ಆಶಾ ಕಾರ್ಯಕರ್ತೆಯರಿಗೆ ಸ್ಮಾರ್ಟ್‌ಫೋನ್: ಪರಿಶೀಲನೆ
Team Udayavani, Jul 11, 2023, 5:00 AM IST
ಬೆಂಗಳೂರು: ಗುಣಮಟ್ಟದ ಸ್ಮಾರ್ಟ್‌ಫೋನ್ ಒದಗಿಸುವುದರ ಸಹಿತ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರ ಹಿಸಿ ಸೋಮವಾರ ರಾಜ್ಯಾ ದ್ಯಂತ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದ್ದು, ಇದರ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರಿಗೆ ಸ್ಮಾರ್ಟ್‌ಫೋನ್ ನೀಡುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಭರವಸೆ ನೀಡಿದ್ದಾರೆ.
ಸೋಮವಾರ ಪ್ರಶ್ನೋತ್ತರ ವೇಳೆ ಜೆಡಿಎಸ್‌ನ ಕೆ.ಎ. ತಿಪ್ಪೇಸ್ವಾಮಿ ನೀಡಿದ ಸಲಹೆಗೆ ಪ್ರತಿಕ್ರಿಯಿಸಿದ ಸಚಿವರು, ಆಶಾ ಕಾರ್ಯಕರ್ತೆಯರು ಸ್ವಯಂಪ್ರೇರಣೆಯಿಂದ ಕಾರ್ಯನಿರ್ವಹಿಸುತ್ತಿದ್ದು, ಅವರಿಗೆ ಮಾಸಿಕ 5 ಸಾವಿರ ರೂ. ಗೌರವಧನ ನೀಡಲಾಗುತ್ತಿದೆ. ಜತೆಗೆ ಅವರು ತಮ್ಮ ಚಟುವಟಿಕೆಗಳಲ್ಲಿ ಉತ್ತಮ ಪ್ರದರ್ಶನ ನೀಡಿದರೆ, ಅದನ್ನು ಆಧರಿಸಿ ಮಾಸಿಕ ಕನಿಷ್ಠ 5ರಿಂದ ಗರಿಷ್ಠ 8 ಸಾವಿರ ರೂ. ಬರುತ್ತದೆ. ಈ ಮಧ್ಯೆ “ಗೃಹಲಕ್ಷ್ಮೀ’ ಯೋಜನೆ ಅಡಿಯೂ ನಗದು ಬರುವುದರಿಂದ ಮತ್ತೆ 2 ಸಾವಿರ ರೂ. ಸಿಗಲಿದೆ ಎಂದರು.
ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ರಾಜ್ಯಕ್ಕೆ 43,524 ಆಶಾ ಕಾರ್ಯಕರ್ತೆಯರ ಹುದ್ದೆಗಳು ಮಂಜೂರಾಗಿದ್ದು, 41,119 ಮಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರನ್ನು ಖಾಯಂಗೊಳಿಸಲು ನಿಯಮದಲ್ಲಿ ಅವಕಾಶ ಇಲ್ಲ ಎಂದು ಸ್ಪಷ್ಟಪಡಿಸಿದರು.
ಈ ವೇಳೆ ಪ್ರತಿಕ್ರಿಯಿಸಿದ ತಿಪ್ಪೇಸ್ವಾಮಿ, ಸರಕಾರದ ವಿವಿಧ ಯೋಜನೆಗಳಲ್ಲಿ ಪ್ರಮುಖ ಪಾತ್ರ ವಹಿಸುವ ಈ ಆಶಾ ಕಾರ್ಯಕರ್ತೆಯರಿಗೆ ಕನಿಷ್ಠ ಪಕ್ಷ ಸ್ಮಾರ್ಟ್‌ಫೋನ್ ನೀಡಿದರೆ, ಸಮೀಕ್ಷೆ ಮತ್ತಿತರ ಕಾರ್ಯಗಳಿಗೆ ತುಂಬಾ ಅನುಕೂಲ ಆಗುತ್ತದೆ ಎಂದು ಸಲಹೆ ನೀಡಿದರು. ಆಗ ಮಾತನಾಡಿದ ಸಚಿವರು, ಉತ್ತಮ ಸಲಹೆ, ಈ ನಿಟ್ಟಿನಲ್ಲಿ ಪರಿಶೀಲಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.