Sowjanya Case: ನ್ಯಾಯಾಂಗ ನಿಂದನೆ ವಿರುದ್ಧ ಕ್ರಮಕ್ಕೆ ಹೈಕೋರ್ಟ್‌ಗೆ ಅರ್ಜಿ
Team Udayavani, Aug 28, 2023, 11:34 PM IST
ಬೆಂಗಳೂರು: ಸೌಜನ್ಯಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಯಾವುದೇ ರೀತಿಯ ತನಿಖೆಯನ್ನಾದರೂ ನಡೆಸಲು ರಾಜ್ಯ ಸರಕಾರಕ್ಕೆ ನಿರ್ದೇಶಿಸಬೇಕು. ಜತೆಗೆ ನ್ಯಾಯಾಂಗ ಮತ್ತು ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ದೇವಾಲಯದ ವಿರುದ್ಧ ನಿಂದನಾತ್ಮಕ ಹೇಳಿಕೆ ನೀಡುತ್ತಿರುವ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ನಿರ್ದೇಶಿಸಬೇಕು ಎಂದು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.
ಈ ಬಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಶೀನಪ್ಪ ಮತ್ತು ನಂದೀಶ್ ಕುಮಾರ್ ಜೈನ್ ಸಲ್ಲಿಸಿರುವ ಅರ್ಜಿಯಲ್ಲಿ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಮಹೇಶ್ ಶೆಟ್ಟಿ ತಿಮರೋಡಿ ಸಹಿತ 9 ಮಂದಿಯನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.
ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಅವರ ಬೆಂಬಲಿಗರು ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿ ದೇವಾಲಯ ಮತ್ತು ದೇವಸ್ಥಾನಕ್ಕೆ ಸೇರಿದ ಸಂಸ್ಥೆಗಳು, ಟ್ರಸ್ಟ್ ವಿರುದ್ಧ ಸಾರ್ವಜನಿಕರಲ್ಲಿ ತಪ್ಪು ಅಭಿಪ್ರಾಯ ಮೂಡಿಸುತ್ತಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.