“ಶೀಘ್ರವೇ ಸೈಬರ್ ಸುರಕ್ಷಾ ಕಾರ್ಯನೀತಿ’
ಸೈಬರ್ ಸುರಕ್ಷಾ ಮಾಸಾಚರಣೆಗೆ ಚಾಲನೆ ನೀಡಿ ಡಿಸಿಎಂ
Team Udayavani, Oct 6, 2020, 2:11 AM IST
ಬೆಂಗಳೂರು: ಕೋವಿಡ್ ಬಳಿಕ ಡಿಜಿಟಲ್ ವ್ಯವಹಾರಗಳು ಹೆಚ್ಚಾಗುತ್ತಿರುವುದರಿಂದ ಸೈಬರ್ ಸುರಕ್ಷೆ ಅಗತ್ಯವಾಗಿದ್ದು, ಇದಕ್ಕೆ ಪೂರಕವಾಗಿ ರಾಜ್ಯದಲ್ಲಿ ಸೈಬರ್ ಸುರಕ್ಷಾ ಕಾರ್ಯನೀತಿಯನ್ನು ರೂಪಿಸಲಾಗುವುದು ಎಂದು ಐಟಿ-ಬಿಟಿ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಾ| ಸಿ. ಎನ್. ಅಶ್ವತ್ಥ ನಾರಾಯಣ ಅವರುತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸೋಮವಾರ ಸೈಬರ್ ಸುರಕ್ಷಾ ಮಾಸ ಉದ್ಘಾಟಿಸಿ ಮಾತನಾಡಿದ ಅವರು, ಸಾರ್ವಜನಿಕರಿಗೆ ಅಗತ್ಯ ಸೇವೆ ತಲುಪಿಸಲು ಮಾಹಿತಿ ತಂತ್ರಜ್ಞಾನ ಆಧಾರಿತ ವ್ಯವಸ್ಥೆ ಅಳವಡಿಕೆ ಹೆಚ್ಚಾಗುತ್ತಿದೆ. ಜತೆಗೆ ಸೈಬರ್ ಅಪಾಯಗಳು ಅಧಿಕವಾಗುವ ಬಗ್ಗೆ ಅಧ್ಯಯನದಿಂದ ತಿಳಿದು ಬಂದಿದೆ. ಹೀಗಾಗಿ, ಸೈಬರ್ ಸುರಕ್ಷಾ ಕಾರ್ಯನೀತಿ ಅಗತ್ಯವಾಗಿದೆ ಎಂದರು.
ಅಮೆರಿಕದ ಎಫ್ ಬಿಐ ವರದಿ ಪ್ರಕಾರ, ಕೊರೊನಾ ಬಳಿಕದ ಅವಧಿಯಲ್ಲಿ ಸೈಬರ್ ಅಪರಾಧಕ್ಕೆ ಸಂಬಂಧಿ ಸಿದ ದೂರುಗಳ ಸಂಖ್ಯೆಯಲ್ಲಿ ಶೇ. 400ರಷ್ಟು ಹೆಚ್ಚಾಗಿದೆ. ಈ ತನಿಖಾ ಸಂಸ್ಥೆಗೆ ಪ್ರತಿದಿನ 4,000 ದೂರುಗಳು ಬರುತ್ತಿವೆ. ದುಷ್ಕರ್ಮಿಗಳು ಫಿಶಿಂಗ್, ರಾನ್ಸಮ್ ವೇರ್ ಮತ್ತು ಮಾಲ್ವೇರ್ ದಾಳಿಗಳ ಮೂಲಕ ಸುಲಿಗೆ ಮಾಡುತ್ತಿದ್ದಾರೆ. ಸೈಬರ್ ಕ್ರಿಮಿನಲ್‌ಗಳು ಕೊರೊನಾ ಸಂತ್ರಸ್ತರಿಗೆ ನೆರವು ನೀಡುವ ನೆಪದಲ್ಲಿ ಸಾವಿರಾರು ವಂಚಕ ಪೋರ್ಟಲ್‌ಗಳನ್ನು ಆರಂಭಿಸಿದ್ದಾರೆ ಎಂದು ತಿಳಿಸಿದರು.
