ಸೋಮಶೇಖರ ರೆಡ್ಡಿ ಹೇಳಿಕೆ ಹಿಂದೆ ಪ್ರಚೋದನೆಯಿದೆ: ಜನಾರ್ದನ ರೆಡ್ಡಿ

ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾದ ಮಾಜಿ ಸಚಿವ

Team Udayavani, Oct 30, 2022, 9:58 PM IST

1-sdsdsad

ಬಳ್ಳಾರಿ: ನನ್ನ ಸಹೋದರ ಶಾಸಕ ಜಿ.ಸೋಮಶೇಖರ ರೆಡ್ಡಿ ಮುಸ್ಲಿಮರ ವಿರುದ್ಧ ನೀಡಿದ್ದ ಹೇಳಿಕೆಯಲ್ಲಿ ಕೆಲವರ ಪ್ರಚೋದನೆಯಿದೆ ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಹೇಳುವ ಮೂಲಕ ಚುನಾವಣೆಗೂ ಮುನ್ನ ಸಹೋದರನ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಿದ್ದಾರೆ.

ನಗರದ ಈದ್ಗಾ ಮೈದಾನದಲ್ಲಿ ಆಪ್ತ ಅಲಿಖಾನ್ ನೇತೃತ್ವದಲ್ಲಿ ಮ್ಯಾಕ್ ವೆಲ್ಫೇರ್ ಅಸೋಸಿಯೇಷನ್ ವತಿಯಿಂದ ಮುಸ್ಲಿಂ ಯುವಕರಿಗಾಗಿ ಆಯೋಜಿಸಲಾಗಿದ್ದ ‘ಮಿಲಾದ್’ ಸೀಮಿತ ಓವರ್ ಗಳ ಕ್ರಿಕೇಟ್ ಪಂದ್ಯಾವಳಿಗೆ ಭಾನುವಾರ ಚಾಲನೆ ನೀಡಿ ಅವರು ಮಾತನಾಡಿದರು.

ಬಳ್ಳಾರಿಯಲ್ಲಿ ಹಿಂದು-ಮುಸ್ಲಲ್ಮಾನರು ಅಣ್ಣ ತಮ್ಮಂದಿರಿದ್ದಂತೆ. ಅವರು ಯಾವಾಗಲೂ ನಮ್ಮ ಜೊತೆ ಇರಬೇಕು ಎಂದ ಜನಾರ್ದನ ರೆಡ್ಡಿ, ನನ್ನ ಸಹೋದರ ಶಾಸಕ ಜಿ.ಸೋಮಶೇಖರ ರೆಡ್ಡಿ, ಹಿಂದೆ ಮುಸ್ಲಿಮರ ವಿರುದ್ಧ ಹೇಳಿಕೆ ನೀಡಿದ್ದಾರೆ. ಆದರೆ, ಯಾರೋ ಪ್ರಚೋದನೆ ನೀಡಿ ಅವರಿಂದ ಆ ಹೇಳಿಕೆ ಕೊಡಿಸಿದ್ದಾರೆ. ಮುಂಬರುವ ದಿನಗಳಲ್ಲಿ ಅದು ಯಾರೆಂಬುದು ಗೊತ್ತಾಗಲಿದೆ. ಈಗಾಗಲೇ ಸೋಮಶೇಖರ ರೆಡ್ಡಿ ಹೇಳಿಕೆ ಕುರಿತು ಕ್ಷಮೆ ಕೇಳಿದ್ದಾರೆ. ಮುಸಲ್ಮಾನರೆಲ್ಲರೂ ಯಾವಾಗಲೂ ನಮ್ಮ ಜತೆ ಇರಬೇಕು ಎಂದು ಮುಸಲ್ಮಾನರ ಮನವೊಲಿಕೆಗೆ ಮುಂದಾದರು.

