ಸ್ಪೀಕರ್‌ ಆದೇಶದಿಂದ ರಾಜಕೀಯ ಕುತೂಹಲ ಜೀವಂತ

ಶಾಸಕರ ರಾಜೀನಾಮೆ ಪ್ರಕರಣಕ್ಕೆ ಹೊಸ ತಿರುವು ನೀಡಿದ ವಿಧಾನ ಸಭಾಧ್ಯಕ್ಷ ರಮೇಶ್‌ಕುಮಾರ್‌

Team Udayavani, Jul 26, 2019, 5:04 AM IST

01-RameshKumar-Press-Meet-(1)

ಬೆಂಗಳೂರು: ಪಕ್ಷವಿರೋಧಿ ಚಟುವಟಿಕೆ ನಡೆಸಿ ರಾಜೀನಾಮೆ ಸಲ್ಲಿಸಿದ್ದ ಕಾಂಗ್ರೆಸ್‌ನ ಮೂವರು ಶಾಸಕರನ್ನು ಸ್ಪೀಕರ್‌ ರಮೇಶ್‌ಕುಮಾರ್‌ ಪಕ್ಷಾಂತರ ನಿಷೇಧಕಾಯ್ದೆ ಹಿನ್ನೆಲೆಯಲ್ಲಿ ಶಾಸಕ ಸ್ಥಾನದಿಂದ ಅನರ್ಹಗೊಳಿಸಿ ಆದೇಶ ಮಾಡಿದ್ದಾರೆ. ಈ ಮೂಲಕ ಶಾಸಕರ ರಾಜೀನಾಮೆ ಪ್ರಕರಣಕ್ಕೆ ಹೊಸ ತಿರುವು ನೀಡಿದ್ದಾರೆ.

ಆದರೆ, ಇನ್ನುಳಿದ ಶಾಸಕರ ರಾಜೀನಾಮೆ ಪ್ರಕರಣಗಳ ಕುರಿತು ತೀರ್ಮಾನ ಮಾಡಲು ಸ್ವಲ್ಪ ಸಮಯಾವಕಾಶ ಬೇಕು ಎನ್ನುವ ಮೂಲಕ ರಾಜ್ಯ ರಾಜಕೀಯದಲ್ಲಿ ಇನ್ನಷ್ಟು ಕುತೂಹಲ ಜೀವಂತವಾಗಿರುವಂತೆ ನೋಡಿಕೊಂಡಿದ್ದಾರೆ.

ಗುರುವಾರ ಸಂಜೆ ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆರ್‌. ಶಂಕರ್‌ ಅವರ ಅನರ್ಹತೆಗೆ ಕಾರಣವಾದ ಅಂಶಗಳು ಹಾಗೂ ರಮೇಶ್‌ ಜಾರಕಿಹೊಳಿ ಮತ್ತು ಮಹೇಶ್‌ ಕುಮಟಳ್ಳಿ ಅವರನ್ನು ಅನರ್ಹಗೊಳಿಸಲು ಕಾರಣಗಳನ್ನು ಪ್ರತ್ಯೇಕವಾಗಿಯೇ ವಿವರಿಸಿದರು.

