ಸಮಸ್ಯೆ ಬಗೆಹರಿಸಿ, ಇಲ್ಲವಾದರೆ ನನ್ನ ದಾರಿ ನನಗೆ… 


Team Udayavani, Oct 7, 2017, 10:32 AM IST

07-21.jpg

ಮೈಸೂರು: “ಭಾನುವಾರದ ಒಳಗೆ ಸಮಸ್ಯೆ ಬಗೆಹರಿಸಿ, ಇಲ್ಲವಾದಲ್ಲಿ ನನ್ನ ದಾರಿ ನನಗೆ, ಇನ್ನು ನಿಮ್ಮ ಮಾತು ಕೇಳಿಕೊಂಡು ಪದೇ ಪದೇ ಬಲಿಪಶುವಾಗುತ್ತಾ ನನ್ನ ರಾಜಕೀಯ ಜೀವನಕ್ಕೆ ಧಕ್ಕೆ ತಂದು ಕೊಳ್ಳಲು ಸಿದ್ಧನಿಲ್ಲ’ ಎಂದು ಮಾಜಿ ಸಚಿವ ಸಿ.ಎಚ್‌.ವಿಜಯಶಂಕರ್‌ ಅವರು ರಾಜ್ಯ ಬಿಜೆಪಿ ನಾಯಕರಿಗೆ ಖಡಕ್‌ ಸಂದೇಶ ರವಾನಿಸಿದ್ದಾರೆ.

ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಅವರ ಸೂಚನೆ ಮೇರೆಗೆ ಪಿರಿಯಾಪಟ್ಟಣ ವಿಧಾನಸಭೆ ಕ್ಷೇತ್ರದಲ್ಲಿ
ಮುಂಬರುವ ವಿಧಾನಸಭೆ ಚುನಾವಣೆಯ ಸ್ಪರ್ಧಾಕಾಂಕ್ಷಿಯಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿದ್ದರೂ ಕ್ಷೇತ್ರದಲ್ಲಿ ಇತ್ತೀಚೆಗೆ ಪಕ್ಷದಿಂದ ಮತ್ತೂಂದು ಶಕ್ತಿ ಕೇಂದ್ರ ಹುಟ್ಟುಹಾಕಿ ಪಕ್ಷದ ಕೆಲ ನಾಯಕರೇ ಅವರಿಗೆ ನೀರೆರೆಯುತ್ತಿದ್ದಾರೆ ಎಂಬುದು ಅವರ ಅಸಮಾಧಾನಕ್ಕೆ ಕಾರಣವಾಗಿದೆ. 

ಶಕ್ತಿಕೇಂದ್ರ ಹುಟ್ಟಿಕೊಂಡಿದ್ದು ಹೇಗೆ?: ಒಂದು ವರ್ಷದ ಹಿಂದೆ ಪಿರಿಯಾಪಟ್ಟಣಕ್ಕೆ ಬಂದ ಹಾವೇರಿ ಮೂಲದ ಉದ್ಯಮಿ ಮಂಜುನಾಥ್‌ ಎಂಬುವರು, ಪಕ್ಷೇತರನಾಗಿಯೇ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿ ಗೆದ್ದು ಬರುವುದಾಗಿ ಬಿಂಬಿಸಿಕೊಂಡು ಕ್ಷೇತ್ರದ ತುಂಬೆಲ್ಲಾ ಹಣ ಚೆಲ್ಲಿ ಯುವಕರನ್ನು ತಮ್ಮತ್ತ ಸೆಳೆದುಕೊಳ್ಳುತ್ತಿದ್ದಾರೆ. ಅದರಲ್ಲೂ ತಾವು ಕುರುಬ ಸಮಾಜದವರು ಎಂದು ಊರ ತುಂಬೆಲ್ಲಾ ಕನಕಜಯಂತಿ ಆಚರಿಸಲು ಹಣ ನೀಡುತ್ತಾ, ಹೆಲಿಕಾಪ್ಟರ್‌ನಲ್ಲೇ ಹಾರಾಡುತ್ತಾ ಆಶಾಗೋಪುರ ಕಟ್ಟಿದ್ದರು. ಆದರೆ, ದಿನ ಕಳೆದಂತೆ ಪಕ್ಷೇತರನಾಗಿ ಗೆದ್ದು ಬರುವುದು ಸುಲಭವಲ್ಲ ಎಂಬ ಕಾರಣಕ್ಕೆ ಕೆಲ ತಿಂಗಳ ಹಿಂದೆ ಬಿಜೆಪಿ ಸೇರಿಕೊಂಡರು. ಪಕ್ಷಕ್ಕೆ ಸೇರಿದ ಬೆನ್ನಲ್ಲೇ ಅವರನ್ನು ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯರನ್ನಾಗಿ ನೇಮಿಸಲಾಯಿತು. ಅಂದಿನಿಂದ ಮತ್ತೆ ಕ್ಷೇತ್ರದಲ್ಲಿ ಓಡಾಟ ಶುರು ಮಾಡಿದ ಮಂಜುನಾಥ್‌, ಬಿಜೆಪಿಯಿಂದ ತಾನೇ ಅಭ್ಯರ್ಥಿ ಎಂದು ಹೇಳಿಕೊಂಡು ತಿರುಗುತ್ತಿದ್ದಾರೆ. ಈ ಬಗ್ಗೆ ಪಕ್ಷದ ನಾಯಕರ ಗಮನಕ್ಕೆ ತಂದಿದ್ದರೂ ಸರಿಪಡಿಸುವ ಕೆಲಸ ಮಾಡದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂಬುದು ವಿಜಯಶಂಕರ್‌ರ ಅಸಮಾಧಾನಕ್ಕೆ ಕಾರಣ. 

