Congress: ಕರ್ನಾಟಕದಿಂದ ರಾಜ್ಯಸಭೆಗೆ ಸೋನಿಯಾ ಗಾಂಧಿ ಪ್ರವೇಶ?
Team Udayavani, Jul 22, 2023, 7:17 AM IST
ನವದೆಹಲಿ: ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ ಕನಿಷ್ಠ 20ರಲ್ಲಿ ಜಯ ಸಾಧಿಸುವ ಬಗ್ಗೆ ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಗುರಿ ಹಾಕಿಕೊಂಡಿರುವಂತೆಯೇ ಹೊಸ ಅಂಶ ಬೆಳಕಿಗೆ ಬಂದಿದೆ.
ಸದ್ಯ ಉತ್ತರ ಪ್ರದೇಶದ ರಾಯ್‌ಬರೇಲಿ ಲೋಕಸಭಾ ಕ್ಷೇತ್ರದ ಸಂಸದರಾಗಿರುವ ಸೋನಿಯಾ ಗಾಂಧಿಯವರು ಕರ್ನಾಟಕದಿಂದ ರಾಜ್ಯಸಭೆ ಪ್ರವೇಶಿಸುವ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆಂದು ಮೂಲಗಳನ್ನು ಉಲ್ಲೇಖೀಸಿ “ಇಂಡಿಯಾ ಟುಡೇ’ ವರದಿ ಮಾಡಿದೆ. ಕರ್ನಾಟಕದಿಂದ ರಾಜ್ಯಸಭೆಯನ್ನು ಪ್ರತಿನಿಧಿಸುತ್ತಿರುವ ಜಿ.ಸಿ.ಚಂದ್ರಶೇಖರ್, ಸಯ್ಯದ್ ನಾಸಿರ್ ಹುಸೇನ್, ಡಾ.ಎಲ್.ಹನುಮಂತಯ್ಯ, ಕೇಂದ್ರದಲ್ಲಿ ಸಚಿವರಾಗಿರುವ ರಾಜೀವ್ ಚಂದ್ರಶೇಖರ್ ಅವರ ಸದಸ್ಯತ್ವದ ಅವಧಿ 2024 ಏ.2ರಂದು ಮುಕ್ತಾಯವಾಗಲಿದೆ.
ಅದನ್ನು ಗಮನಿಸಿಕೊಂಡೇ ಜು.18ರಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳ ಸಭೆಗೆ ಆಗಮಿಸಿದ್ದ ಸೋನಿಯಾ ಗಾಂಧಿಯವರ ಬಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಿಂದಲೇ ರಾಜ್ಯಸಭೆಗೆ ಸ್ಪರ್ಧೆ ಮಾಡಬಹುದು ಎಂಬ ಆಹ್ವಾನ ನೀಡಿದ್ದಾರೆಂದು ಚಾನೆಲ್ ತನ್ನ ವರದಿಯಲ್ಲಿ ಹೇಳಿಕೊಂಡಿದೆ. ಆದರೆ, ಸೋನಿಯಾ ಅದರ ಬಗ್ಗೆ ಪ್ರತಿಕ್ರಿಯೆ ನೀಡಿಲ್ಲ.
ರಾಜ್ಯ ವಿಧಾನಸಭೆಯಲ್ಲಿ ಕಾಂಗ್ರೆಸ್‌ಗೆ 135 ಶಾಸಕರ ಬಲ ಇರುವುದರಿಂದ ನಾಲ್ಕು ಸ್ಥಾನಗಳ ಪೈಕಿ ಮೂರರಲ್ಲಿ ಅನಾಯಾಸವಾಗಿ ಗೆಲ್ಲಲು ಸಾಧ್ಯವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Friendship: ಸ್ನೇಹವೇ ಸಂಪತ್ತು
ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ರಸ್ತೆ ತಡೆದು ಹಳೇ ಕುಂದುವಾಡ ಗ್ರಾಮಸ್ಥರಿಂದ ಪ್ರತಿಭಟನೆ
UV Fusion: ತೆಪ್ಪ ದ್ವೀಪದೂರಿಗೊಂದು ಸಂಪರ್ಕಸೇತು
ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.