ಆರ್‌. ಶಂಕರ್‌ ಪ್ರಕರಣದ ಬಗ್ಗೆ ಹೇಳಿದ್ದು: 15ನೇ ವಿಧಾನಸಭೆಗೆ ಆರ್‌. ಶಂಕರ್‌ ಕೆಪಿಜೆಪಿಯಿಂದ ಅಟೊ ರಿಕ್ಷಾ ಚಿಹ್ನೆಯಡಿ ರಾಣೆಬೆನ್ನೂರು ಕ್ಷೇತ್ರದಿಂದ ಗೆದ್ದು ಬಂದಿದ್ದಾರೆ. ಜೂನ್‌ 14ರಂದು ಆರ್‌. ಶಂಕರ್‌ ಅವರು ಮತ್ತು ಸಿದ್ದರಾಮಯ್ಯ ಅವರು ನನಗೆ ಒಂದು ಪತ್ರ ಬರೆದು ಶಂಕರ್‌ ಒಬ್ಬರೇ ಕೆಪಿಜೆಪಿಯಿಂದ ಆಯ್ಕೆಯಾ ಗಿರುವುದರಿಂದ ಅವರನ್ನು ಕಾಂಗ್ರೆಸ್‌ ಪಕ್ಷದಲ್ಲಿ ವಿಲೀನಗೊಳಿಸಲಾಗಿದೆ ಎಂದು ಪತ್ರ ಬರೆದಿದ್ದರು. ಅವರ ಪತ್ರಕ್ಕೆ ಪೂರಕವಾಗಿ ಕೆಲವು ದಾಖಲೆ ಬೇಕಿತ್ತು. ಜೂನ್‌ 25ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರು ಅದನ್ನು ಒದಗಿಸಿದ್ದಾರೆ. ಅದರ ಆಧಾರದಲ್ಲಿ ಶಂಕರ ಅವರಿಗೆ ಕಾಂಗ್ರೆಸ್‌ ಶಾಸಕರ ಸಾಲಿನಲ್ಲಿ ಕೂರಿಸಲು ವ್ಯವಸ್ಥೆ ಮಾಡಲಾಗಿತ್ತು. ನಂತರ ಅವರು ತಮಗೆ ಪ್ರತ್ಯೇಕ ಸ್ಥಾನ ನೀಡಬೇಕೆಂದು ಪತ್ರ ಬರೆದಿದ್ದರು. ಅದನ್ನು ಮಾನ್ಯ ಮಾಡಿಲ್ಲ ಎಂದು ಹೇಳಿದರು.

ಶಂಕರ್‌ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ, ತಾವು ಬಿಜೆಪಿ ಬೆಂಬಲಿಸುತ್ತಿದ್ದೇನೆ ಎಂದು ರಾಜ್ಯಪಾಲರಿಗೆ ಪತ್ರ ನೀಡಿದ್ದಾರೆ. ಅದೇ ಪತ್ರವನ್ನು ರಾಜ್ಯಪಾಲರು ನನಗೆ ಕಳುಹಿಸಿದ್ದಾರೆ. ಅದರ ಆಧಾರದಲ್ಲಿ ಸಿದ್ದರಾಮಯ್ಯ ನಮಗೆ ಪತ್ರ ಬರೆದು ಆರ್‌.ಶಂಕರ್‌ ಅವರನ್ನು ಪಕ್ಷಾಂತರ ನಿಷೇಧ ಕಾಯ್ದೆ ಅಡಿಯಲ್ಲಿ ಅನರ್ಹಗೊಳಿಸುವಂತೆ ಪತ್ರ ಬರೆದಿದ್ದರು. ಸಿದ್ದರಾಮಯ್ಯ ಪತ್ರದ ಆಧಾರದ ಮೇಲೆ ವಿಚಾರಣೆಗೆ ಹಾಜರಾಗುವಂತೆ ಜುಲೈ 17ಕ್ಕೆ ಶಂಕರ್‌ಗೆ ನೋಟಿಸ್‌ ನೀಡಿ ಜುಲೈ 23ರೊಳಗೆ ಹಾಜರಾಗಲು ಸೂಚಿಸಿದ್ದೆವು. ಆದರೆ, ಅವರು ಮತ್ತೂಂದು ಪತ್ರ ಬರೆದು ತಮಗೆ ಒಂದು ತಿಂಗಳ ಸಮಯ ನೀಡುವಂತೆ ಪತ್ರ ಬರೆದಿದ್ದಾರೆ.

ಪಕ್ಷಾಂತರ ನಿಷೇಧ ಕಾಯ್ದೆಯನ್ನು ಪಕ್ಷಾಂತರ ತಡೆಯಲು ಸಂವಿಧಾನದ 10ನೇ ಪರಿಚ್ಛೇದದಲ್ಲಿ ಸೇರ್ಪಡೆ ಮಾಡಿದ್ದಾರೆ. ಈ ಪ್ರಕರಣದಲ್ಲಿ ನಾನು ಬಯಸಿದಷ್ಟು ವೇಗವಾಗಿ ಮಾಡಲು ಆಗಲಿಲ್ಲ. 18ರಂದು ವಿಶ್ವಾಸ ಮತ ಯಾಚನೆ ಮಾಡಿದರು. ನಾಲ್ಕು ದಿನ ಆಗುವಷ್ಟರಲ್ಲಿ ಏನೋ ಆಗಿದೆ ಎಂದು ಬಿಂಬಿಸಲಾಯಿತು.

