ಬಿಜಿಪಿ ಮುಖಂಡರಿಂದ ಮುಸ್ಲಿಂ ವಿರುದ್ಧ ಭಾಷಣ: ಅರ್ಜಿದಾರರ ಹಿತಾಸಕ್ತಿ ಕೇಳಿದ ಹೈಕೋರ್ಟ್
Team Udayavani, Apr 8, 2022, 6:50 AM IST
ಬೆಂಗಳೂರು: ಸಚಿವ ಕೆ.ಎಸ್. ಈಶ್ವರಪ್ಪ ಸೇರಿದಂತೆ ಬಿಜೆಪಿ ಶಾಸಕರು ಮತ್ತು ಸಂಸದರು ಮುಸ್ಲಿಂ ಸಮುದಾಯದ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡುತ್ತಿರುವ ಪ್ರಕರಣದಲ್ಲಿ ನಿಮ್ಮ ಹಿತಾಸಕ್ತಿ ಏನು? ಈ ಪ್ರಕರಣದಿಂದ ನಿಮಗೆ ಯಾವ ರೀತಿ ತೊಂದರೆ ಆಗಿದೆ ಎಂದು ಸ್ಪಷ್ಟನೆ ನೀಡುವಂತೆ ಅರ್ಜಿದಾರರಿಗೆ ಹೈಕೋರ್ಟ್ ಸೂಚನೆ ನೀಡಿದೆ.
ಮುಸ್ಲಿಂ ಸಮದಾಯದ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡುತ್ತಿರುವ ಬಿಜೆಪಿ ಶಾಸಕರು ಮತ್ತು ಸಂಸದರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರಗಿಸಲು ಸರಕಾರಕ್ಕೆ ಆದೇಶಿಸುವಂತೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ನಿವಾಸಿ ಮೊಹಮ್ಮದ್ ಖಲೀಲುಲ್ಲಾ ಸಲ್ಲಿಸಿರುವ ತಕರಾರು ಅರ್ಜಿಯು ನ್ಯಾಯಮೂರ್ತಿ ಎಸ್.ಜಿ. ಪಂಡಿತ್ ಅವರ ಏಕ ಸದಸ್ಯ ನ್ಯಾಯಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಿತ್ತು.
ವಿಚಾರಣೆ ವೇಳೆ ಅರ್ಜಿದಾರ ಪರ ವಕೀಲ ರೆಹ್ಮತುಲ್ಲಾ ಕೋತ್ವಾಲ್, ಹಾಜರಾಗಿ, ಅರ್ಜಿಯಲ್ಲಿ ಉಲ್ಲೇಖೀಸಿರುವ ಅಂಶಗಳನ್ನು ನ್ಯಾಯಪೀಠಕ್ಕೆ ವಿವರಿಸಿದರು.
ಪ್ರಚೋದನಕಾರಿ ಹೇಳಿಕೆ ನೀಡುತ್ತಿರುವ ಬಿಜೆಪಿ ನಾಯಕರಾದ ಕೆ.ಎಸ್. ಈಶ್ವರಪ್ಪ, ಶೋಭಾ ಕರಂದ್ಲಾಜೆ, ಬಸನಗೌಡ ಪಾಟೀಲ್ ಯತ್ನಾಳ್, ಎಂ.ಪಿ. ರೇಣುಕಾಚಾರ್ಯ, ಸಿ.ಟಿ.ರವಿ, ತೇಜಸ್ವಿ ಸೂರ್ಯ, ಪ್ರತಾಪ್ ಸಿಂಹ, ರಿಷಿಕುಮಾರ್ ಸ್ವಾಮೀಜಿ, ಸಾಮಾಜಿಕ ಕಾರ್ಯಕರ್ತ ಚಕ್ರವರ್ತಿ ಸೂಲಿಬೆಲೆ ಮತ್ತು ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ವಿರುದ್ಧ ಕಾನೂನು ಕ್ರಮ ಜರಗಿಸಲು ಸರಕಾರಕ್ಕೆ ಆದೇಶಿಸುವಂತೆ ಅರ್ಜಿದಾರರು ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.