ಎಸ್.ಎಂ. ಜಾಮದಾರರಿಂದ ಅಪಪ್ರಚಾರ: ರಂಭಾಪುರಿ ಶ್ರೀ
Team Udayavani, Sep 4, 2017, 11:38 AM IST
ರಾಯಚೂರು: ಸಿದ್ಧಗಂಗಾಮಠದ ಶ್ರೀ ಶಿವಕುಮಾರ ಸ್ವಾಮೀಜಿ ಹಾಗೂ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಪ್ರತ್ಯೇಕ ಧರ್ಮದ ಹೋರಾಟಕ್ಕೆ ಬೆಂಬಲಿಸಿದ್ದಾರೆಂದು ಐಎಎಸ್ ನಿವೃತ್ತ ಅಧಿಕಾರಿ ಶಿವಾನಂದ ಜಾಮದಾರ ಅಪ್ರಪ್ರಚಾರ ಮಾಡಿ ಜನರಲ್ಲಿ
ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ರಂಭಾಪುರಿ ಜಗದ್ಗುರು ಡಾ|ಪ್ರಸನ್ನ ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ದೂರಿದರು.
ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಾನಂದ ಜಾಮದಾರ ಹೇಳಿರುವ ಮಾತುಗಳು ಸತ್ಯಕ್ಕೆ ದೂರವಾಗಿವೆ. ವೀರಶೈವ ಲಿಂಗಾಯತ ಧರ್ಮದ ಸಮಗ್ರತೆ ಕಾಪಾಡಿಕೊಂಡು ಬರಬೇಕೆಂದು ಸಿದ್ಧಗಂಗಾ ಶ್ರೀಗಳು ಮತ್ತು ಸುತ್ತೂರು ಶ್ರೀಗಳು ಅಭಿಪ್ರಾಯಪಟ್ಟಿದ್ದಾರೆ. ಅವರನ್ನು ಸಂಪರ್ಕಿಸಿದ ನಮ್ಮ ಪ್ರತಿನಿ ಧಿಗಳಿಗೆ ತಾವು ಹಾಗೆ ಹೇಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆದರೆ, ಅವರ ಅಭಿಪ್ರಾಯವನ್ನು ತಿರುಚಿ ಹೇಳುವ ಮೂಲಕ ಜಾಮದಾರ ಅವರು ಗೊಂದಲ ಸೃಷ್ಟಿಸುತ್ತಿದ್ದಾರೆ. ಲಿಂಗಾಯತ ಪ್ರತ್ಯೇಕ ಧರ್ಮದ ಬಗ್ಗೆ ಅವರು ಈವರೆಗೂ ನಮ್ಮನ್ನು ಸಂಪರ್ಕಿಸಿಲ್ಲ. ಅವರ ಹೇಳಿಕೆ ಹಿಂದೆ ಕೆಲ ಮಠಾಧೀಶರ ಕುಮ್ಮಕ್ಕು ಇದೆ ಎಂದು ದೂರಿದರು.
ತಾವು ವೀರಶೈವ ಲಿಂಗಾಯತ ಪ್ರತ್ಯೇಕತೆಗೆ ಎಂದಿಗೂ ಅವಕಾಶ ನೀಡುವುದಿಲ್ಲ. ಲಿಂಗಾಯತ ಪ್ರತ್ಯೇಕ ಧರ್ಮಕ್ಕಿಂತ ಎಲ್ಲರೂ ಒಗ್ಗೂಡಿ ಸೌಲಭ್ಯಗಳನ್ನು ಪಡೆಯುವ ನಿಟ್ಟಿನಲ್ಲಿ ಹೋರಾಡಬೇಕಿದೆ ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
National Badminton: ರೋಣಕ್ ಚೌಹಾಣ್ ಸೆಮಿಗೆ
Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್ ಹಂತಕ್ಕೇರಿದರೆ?
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.