ಅಮೆರಿಕದ ಎಫ್‌ಬಿಐ ವರದಿ ಪ್ರಕಾರ, ಪ್ರಪಂಚದ ಅಂತರ್ಜಾಲ ಅಪರಾಧಗಳು ನಡೆಯುವ ದೇಶಗಳ ಪಟ್ಟಿಯಲ್ಲಿ ಭಾರತವು 3ನೇ ಸ್ಥಾನದಲ್ಲಿದೆ. ಫಿಶಿಂಗ್ ದಾಳಿ ಜತೆಗೆ ಅಂತರ್ಜಾಲಗಳ ವಿರೂಪಗೊಳಿಸುವುದು, ಡಿಡಿಒಎಸ್ ದಾಳಿ ಇತ್ಯಾದಿ ದಾಳಿಗಳು ನಡೆಯುತ್ತಿವೆ. ಭಾರತೀಯ ಕಂಪ್ಯೂಟರ್ ತುರ್ತು ಸ್ಪಂದನಾ ತಂಡವು ಸಲಹಾ ಸೂಚಿ ಪ್ರಕಟಿಸಿ, ಕೊರೊನಾ ಸೋಂಕಿನ ನೆಪದಲ್ಲಿ ಹೇಗೆ ಸೈಬರ್ ದಾಳಿಗಳನ್ನು ಎಸಗಲಾಗುತ್ತಿದೆ ಎಂಬುದರ ಕುರಿತು ವಿವರಿಸಿದೆ ಎಂದು ಹೇಳಿದರು.
ರಾಜಧಾನಿ ಬೆಂಗಳೂರು ಸಹಜವಾಗಿಯೇ ಸೈಬರ್ ಕ್ರಿಮಿನಲ್‌ಗಳ ಮುಖ್ಯ ಗುರಿಗಳಲ್ಲಿ ಒಂದಾಗಿದೆ. ಆದ್ದರಿಂದ ಸರಕಾರ ಹಾಗೂ ಸಂಸ್ಥೆಗಳಿಗೆ ಸೈಬರ್ ಜಾಗೃತಿ ಮೂಡಿಸಿಕೊಳ್ಳುವುದು ಅತ್ಯಂತ ಪ್ರಮುಖವಾಗಿದೆ. ಇದನ್ನು ಗಮನದಲ್ಲಿರಿಸಿಕೊಂಡು ಜಾಗತಿಕವಾಗಿ ಅಕ್ಟೋಬರ್ ತಿಂಗಳನ್ನು ಸೈಬರ್ ಸುರಕ್ಷಾ ಮಾಸವನ್ನಾಗಿ ಆಚರಿಸಲಾಗುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೆಬ್ಬಾಳ್ಕರ್‌ಗೆ ರವಿ ಅಶ್ಲೀಲ ಪದ ಬಳಸಿದ್ದು ನಿಜ: ಯತೀಂದ್ರ ಹೇಳಿಕೆ
MLA ಮುನಿರತ್ನ ವಿರುದ್ಧ ಮತ್ತೊಂದು ಜಾತಿ ನಿಂದನೆ ಪ್ರಕರಣ
BJP; ವಿಜಯೇಂದ್ರ ವಿರುದ್ಧ ಧ್ವನಿ ಎತ್ತಿದ್ದು ಬಿ.ಪಿ. ಹರೀಶ್ ಮಾತ್ರ!
High Court: ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸಲು ವಿಫಲ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
Kalaburagi: ಬಂಧನಕ್ಕೆ ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ, ಆರೋಪಿಗೆ ಗುಂಡೇಟು