ಸಭಾಪತಿ ಸ್ಥಾನ ಬಿಜೆಪಿಗೋ, ಜೆಡಿಎಸ್‌ಗೋ?
ಎರಡೂ ಪಕ್ಷಗಳ ಸದಸ್ಯರಲ್ಲಿ ಹೆಚ್ಚಿದ ಕುತೂಹಲ ಹೊರಟ್ಟಿ ಆಯ್ಕೆ ಸಾಧ್ಯತೆ
Team Udayavani, Jan 25, 2021, 6:40 AM IST
ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ ಘೋಷಣೆ ಆಗಿರುವು ದರಿಂದ ಆ ಹುದ್ದೆ ಯಾರಿಗೆ ಒಲಿಯುತ್ತದೆ ಎಂಬ ಕುತೂಹಲ ಜೆಡಿಎಸ್ ಹಾಗೂ ಬಿಜೆಪಿಯಲ್ಲಿದೆ.
ಉಪ ಸಭಾಪತಿ ಸ್ಥಾನಕ್ಕೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸು ತ್ತದೆಯೇ ಎನ್ನುವುದು ಇನ್ನೂ ಖಚಿತ ವಾಗಿಲ್ಲ. ಜ. 27ರಂದು ಈ ಸಂಬಂಧ ಬಿಜೆಪಿ ನಾಯಕರು ಸಭೆ ನಡೆಸಲು ನಿರ್ಧರಿಸಿದ್ದಾರೆ.
ಬಿಜೆಪಿಯಲ್ಲಿ ಏನಾಗುತ್ತಿದೆ? :
ಸಭಾಪತಿ ಸ್ಥಾನಕ್ಕೆ ಜೆಡಿಎಸ್‌ನ ಬಸವರಾಜ್ ಹೊರಟ್ಟಿ ಅವರನ್ನು ಮಾಡಲು ಬಿಜೆಪಿ ಬೆಂಬಲ ಸೂಚಿಸುವಂತೆ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ದೇವೇಗೌಡರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ನಡ್ಡಾ ಅವರು ಹೊರಟ್ಟಿ ಬಗ್ಗೆ ಮಾಹಿತಿ ಪಡೆದುಕೊಂಡು, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರ ಅಭಿಪ್ರಾಯ ಕೇಳಿದ್ದಾರೆ ಎನ್ನಲಾಗಿದೆ. ನಳಿನ್ ಸಕಾರಾತ್ಮಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ. ಇದರ ಬೆನ್ನಲ್ಲೇ ಬಿಜೆಪಿಯ ಪರಿಷತ್ ಸದಸ್ಯರು ಜ. 27ರಂದು ಸಂಜೆ ಸಿಎಂ ಹಾಗೂ ನಳಿನ್ ಜತೆ ಸಭೆ ನಡೆಸಲು ತೀರ್ಮಾನಿಸಿದ್ದು, ಸಭೆಯಲ್ಲಿ ಸಭಾಪತಿ ಸ್ಥಾನ ಉಳಿಸಿ ಕೊಳ್ಳಬೇಕೆಂಬ ಬೇಡಿಕೆಯನ್ನು ಮುಂದಿ ಡಲು ಬಿಜೆಪಿಗೆ ಸದಸ್ಯರು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.
ಜೆಡಿಎಸ್ ಬೆಳವಣಿಗೆ :
ಮಾಜಿ ಮುಖ್ಯ ಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಗೃಹ ಮತ್ತು ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿ, ಹೊರಟ್ಟಿ ಅವರನ್ನು ಸಭಾಪತಿ ಮಾಡಲು ಸಹಕಾರ ನೀಡುವಂತೆ ಬಿಜೆಪಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿಯನ್ನು ಭೇಟಿ ಮಾಡುವಂತೆ ಬೊಮ್ಮಾಯಿ ಸಲಹೆ ನೀಡಿದ್ದು, ಅದರಂತೆ ಜ. 27ರೊಳಗೆ ಕುಮಾರಸ್ವಾಮಿ ಅವರು ಯಡಿಯೂರಪ್ಪರನ್ನು ಭೇಟಿ ಮಾಡುವ ಸಾಧ್ಯತೆ ಇದೆ.
ಜೆಡಿಎಸ್‌ಗೆ ದೊರೆತರೆ ಮೊದಲ ಸಭಾಪತಿ :
ಜನತಾ ಪರಿವಾರ ಇಬ್ಭಾಗವಾದ ಬಳಿಕ ವಿಧಾನ ಪರಿಷತ್ತಿನಲ್ಲಿ ಜೆಡಿಎಸ್‌ಗೆ ಇದುವರೆಗೂ ಸಭಾಪತಿ ಸ್ಥಾನ ದೊರೆತಿಲ್ಲ. ಈಗ ಸಿಕ್ಕಿದರೆ ಅದು ಮೊದಲ ಅವಕಾಶವಾಗಲಿದೆ.
ಎರಡೂ ಪಕ್ಷದ ಹಿರಿಯ ನಾಯಕರು ಚರ್ಚಿಸಿ ಯಾವ ಪಕ್ಷಕ್ಕೆ ಯಾವ ಹುದ್ದೆ ನಿಡಬೇಕು ಎನ್ನುವುದನ್ನು ತೀರ್ಮಾನಿಸುತ್ತಾರೆ. ಪಕ್ಷದ ನಾಯ ಕರು ತೆಗೆದುಕೊಳ್ಳುವ ತೀರ್ಮಾನಕ್ಕೆ ನಾವು ಬದ್ಧರಾಗಿರುತ್ತೇವೆ. -ಮಹಾಂತೇಶ ಕವಟಗಿ ಮಠ, ವಿಧಾನ ಪರಿಷತ್ತಿನಲ್ಲಿ ಸರಕಾರದ ಮುಖ್ಯ ಸಚೇತಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.