ಆದರೆ, ಈ ರೀತಿಯ ಪ್ರಕರಣ ಮುಂದುವರಿಯಬಾರದು ಎನ್ನುವ ಕಾರಣಕ್ಕೆ 2018ರಲ್ಲಿ 15 ನೇ ವಿಧಾನಸಭೆಗೆ ಸದಸ್ಯರಾಗಿ ಆಯ್ಕೆಯಾಗಿರುವ ಆರ್‌. ಶಂಕರ್‌ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿರುವುದಾಗಿ ಸ್ಪೀಕರ್‌ ಹೇಳಿದರು. 15 ನೇ ವಿಧಾನಸಭೆ ಅವಧಿ ಮುಗಿಯುವವರೆಗೂ ಅವರು ಈ ಮನೆಗೆ ಪ್ರವೇಶ ಪಡೆಯಲು ಅವಕಾಶವಿಲ್ಲ ಹಾಗೂ ಉಪ ಚುನಾವಣೆಯಲ್ಲಿಯೂ ಸ್ಪರ್ಧೆಗೆ ಅವಕಾಶವಿಲ್ಲ ಎಂದು ರಮೇಶ್‌ ಕುಮಾರ್‌ ಸ್ಪಷ್ಟಪಡಿಸಿದರು.

ರಮೇಶ್‌ ಜಾರಕಿಹೊಳಿ, ಕುಮಟಳ್ಳಿ ಅನರ್ಹ: ಇದೇ ರೀತಿ, ಇಬ್ಬರು ಕಾಂಗ್ರೆಸ್‌ ಶಾಸಕರಾದ ಗೋಕಾಕ್‌ ಕ್ಷೇತ್ರದ ರಮೇಶ್‌ ಜಾರಕಿಹೊಳಿ, ಅಥಣಿ ಕ್ಷೇತ್ರದ ಮಹೇಶ್‌ ಕುಮಟಳ್ಳಿ ಅವರನ್ನೂ ಪಕ್ಷಾಂತರ ನಿಷೇಧ ಕಾಯ್ದೆ ಅಡಿಯಲ್ಲಿ ಅನರ್ಹಗೊಳಿಸಲಾಗಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯನವರು ಫೆಬ್ರವರಿಯಲ್ಲಿ ನಾಲ್ವರು ಶಾಸಕರ ವಿರುದ್ದ ಪಕ್ಷಾಂತರ ನಿಷೇಧ ಕಾಯ್ದೆ ಅಡಿಯಲ್ಲಿ ಅನರ್ಹಗೊಳಿಸುವಂತೆ ದೂರು ಸಲ್ಲಿಸಿದ್ದರು. ನಂತರ ಉಮೇಶ್‌ ಜಾಧವ್‌ ಹಾಗೂ ಆರ್‌. ನಾಗೇಂದ್ರ ಅವರ ವಿರುದ್ಧದ ಪ್ರಕರಣವನ್ನು ಹಿಂಪಡೆದಿದ್ದರು. ಹೀಗಾಗಿ, ರಮೇಶ್‌ ಜಾರಕಿಹೊಳಿ ಮತ್ತು ಮಹೇಶ್‌ ಕುಮಟಳ್ಳಿ ವಿರುದ್ಧ ಮಾತ್ರ ಕ್ರಮ ಕೈಗೊಳ್ಳುತ್ತಿರುವುದಾಗಿ ತಿಳಿಸಿದರು.

