಲಿಯೇ ಏರಿಸಲು ಶಿಫಾರಸು ಮಾಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ವೇತನ ಹೆಚ್ಚಳದಿಂದ ರಾಜ್ಯ ಸರ್ಕಾರದ ಬೊಕ್ಕಸ ಮೇಲೆ 10 ಸಾವಿರ ಕೋಟಿ ರೂ.ಗೂ ಹೆಚ್ಚು ಹೊರೆ ಬೀಳಬಹುದೆಂದು ಅಂದಾಜಿಸಲಾಗಿದೆ. ಗೃಹ ಕಚೇರಿ ಕೃಷ್ಣಾದಲ್ಲಿ ಆರನೇ ವೇತನ ಆಯೋಗದ ಅಧ್ಯಕ್ಷ ಎಂ.ಆರ್.ಶ್ರೀನಿವಾಸಮೂರ್ತಿ ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವರದಿ ಸಲ್ಲಿಸಲಿದ್ದಾರೆ. ರಾಜ್ಯ ಸರ್ಕಾರಿ ನೌಕರರಿಗೂ ವಾರದಲ್ಲಿ ಎರಡು ದಿನ ರಜೆ ವ್ಯವಸ್ಥೆ ಇರಬೇಕು ಎಂಬುದು ಸೇರಿ ಕೇಂದ್ರ ಸರ್ಕಾರಿ ನೌಕರರಿಗೆ ಸರಿಸಮವಾಗಿ ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆ, ಸೌಲಭ್ಯ ಇರಬೇಕೆಂದು ರಾಜ್ಯ ಸರ್ಕಾರಿ ನೌಕರರ ಸಂಘಟನೆಗಳಿಂದ ಆಯೋಗಕ್ಕೆ ಮನವಿ ಸಹ ಸಲ್ಲಿಸಲಾಗಿತ್ತು.
ರಾಜ್ಯದಲ್ಲೂ ಖಾಲಿ ಹುದ್ದೆ ಮೇಲೆ ಕಣ್ಣು
ರಾಜ್ಯದಲ್ಲಿ 7ಲಕ್ಷ 93 ಸಾವಿರ ಮಂಜೂರಾದ ಸರ್ಕಾರಿ ನೌಕರರ ಹುದ್ದೆಗಳಿದ್ದು 5.45 ಲಕ್ಷ ನೌಕರರ ನೇಮಕವಾಗಿದೆ. 2.80 ಲಕ್ಷ ಹುದ್ದೆಗಳಿನ್ನೂ ಖಾಲಿ ಇವೆ. ಹಲವಾರು ವರ್ಷಗಳಿಂದ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು, ಸರ್ಕಾರಿ ನೌಕರರಿಗೆ ಕನಿಷ್ಠ ವೇತನ 22ಸಾವಿರ ರೂ.ಗಳಿಗೆ ನಿಗದಿಮಾಡಬೇಕು. ಹೊರ ಗುತ್ತಿಗೆ ಆಧಾರದ ನೇಮಕಾತಿ ರದ್ದುಪಡಿಸಬೇಕು. ಪ್ರತಿ ಶನಿವಾರ
ರಜೆಯ ಜತೆಗೆ ಕೆಲಸದ ಅವಧಿಯಲ್ಲೂ ಬದಲಾವಣೆ ಮಾಡಬೇಕು. ಒತ್ತಡದಲ್ಲಿ ಕೆಲಸಮಾಡುವ ಸರ್ಕಾರಿ ನೌಕರರಿಗೆ ಕನಿಷ್ಠ 45ರಷ್ಟು ವೇತನ ಹೆಚ್ಚಳ ಮಾಡಬೇಕೆಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಂಜೇಗೌಡ ವೇತನ ಆಯೋಗಕ್ಕೆ ಮನವಿ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
MUST WATCH
ಹೊಸ ಸೇರ್ಪಡೆ
Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ
Shimoga; ಮನೆಯಂಗಳದಿಂದ ನಾಯಿ ಹೊತ್ತೊಯ್ದ ಚಿರತೆ; ಸಿಸಿಕ್ಯಾಮರಾದಲ್ಲಿ ದೃಶ್ಯ ಸೆರೆ
Padubidri: ಮೈದಾನದ ಅಂಚಿನಲ್ಲಿ ಚರಂಡಿ ನಿರ್ಮಾಣ; ಕ್ರೀಡಾಪ್ರೇಮಿಗಳ ಆರೋಪ
Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್ ಜಾಮ್
Manipal: ಇಲ್ಲಿ ನಿರಾಳವಾಗಿ ನಡೆಯಲೂ ಭಯ!; ಪಾತ್‌ನಲ್ಲಿ ತರಗೆಲೆ, ಗಿಡಗಂಟಿ, ಪೊದರಿನ ಆತಂಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.