ದೇವಸ್ಥಾನ, ಮಸೀದಿಗಳಲ್ಲಿ ಧ್ವನಿ ವರ್ಧಕ ಹಾಕುವುದರಿಂದ ಯಾರಿಗೆ ತೊಂದರೆ ಆಗಿದೆ?: ಸಿದ್ದರಾಮಯ್ಯ
Team Udayavani, Apr 5, 2022, 10:24 AM IST
ಬೆಂಗಳೂರು: ದೇವಸ್ಥಾನ, ಮಸೀದಿ, ಚರ್ಚ್ ಹೀಗೆ ಎಲ್ಲಾ ಕಡೆ ಧ್ವನಿ ವರ್ಧಕಗಳನ್ನು ಹಾಕುತ್ತಾರೆ, ಇದರಿಂದ ಯಾರಿಗೆ ತೊಂದರೆ ಆಗಿದೆ? ಎಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಚುನಾವಣಾ ವರ್ಷ ಎಂದು ಈ ರೀತಿ ಬೇಕಂತಲೇ ಕ್ಯಾತೆ ತೆಗೆಯುತ್ತಿದ್ದಾರೆ. ಇದನ್ನು ನಾನು ಖಂಡಿಸುತ್ತೇನೆ. ಇವೆಲ್ಲ ಸಮಾಜದ ಶಾಂತಿ, ಸಾಮರಸ್ಯ ಹಾಳುಮಾಡುವ ಪ್ರಯತ್ನಗಳು. ಇಂತಹ ಘಟನೆಗಳಿಂದ ರಾಜ್ಯದ ಅಭಿವೃದ್ಧಿ ಸಾಧ್ಯವಾಗಲ್ಲ. ರಾಜ್ಯಕ್ಕೆ ಯಾವ ಬಂಡವಾಳ ಹೂಡಿಕೆದಾರರು ಬರಲ್ಲ, ಉದ್ಯೋಗ ಸೃಷ್ಟಿಯಾಗಲ್ಲ, ನಿರುದ್ಯೋಗ ಸಮಸ್ಯೆ ಹೋಗಲ್ಲ, ರಾಜ್ಯದ ಜಿಡಿಪಿ ಬೆಳವಣಿಗೆಯಾಗಲ್ಲ ಎಂದು ಹೇಳಿದರು.
ಈ ಎಲ್ಲಾ ಬೆಳವಣಿಗೆಗಳು ಸರ್ಕಾರದ ಕುಮ್ಮಕ್ಕಿನಿಂದಲೇ ನಡೆಯುತ್ತಿವೆ. ಮುಖ್ಯಮಂತ್ರಿಗಳು ಮೌನವಾಗಿರುವುದಲ್ಲ, ಎಲ್ಲದಕ್ಕೂ ಕುಮ್ಮಕ್ಕು ನೀಡುತ್ತಿದ್ದಾರೆ. ಆರ್.ಎಸ್.ಎಸ್ ಮತ್ತು ಭಜರಂಗದಳ ಸರ್ಕಾರಕ್ಕೆ ಗೊತ್ತಿಲ್ಲದೆ ಇಷ್ಟೆಲ್ಲಾ ಮಾಡುತ್ತಾ? ಇದನ್ನು ಸರ್ಕಾರ ಹತ್ತಿಕ್ಕಬೇಕು, ಸಮಾಜದ ಶಾಂತಿ ಕದಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದರು.
ಸಮಾಜದ ಕೋಮು ಸಾಮರಸ್ಯ ಹಾಳುಮಾಡುವುದನ್ನು ನಿಲ್ಲಿಸಬೇಕು, ಇಲ್ಲದಿದ್ದರೆ ಇದು ನಿಮಗೆ ಮುಂದೆ ತಿರುಗುಬಾಣವಾಗಲಿದೆ ಎಂದು ಮುಖ್ಯಮಂತ್ರಿಗಳಿಗೆ ತಿಳಿಸಲು ಬಯಸುತ್ತೇನೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.