ಸೊರಬದಲ್ಲಿ ಶೇ.74.94 ಮತದಾನ
Team Udayavani, Jun 2, 2019, 3:02 AM IST
ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣ ಪಂಚಾಯಿತಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಪುರಸಭೆಗೆ ಶನಿವಾರ ಮತದಾನ ನಡೆದಿದ್ದು, ನೆಲಮಂಗಲ ಪುರಸಭೆಯಲ್ಲಿ ಶೇ.72.89 ಮತ್ತು ಸೊರಬ ಪಟ್ಟಣ ಪಂಚಾಯಿತಿಯಲ್ಲಿ ಶೇ.74.94ರಷ್ಟು ಮತದಾನ ಆಗಿದೆ.
ಈ ಎರಡೂ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಹೈಕೋರ್ಟ್‌ನಲ್ಲಿ ತಕರಾರು ಅರ್ಜಿ ದಾಖಲಾಗಿದ್ದರಿಂದ ಮೇ 13ರಂದು ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಾಗಿತ್ತು. ಅದರಂತೆ ಜೂ.1ರಂದು ಬೆಳಗ್ಗೆ 7ರಿಂದ ಸಂಜೆ 5ರ ತನಕ ಮತದಾನ ನಡೆಯಿತು.
ನೆಲಮಂಗಲ ಪುರಸಭೆಯ ಒಟ್ಟು 23 ವಾರ್ಡ್‌ಗಳ ಪೈಕಿ 1 ವಾರ್ಡ್‌ನಲ್ಲಿ ಅವಿರೋಧ ಆಯ್ಕೆ ನಡೆದಿದ್ದರಿಂದ 22 ವಾರ್ಡ್‌ಗಳಲ್ಲಿ ಮತದಾನ ನಡೆಯಿತು. 97 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ಅದೇ ರೀತಿ, ಸೊರಬ ಪಟ್ಟಣ ಪಂಚಾಯಿತಿಯ 12 ವಾರ್ಡ್‌ಗಳಲ್ಲಿ ಮತದಾನ ನಡೆದಿದ್ದು, 35 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ.
ಜೂ.3ಕ್ಕೆ ಮತ ಎಣಿಕೆ: ನೆಲಮಂಗಲ ಪುರಸಭೆ ಹಾಗೂ ಸೊರಬ ಪಟ್ಟಣ ಪಂಚಾಯಿತಿಯ ಮತ ಎಣಿಕೆ ಜೂ.3ಕ್ಕೆ ನಡೆಯಲಿದೆ. ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ಮತ ಎಣಿಕೆಯನ್ನು ಏಕಕಾಲಕ್ಕೆ ನಡೆಸಬೇಕು ಎಂಬ ಹಿನ್ನೆಲೆಯಲ್ಲಿ ಮೇ 29ರಂದು ಮತದಾನ ನಡೆದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪುರಸಭೆ, ಶಿವಮೊಗ್ಗ ಜಿಲ್ಲೆಯ ಸಾಗರ ನಗರಸಭೆ, ಶಿಕಾರಿಪುರ ಪುರಸಭೆ, ಶಿರಾಳಕೊಪ್ಪ, ಹೊಸನಗರ ಪಟ್ಟಣ ಪಂಚಾಯಿತಿಗಳ ಮತ ಎಣಿಕೆಯನ್ನೂ ಇದೇ ವೇಳೆ ನಡೆಸಲಾಗುವುದು ಎಂದು ಚುನಾವಣಾ ಆಯೋಗ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.