Sonu Srinivas ಗೌಡಗೆ 14 ದಿನ ನ್ಯಾಯಾಂಗ ಬಂಧನ
Team Udayavani, Mar 25, 2024, 11:45 PM IST
ಬೆಂಗಳೂರು: ಬಾಲಕಿಯನ್ನು ಅಕ್ರಮವಾಗಿ ದತ್ತು ಪಡೆದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಬಿಗ್‌ಬಾಸ್ ಸ್ಪರ್ಧಿ ಹಾಗೂ ರೀಲ್ಸ್ ಸ್ಟಾರ್ ಸೋನು ಶ್ರೀನಿವಾಸ ಗೌಡಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಪ್ರಕರಣ ಸಂಬಂಧ ಮಾ.22ರಂದು ಆಕೆಯನ್ನು ಬಂಧಿಸಿ 4 ದಿನಗಳ ಪೊಲೀಸ್ ಕಸ್ಟಡಿಗೆ ಪಡೆಯಲಾಗಿತ್ತು. ಸೋಮವಾರ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಆಕೆಯನ್ನು ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು.
ಪೋಷಕರಿಗೆ ಹಣ ಕೊಟ್ಟಿರುವುದು ಬೆಳಕಿಗೆ
ಸೋನುಗೌಡಳ ವಿಚಾರಣೆಯಲ್ಲಿ ಬಾಲಕಿಯ ಪೋಷಕರಿಗೆ 50 ಸಾವಿರ ರೂ. ಕೊಟ್ಟಿರುವುದು ಪತ್ತೆಯಾಗಿದೆ. ಮತ್ತೂಂದೆಡೆ ಮಗುವಿನ ಪಾಲಕರ ಊರಾದ ರಾಯಚೂರಿಗೆ ತೆರಳಿ ಸ್ಥಳ ಮಹಜರು ನಡೆಸಲಾಗಿತ್ತು. ಆಗ ಮಗುವಿನ ಪಾಲಕರು 50 ಸಾವಿರ ರೂ. ಅನ್ನು ಸೋನು ಗೌಡಳಿಂದ ಪಡೆದುಕೊಂಡಿದ್ದಾರೆ ಎಂಬುದು ಬೆಳಕಿಗೆ ಬಂದಿದೆ. ಹೀಗಾಗಿ ಮತ್ತೂಮ್ಮೆ ಪಾಲಕರಿಗೆ ನೋಟಿಸ್ ನೀಡಿ ಹೆಚ್ಚಿನ ವಿಚಾರಣೆ ನಡೆಸಲಾಗುವುದು ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.
ಮಗುವಿನ ಜತೆ ರೀಲ್ಸ್
ರಾಯಚೂರು ಮೂಲದ ದಂಪತಿಯ 8 ವರ್ಷದ ಬಾಲಕಿ ಜತೆ ಸೋನು ರೀಲ್ಸ್ ಮಾಡುತ್ತಿದ್ದಳು. ಬಳಿಕ ಬಾಲಕಿಯನ್ನು ತನಗೇ ಕೊಡಬೇಕೆಂದು ಹಠ ಹಿಡಿದು, 10 ಲಕ್ಷ ರೂ. ಆಮಿಷ ಒಡ್ಡಿದ್ದಳು ಎನ್ನಲಾಗಿದೆ. ಆದರೆ ಬಾಲಕಿ ಹೆತ್ತವರು ಒಪ್ಪಿರಲಿಲ್ಲ. ಆದರೆ ಮಾ. 1ರಂದು ರಾಯಚೂರಿನ ಬಾಲಕಿಯ ಮನೆಗೆ ಹೋಗಿದ್ದ ಸೋನು ಗೌಡ, 15 ದಿನ ಈಕೆ ನನ್ನ ಬಳಿ ಇರಲಿ. ಮಗು, ಅಪ್ಪ ಅಮ್ಮ ಬೇಕು ಎಂದಾಗ ನಿಮ್ಮ ಬಳಿ ಕರೆದುಕೊಂಡು ಬರುತ್ತೇನೆ. ಮಗಳನ್ನು ನೋಡಬೇಕು ಎನಿಸಿದರೆ ನೀವೂ ಬೆಂಗಳೂರಿಗೆ ಬನ್ನಿ ಎಂದಿದ್ದಳಂತೆ. ಅದಕ್ಕೆ ಬಾಲಕಿಯ ಹೆತ್ತವರು ಒಪ್ಪಿದ್ದರು. ಮಗುವನ್ನು ಬೆಂಗಳೂರಿಗೆ ಕರೆತಂದ ಬಳಿಕ, ನಾನು ಮಗುವನ್ನು ದತ್ತು ತೆಗೆದುಕೊಂಡಿದ್ದೇನೆ ಎಂದು ಸೋನು ಗೌಡ ಸೋಷಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದಳು. ಈ ವಿಚಾರ ಬಹಿರಂಗವಾಗುತ್ತಿದ್ದಂತೆ ಮಕ್ಕಳ ಕಲ್ಯಾಣ ಸಮಿತಿ ಅಧಿಕಾರಿಯೊಬ್ಬರು ಬ್ಯಾಡರಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ
ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು
Waqf ಬಗ್ಗೆ ಬಿವೈವಿ ಜತೆ ಮಾತಾಡುವ ಅವಶ್ಯಕತೆ ನನಗಿಲ್ಲ: ಯತ್ನಾಳ್
ರಾಜ್ಯದ ಅರಣ್ಯ ನಿಧಿಗಾಗಿ ಕೇಂದ್ರ ಸರಕಾರಕ್ಕೆ ನಿಯೋಗ: ಅರಣ್ಯ ಸಚಿವ ಖಂಡ್ರೆ
Bus Fare Hike: ಸರಕಾರದ ಹೊಟ್ಟೆಗೆ ಇನ್ನೆಷ್ಟು ತೆರಿಗೆ, ಶುಲ್ಕ ತೆರಬೇಕು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ
Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.