ಅನಧಿಕೃತ ಕಚೇರಿ: ಪಕ್ಷದ ರಾಜ್ಯ ವರಿಷ್ಠರು ಪಿರಿಯಾಪಟ್ಟಣ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿಯನ್ನು ಸಂಘಟಿಸಿ ಕೆಲಸ ಮಾಡುವಂತೆ ಸೂಚಿಸಿದ ಮೇರೆಗೆ ಕಾರ್ಯ ನಿರ್ವಹಿಸುತ್ತಿದ್ದು, ಕೆಲವರು ಪಕ್ಷದಲ್ಲೇ ಇದ್ದುಕೊಂಡು ಅನಧಿಕೃತವಾಗಿ ಕಚೇರಿ ಮತ್ತು ಪಕ್ಷದ ಬಾವುಟಗಳನ್ನು ದುರುಪಯೋಗ ಪಡಿಸಿಕೊಂಡು ಪಕ್ಷದ ಶಿಸ್ತಿಗೆ ಧಕ್ಕೆ ತರುತ್ತಿದ್ದಾರೆ. ಈ ಬಗ್ಗೆ ರಾಜ್ಯದ ವರಿಷ್ಠರಿಗೆ ತಿಳಿಸಿದ್ದರೂ ಕ್ರಮ ಕೈಗೊಳ್ಳುತ್ತಿಲ್ಲ, ಇದು ತಮಗೆ ಅನುಮಾನ ಹುಟ್ಟಿಸಿದೆ ಎಂದು ದೂರಿದ್ದಾರೆ. 

ಸ್ಥಳೀಯ ನಾಯಕರಿಂದ ಮನವೊಲಿಕೆ
ವಿಜಯಶಂಕರ್‌ ಅಸಮಾಧಾನಗೊಂಡಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ ಎಸ್‌.ಎ. ರಾಮದಾಸ್‌, ಪಕ್ಷದ ಮುಖಂಡರಾದ ಎಲ್‌.ನಾಗೇಂದ್ರ, ಕೋಟೆ ರಾಮಕೃಷ್ಣಪ್ಪ, ಮಲ್ಲಪ್ಪಗೌಡ, ಫ‌ಣೀಶ್‌ ಮತ್ತಿತರರು ಅವರನ್ನು ಭೇಟಿ ಮಾಡಿ ಮನವೊಲಿಸುವ ಪ್ರಯತ್ನ ಮಾಡಿದರು. ಇನ್ನೆರಡು ದಿನ ಕಾದು ನೋಡುವುದಾಗಿ ಅವರು ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. 

ಟಾಪ್ ನ್ಯೂಸ್

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

19-uv-fusion

Garbage Disposal: ಕಸದ ಸೂಕ್ತ ವಿಲೇವಾರಿ ನಮ್ಮದೇ ಜವಾಬ್ದಾರಿ

1-abaz-matr-11

Maharashtra; ಇನ್‌ಸ್ಟಾದಲ್ಲಿ 56 ಲಕ್ಷ ಫಾಲೋವರ್ಸ್‌ ಇದ್ರು ಸಿಕ್ಕಿದ್ದು ಕೇವಲ 155 ಮತ!!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

CM DCM

Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

20-uv-fusion

UV Fusion: ಜೀವಂತಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.