ಪಕ್ಷಾಂತರ ನಿಷೇಧ ಕಾಯ್ದೆ ಅಡಿಯಲ್ಲಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ದೂರು ನೀಡಿದ ನಂತರ ಫೆಬ್ರವರಿ 20ರಂದು ರಮೇಶ್‌ ಜಾರಕಿಹೊಳಿ ಹಾಗೂ ಮಹೇಶ್‌ ಕುಮಟಳ್ಳಿ ಉತ್ತರ ಕಳುಹಿಸಿದ್ದರು. ಆದರೆ, ಲೋಕಸಭೆ ಚುನಾವಣೆ ಬಂದಿದ್ದರಿಂದ ವಿಚಾರಣೆಯನ್ನು ಮುಂದೂಡಲಾಗಿತ್ತು. ಆದರೆ, ಜುಲೈ 6ರಂದು ಅವರು ರಾಜೀನಾಮೆ ಸಲ್ಲಿಸಿದ್ದರು. ಆದರೆ, ಅವು ಕ್ರಮಬದ್ಧವಾಗಿಲ್ಲ ಎನ್ನುವ ಕಾರಣಕ್ಕೆ ಜುಲೈ 11ಕ್ಕೆ ಮತ್ತೂಂದು ಬಾರಿ ಕ್ರಮಬದ್ದವಾಗಿ ರಾಜೀನಾಮೆ ಸಲ್ಲಿಸಲು ಸೂಚನೆ ನೀಡಲಾಗಿತ್ತು. ಅದರಂತೆ ಅವರು ರಾಜೀನಾಮೆ ಸಲ್ಲಿಸಲು ಆಗಮಿಸಿದ್ದ ರೀತಿ, ವಿಶೇಷ ವಿಮಾನದಲ್ಲಿ ಆಗಮಿಸಿದ್ದು, ಅವರಿಗೆ ವಿಶೇಷ ಪೊಲಿಸ್‌ ಭದ್ರತೆ ಒದಗಿಸಿರುವುದು ಎಲ್ಲವನ್ನೂ ನಾನು ಗಮನಿಸಿದ್ದೇನೆ. ಅವರು ನನ್ನ ಮುಂದೆ ನೀಡಿರುವ ಹೇಳಿಕೆಗಳು, ಹೊರಗಡೆ ಅವರು ನಡೆದುಕೊಂಡ ರೀತಿ ಎಲ್ಲವನ್ನು ಗಮನಿಸಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿರುವುದಾಗಿ ಸ್ಪೀಕರ್‌ ರಮೇಶ್‌ಕುಮಾರ್‌ ಹೇಳಿದರು.

ಈ ಇಬ್ಬರು ಶಾಸಕರನ್ನು ಅನರ್ಹಗೊಳಿಸುವ ಪ್ರಕರಣದಲ್ಲಿ ಜೆಡಿಯು ನಾಯಕರಾಗಿದ್ದ ಶರದ್‌ ಯಾದವ್‌ ಪ್ರಕರಣದಲ್ಲಿ ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ತೆಗೆದುಕೊಂಡ ತೀರ್ಮಾನ, ತಮಿಳುನಾಡು ಸ್ಪೀಕರ್‌ ಧನಪಾಲ್ ಅವರು 18 ಶಾಸಕರನ್ನು ಅನರ್ಹಗೊಳಿಸಲು ತೆಗೆದುಕೊಂಡ ತೀರ್ಮಾನವನ್ನು ಪರಿಗಣಿಸಲಾಗಿದೆ. ಅಲ್ಲದೇ ರವಿ ನಾಯ್ಕ ವರ್ಸಸ್‌ ಕೇಂದ್ರ ಸರ್ಕಾರದ ಪ್ರಕರಣಗಳನ್ನು ಪರಿಗಣಿಸಿ ತೀರ್ಪು ನೀಡಲಾಗಿದೆ ಎಂದು ಸ್ಪೀಕರ್‌ ತಮ್ಮ ಆದೇಶವನ್ನು ಸಮರ್ಥಿಸಿಕೊಂಡರು.

ಇತಿಹಾಸ ನಿರ್ಮಿಸುವುದಾಗಿ ಹೇಳಿದ್ದರು
ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿರುವ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಶಾಸಕರ ಅನರ್ಹತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐತಿ ಹಾಸಿಕ ತೀರ್ಪು ನೀಡುವುದಾಗಿ ಹೇಳಿದ್ದ ಸ್ಪೀಕರ್‌ ರಮೇಶ್‌ ಕುಮಾರ್‌, ಈಗ ಇತಿಹಾಸ ಸೃಷ್ಟಿಸುತ್ತಿದ್ದಾರೆಯೇ?