ರಾಜ್ಯ ಸೇರಿ ದೇಶದ ಹಲವೆಡೆ ಪಿಎಫ್ ಐ, ಎಸ್ ಡಿಪಿಐ ಪದಾಧಿಕಾರಿಗಳ ಮೇಲೆ ದಾಳಿ ಮಾಡಿ ಅನೇಕರನ್ನು ಬಂಧಿಸಲಾಗಿದೆ. ಆದರೆ, ಬಳ್ಳಾರಿಯಲ್ಲಿ ಮಾತ್ರ ಅಂಥ ಘಟನೆಗಳು ನಡೆದಿಲ್ಲ. ಇಲ್ಲಿನ‌ ಮುಸ್ಲಿಂಮರು ಪ್ರೀತಿ ಹಾಗೂ ಪ್ರಾಮಾಣಿಕತೆಯಿಂದ ಇದ್ದಾರೆ. ಮುಂದಿನ ದಿನಗಳಲ್ಲಿ ನೀವೆಲ್ಲರೂ ನಮ್ಮ ಜೊತೆಗಿರಬೇಕು ಎಂದು ಮತ್ತೊಮ್ಮೆ ಮನವಿ ಮಾಡಿದರು.

ಅಸಮಾಧಾನ
ಬಹಿರಂಗ ಅಸಮಾಧಾನ ಹೊರಹಾಕಿದ ಮಾಜಿ ಸಚಿವ ಜನಾರ್ದನ ರೆಡ್ಡಿ, ನನಗೆ ನಮ್ಮವರೇ ತೊಂದರೆ ಕೊಡುವ ಪರಿಸ್ಥಿತಿಯಲ್ಲಿದ್ದಾರೆ. ರಾಜ್ಯದಲ್ಲಿ ಯಾವ ಪಕ್ಷವನ್ನು ನಾನು ಬೆಳೆಸಿದ್ದೇನೋ ಅದೇ ಪಕ್ಷದವರು ನನಗೆ ತೊಂದರೆ ನೀಡುತ್ತಿದ್ದಾರೆ.

ನನಗೆ ಕಾಂಗ್ರೆಸ್ ಶತ್ರುವಾಗಿರಬಹುದು, ಅವರ ರಾಜಕೀಯ ಧರ್ಮ ನನಗೆ ತೊಂದರೆ ಕೊಟ್ಟಿರಬಹುದು. ಈಗ ನಮ್ಮವರೇ ನನಗೆ ತೊಂದರೆ ಕೊಡುವ ಸ್ಥಿತಿಯಲ್ಲಿದ್ದಾರೆ ಎನ್ನುವ ಮೂಲಕ ಪರೋಕ್ಷವಾಗಿ ಬಿಜೆಪಿ ಪಕ್ಷದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ನನ್ನ ರಾಜಕೀಯ ತೀರ್ಮಾನಕ್ಕೆ ಕೆಲ ದಿನಗಳು ಬಾಕಿಯಿವೆ. ನಾನು ಸಾರ್ವಜನಿಕ ಜೀವನದಲ್ಲಿರುತ್ತೇನೆ.ಮುಂದಿನ ದಿನಗಳಲ್ಲಿ ಬಳ್ಳಾರಿಯ ಮುಸ್ಲಿಂಮರು ನನ್ನ ಜೊತೆಗಿರಬೇಕು ಎಂದು ಕೋರಿದರು.

ಇದೇ ವೇಳೆ ಆಪ್ತ ಮೆಹಫೂಜ್ ಅಲಿಖಾನ್ ರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಶಾಸಕ ಜಿ.ಸೋಮಶೇಖ ರೆಡ್ಡಿ, ಬುಡಾ ಅಧ್ಯಕ್ಷ ಮಾರುತಿ ಪ್ರಸಾದ್, ಗುಜರಿ ಅಜೀಜ್, ಪಾಲಿಕೆ ಸದಸ್ಯ ಇಬ್ರಾಹಿಂ ಬಾಬು, ಮುಖಂಡ ಅಯಾಜ್ ಅಹ್ಮದ್ ಸೇರಿದಂತೆ ಹಲವಾರು ಮುಸ್ಲಿಂ ಮುಖಂಡರು ಇದ್ದರು.

ಟಾಪ್ ನ್ಯೂಸ್

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.