ಶಿರಾಡಿಘಾಟ್‌ನಲ್ಲಿ ಮಣ್ಣು ತೆರವು ಕಾರ್ಯಾಚರಣೆ ಸ್ಥಗಿತ
Team Udayavani, Aug 11, 2019, 3:00 AM IST
ಮಂಗಳೂರು: ಮಂಗಳೂರು -ಹಾಸನ ರೈಲು ಮಾರ್ಗದ ಶಿರಾಡಿ ಘಾಟ್‌ನಲ್ಲಿ ಸುಬ್ರಹ್ಮಣ್ಯ ರೋಡ್- ಸಕಲೇಶಪುರ ಮಧ್ಯೆ ಭೂಕುಸಿತ ಮುಂದುವರಿದಿದ್ದು ಪ್ರತಿಕೂಲ ಹವಾಮಾನ ಹಿನ್ನಲೆಯಲ್ಲಿ ರೈಲ್ವೆ ಹಳಿಗಳ ಮೇಲೆ ಬಿದ್ದಿರುವ ಮಣ್ಣು ಹಾಗೂ ಕಲ್ಲುಗಳನ್ನು ತೆರೆವುಗೊಳಿಸುವ ಕಾರ್ಯವನ್ನು ಸ್ಥಗಿತಗೊಳಿಸಲಾಗಿದೆ.
ಸ್ಥಳದಿಂದ ಎಲ್ಲ ರೈಲ್ವೆ ಸಿಬ್ಬಂದಿ ಹಾಗೂ ಕಾರ್ಮಿಕರನ್ನು ತೆರವುಗೊಳಿಸಲಾಗಿದ್ದು, ಸುಬ್ರಹ್ಮಣ್ಯ ರೋಡ್ ರೈಲ್ವೆ ನಿಲ್ದಾಣದಲ್ಲಿ ವಾಸ್ತವ್ಯ ಕಲ್ಪಿಸಲಾಗಿದೆ. ಈ ರೈಲುಮಾರ್ಗದಲ್ಲಿನ ಎಲ್ಲ ರೈಲುಗಳ ಸಂಚಾರವನ್ನು ಆ. 23ರ ವರೆಗೆ ರದ್ದುಗೊಳಿಸಲಾಗಿದೆ. ಅಲ್ಲದೆ, ರಾಷ್ಟ್ರೀಯ ಹೆದ್ದಾರಿ -75ರ ಶಿರಾಡಿಘಾಟ್‌ನಲ್ಲಿ ಪ್ರಯಾಣಿಕರ ವಾಹನ, ಅಗತ್ಯ ವಸ್ತುಗಳ ಸಾಗಣೆ ವಾಹನ ಹೊರತುಪಡಿಸಿ, ಉಳಿದ ವಾಹನಗಳ ಸಂಚಾರ ಬಂದ್ ಮಾಡಲಾಗಿದೆ.
ಶಿವಮೊಗ್ಗ-ಬೆಂಗಳೂರು ಸಂಚಾರ ಬಂದ್
* ಭದ್ರಾವತಿ- ಶಿವಮೊಗ್ಗ ರಸ್ತೆ ಸಂಪೂರ್ಣ ಜಲಾವೃತ. ಶಿವಮೊಗ್ಗದಿಂದ ಬೆಂಗಳೂರಿಗೆ ಸಂಚಾರ ಬಂದ್.
* ಶರಾವತಿಯಲ್ಲಿ ಪ್ರವಾಹ, ಸಿಗಂದೂರಿಗೆ ಭಕ್ತರು ಬರದಂತೆ ದೇವಾಲಯದಿಂದ ಮನವಿ.
* ಹಸಿರುಮಕ್ಕಿ- ಸಿಗಂದೂರು ರಸ್ತೆ ಬಂದ್, ಕುಂದಾಪುರ, ಮಣಿಪಾಲ್‌ಗೆ ತೆರಳಲು ಇದ್ದ ಮಾರ್ಗ ಬಂದ್.
* ಶಿವಮೊಗ್ಗ- ತೀರ್ಥಹಳ್ಳಿ- ಉಡುಪಿ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್.
* ಶಿವಮೊಗ್ಗ- ಹೊನ್ನಾಳಿ ಸಂಚಾರ ಬಂದ್.
* ತಾಳಗುಪ್ಪ- ಶಿವಮೊಗ್ಗ-ಮೈಸೂರು- ತಾಳಗುಪ್ಪ ರೈಲು ಸಂಚಾರ ರದ್ದು.
* ರಾಣೇಬೆನ್ನೂರು – ಕೊಲ್ಲೂರು ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್.
* ಕೊಚ್ಚಿಹೋದ ಕಳಸ-ಹೊರನಾಡು ರಸ್ತೆ, ಹೊರನಾಡಿಗೆ ಸಂಚಾರ ಬಂದ್.
* ಶಿಕಾರಿಪುರ-ಶಿರಾಳಕೊಪ್ಪ -ಸೊರಬ ರಸ್ತೆ ಸಂಪರ್ಕ ಕಡಿತ. ಶಿವಮೊಗ್ಗ-ಮಂಡಗದ್ದೆ-ತೀರ್ಥಹಳ್ಳಿ ರಸ್ತೆ ಕೂಡ ಜಲಾವೃತ. ಮಣಿಪಾಲ್‌ಗೆ ಹೋಗುವವರು ಶಿವಮೊಗ್ಗ-ರಿಪ್ಪನ್‌ಪೇಟೆ- ನಗರ ಮಾರ್ಗವನ್ನು ಬಳಸಬಹುದಾಗಿದೆ. ಸೂಡೂರು ಗೇಟ್ ಸೇತುವೆ ಮುಳುಗಡೆಯಾದ ಕಾರಣ ಹೊಸನಗರ-ಶಿವಮೊಗ್ಗ ಸಂಪರ್ಕ ಕಂಡಿತಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
CT Ravi Case ನ್ಯಾಯಾಂಗ ತನಿಖೆಗೆ ಒಪ್ಪಿಸಲು ಗೌರ್ನರ್‌ಗೆ ಬಿಜೆಪಿ ದೂರು
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ
Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್ ತರಾಟೆ
England; ಬೆನ್ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.