ಶಾಸಕರು ರಾಜೀನಾಮೆ ಸಲ್ಲಿಸಿದ ಮರುದಿನವೇ ಸುಪ್ರೀಂ ಕೋರ್ಟ್‌ಗೆ ತೆರಳಿ ತಮ್ಮ ರಾಜೀನಾಮೆಯನ್ನು ಬೇಗ ಅಂಗೀಕರಿಸುವಂತೆ ಸ್ಪೀಕರ್‌ಗೆ ಸೂಚಿಸುವಂತೆ ಶಾಸಕರು ಆಗ್ರಹಿಸಿದ್ದರು. ಆದರೂ ಸುಪ್ರೀಂ ಕೋರ್ಟ್‌ ಸ್ಪೀಕರ್‌ ಅಧಿಕಾರದಲ್ಲಿ ಹಸ್ತಕ್ಷೇಪ ಮಾಡದೇ ಆದಷ್ಟು ಬೇಗ ತೀರ್ಮಾನ ಮಾಡುವ ವಿಶ್ವಾಸ ವ್ಯಕ್ತಪಡಿಸಿತ್ತು.

ಶಾಸಕರ ರಾಜೀನಾಮೆ ವಿಷಯದಲ್ಲಿ ಸ್ಪೀಕರ್‌ ರಮೇಶ್‌ ಕುಮಾರ್‌, ದೇಶದ ಎಲ್ಲ ರಾಜ್ಯಗಳಲ್ಲಿ ನಡೆದಿರುವ ಪಕ್ಷಾಂತರ ಪ್ರಕರಣಗಳು, ಆ ಪ್ರಕರಣಗಳ ಮೇಲೆ ಸ್ಪೀಕರ್‌ಗಳು ತೆಗೆದುಕೊಂಡ ತೀರ್ಮಾನ, ಅದರ ಮೇಲೆ ಕೋರ್ಟ್‌ಗಳ ಆದೇಶಗಳ ಬಗ್ಗೆ ಸುದೀರ್ಘ‌ ಅಧ್ಯಯನ ಮಾಡಿಯೇ ತೀರ್ಪು ಪ್ರಕಟಿಸಿದ್ದಾರೆ.

ಈ ಪ್ರಕರಣದಲ್ಲಿ ಪ್ರಮುಖವಾಗಿ ಕಾನೂನಿನ ವ್ಯಾಪ್ತಿ ಮೀರದೇ ನೈತಿಕ ಅಂಶಗಳು ಹಾಗೂ ಸಮಾಜದ ಭಾವನೆಗಳನ್ನೂ ಗಮನದಲ್ಲಿಟ್ಟುಕೊಂಡು ತೀರ್ಪು ನೀಡಿದ್ದಾರೆ. ಶಾಸಕರು ಸ್ವ-ಇಚ್ಛೆಯಿಂದ ರಾಜೀನಾಮೆ ಸಲ್ಲಿಸಿದ್ದಾರೆಯೋ, ಅವರ ರಾಜೀನಾಮೆ ನೈಜತೆಯಿಂದ ಕೂಡಿದೆಯೋ ಎಂಬ ಬಗ್ಗೆ ಸ್ಪೀಕರ್‌ಗೆ ಸಾರ್ವಜನಿಕರ ಅಭಿಪ್ರಾಯ ಪಡೆಯಲು ಸಂವಿಧಾನದ 35ನೇ ತಿದ್ದುಪಡಿಯಲ್ಲಿ ಅವಕಾಶ ಕಲ್ಪಿಸಲಾಗಿದೆ. ಅದೇ ಕಾರಣಕ್ಕೆ ಉಮೇಶ್‌ ಜಾಧವ್‌ ರಾಜೀನಾಮೆ ಪ್ರಕರಣದಲ್ಲಿ ಕ್ಷೇತ್ರದ ಜನರು ನೀಡಿದ್ದ ದೂರಿನ ಅನ್ವಯ ಅವರ ಅಭಿಪ್ರಾಯಗಳನ್ನು ಕೇಳಲಾಗಿತ್ತು. ಅಲ್ಲದೇ ಅವರ ಭಾವನೆಗಳನ್ನು ಗಮನಿಸಲಾಗಿತ್ತು. ಅವರ ಪ್ರಕರಣದಲ್ಲಿ ಸುದೀರ್ಘ‌ ಚರ್ಚೆ ನಡೆಸಿಯೇ ಅವರ ರಾಜೀನಾಮೆಯನ್ನು ಅಂಗೀಕರಿಸಲಾಗಿತ್ತು. ಆದರೆ, ಅವರು ರಾಜೀನಾಮೆ ಸಲ್ಲಿಸುವಾಗ ನೀಡಿರುವ ಹೇಳಿಕೆಗಳಿಗೂ, ಅವರು ನಂತರ ನಡೆದುಕೊಂಡ ರೀತಿಗೂ ತದ್ವಿರುದ್ಧವಾಗಿದೆ. ಅದನ್ನೂ ಗಮನದಲ್ಲಿಟ್ಟುಕೊಂಡು ಈ ಪ್ರಕರಣದಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸ್ಪೀಕರ್‌ ಹೇಳಿದರು.

‘ನಾನು ಒಂದು ಹೊಸ ಆದೇಶ ಮಾಡುತ್ತಿದ್ದೇನೆ. ಈ ಬಗ್ಗೆ ಸಾರ್ವಜನಿಕ ಚರ್ಚೆಯಾಗಲಿ. ಜನಪ್ರತಿನಿಧಿಗಳು ಸಾರ್ವಜನಿಕರಿಗೆ ಬಾಧ್ಯಸ್ಥರಲ್ಲವೇ? ಕ್ಷೇತ್ರಗಳ ಜನರು ಅವರ ವಿರುದ್ಧ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದಾಗ ಅದನ್ನು ಪರಿಗಣಿಸಲು ಅವಕಾಶ ಇರಬೇಕು. ಇದು ಕಾನೂನಿನಲ್ಲಿ ಇಲ್ಲ. ಆದರೆ, ನಾನು ಇದನ್ನು ಸೇರಿಸಿ ತೀರ್ಪು ನೀಡಿದ್ದೇನೆ. ತೀರ್ಪು ಮತ್ತು ನ್ಯಾಯ ಒಂದೆಡೆ ಇರುವುದಿಲ್ಲ. ಸಾಂವಿಧಾನಿಕ ಸ್ಥಾನದಲ್ಲಿ ಇರುವವರಿಗೆ ತೀರ್ಪು ಕೊಡುವ ಅಧಿಕಾರ ಇರುತ್ತದೆಯೇ ಹೊರತು ನ್ಯಾಯ ಕೊಡಲು ಅವಕಾಶ ಇರುವುದಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯ ದೊರಕಿಸುವ ಕೆಲಸವಾಗಬೇಕಿದೆ. ಈ ವಿಷಯದಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ಹಾಗೂ ರಾಷ್ಟ್ರಮಟ್ಟದಲ್ಲಿ ವಿಸ್ತ್ರತ ಚರ್ಚೆಯಾಗಲಿ’ ಎಂದು ರಮೇಶ್‌ ಕುಮಾರ್‌ ಹೇಳಿದರು.

ನಾನು ಸಾಮಾನ್ಯ ಕುಟುಂಬದಿಂದ ಬಂದಿದ್ಧೇನೆ. ಸಾಮಾನ್ಯ ಭಾವನೆಗಳನ್ನು ಗೌರವಿಸಿ ಈ ಪ್ರಕರಣದಲ್ಲಿ ತೀರ್ಪು ನೀಡಿದ್ದೇನೆ. ಇನ್ನು ಉಳಿದ ಶಾಸಕರ ರಾಜೀನಾಮೆ ವಿಷಯದಲ್ಲಿ ಅವರ ವಿರುದ್ಧವೂ ಪಕ್ಷಾಂತರ ನಿಷೇಧ ಕಾಯ್ದೆ ಅಡಿಯಲ್ಲಿ ಅನರ್ಹಗೊಳಿಸುವಂತೆ ದೂರು ಸಲ್ಲಿಕೆಯಾಗಿದೆ. ಆ ಬಗ್ಗೆ ತೀರ್ಮಾನ ಕೈಗೊಳ್ಳಲು ಸ್ವಲ್ಪ ಸಮಯ ಬೇಕಾಗುತ್ತದೆ. ಆದರೆ, ಆದಷ್ಟು ಬೇಗ ಪ್ರಕರಣಗಳನ್ನು ಇತ್ಯರ್ಥ ಮಾಡುವುದಾಗಿ ತಿಳಿಸಿದರು.

ಟಾಪ್ ನ್ಯೂಸ್

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IPL: Players from these countries are fully available for the next three seasons of IPL

IPL: ಇನ್ನು ಮೂರು ಸೀಸನ್‌ ಐಪಿಎಲ್‌ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ

1-a-raga-pg

Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Sagara: ತರಗತಿ ಕೊಠಡಿ ಅವ್ಯವಸ್ಥೆ; ಎಲ್‌ಬಿ ಕಾಲೇಜಿನ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.