ದೇಗುಲಗಳಲ್ಲಿ ಅಮಿತ ಶಬ್ದ ಸಲ್ಲದು; ಬೆಂಗಳೂರಿನ ದೊಡ್ಡ ಗಣಪತಿ ದೇಗುಲ ಸಮೂಹಕ್ಕೆ ನೋಟಿಸ್
Team Udayavani, Feb 16, 2022, 7:15 AM IST
ಬೆಂಗಳೂರು: ದೇಗುಲಗಳಲ್ಲಿ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಶಬ್ದದಲ್ಲಿ ಘಂಟೆ ಬಾರಿಸುವಂತಿಲ್ಲ ಎಂದು ಬೆಂಗಳೂರಿನ ದೊಡ್ಡ ಗಣಪತಿ ದೇವಸ್ಥಾನದ ಸಮೂಹದಲ್ಲಿರುವ ದೇವಾಲಯಗಳಿಗೆ ನೋಟಿಸ್ ನೀಡಲಾಗಿದೆ.
ಈ ಕುರಿತು ಮಾಹಿತಿ ಲಭ್ಯವಾಗಿದ್ದು, ನ್ಯಾಯಾಲಯದ ಆದೇಶದ ಮೇರೆಗೆ ನೋಟಿಸ್ ನೀಡಲಾಗಿದೆ. ಆದರೆ ನಿಗದಿತ ಶಬ್ದದೊಳಗೆ ಘಂಟೆ ಬಾರಿಸಲು ಹಾಗೂ ಧ್ವನಿವರ್ಧಕ ಬಳಸಲು ಯಾರಿಗೂ ನಿರ್ಬಂಧ ವಿಧಿಸಿಲ್ಲ. ಸಾರ್ವಜನಿಕರಿಗೆ ತೊಂದರೆಯಾಗದಂತೆ ನಿಯಮ ಪಾಲಿಸುವುದು ಎಲ್ಲರ ಕರ್ತವ್ಯವಾಗಿದೆ ಎಂದು ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ
ಪೂಜೆ ಮತ್ತು ಇತರ ಸಂದರ್ಭ ಅಗತ್ಯಕ್ಕಿಂತ ಹೆಚ್ಚಿನ ಶಬ್ದ ಬರಬಾರದು ಎಂದು ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮಾದಾಯ ದತ್ತಿ ಇಲಾಖೆ ಅಧಿಕಾರಿಗಳು ದೇವಾಲಯದ ಆರ್ಚಕರಿಗೆ ಸೂಚನೆ ನೀಡಿರುವ ಪತ್ರ ಸಾಮಾಜಿಕ ಜಾಲತಾಣಗಳಲ್ಲೂ ಚರ್ಚೆಗೆ ಗ್ರಾಸವಾಗಿದೆ.
ದೊಡ್ಡಗಣಪತಿ ಮತ್ತು ಸಮೂಹದ ದೇವಾಲಯಗಳಲ್ಲಿ ನಿಗದಿತ ಡೆಸಿಬಲ್ ಶಬ್ದಕ್ಕಿಂತಲೂ ಅಧಿಕ ಪ್ರಮಾಣದ ಸದ್ದು ಮಾಡುತ್ತಿವೆ ಎಂದು ಬಸವನಗುಡಿ ಠಾಣೆಗೆ ದೂರು ಸಲ್ಲಿಕೆಯಾಗಿತ್ತು.
ಪರಿಸರ ಇಲಾಖೆಯಿಂದ ನೋಟಿಸ್ ನೀಡಿಲ್ಲ. ಅದು ಗೃಹ ಇಲಾಖೆಗೆ ಸಂಬಂಧಿಸಿದ್ದು ಎಂದು ಪರಿಸರ ಸಚಿವ ಆನಂದ್ ಸಿಂಗ್ ಹೇಳಿದ್ದಾರೆ.
ಇದನ್ನೂ ಓದಿ:ಬಜೆಟ್‌ನಲ್ಲಿ ಕಲ್ಯಾಣ ಕರ್ನಾಟಕಕ್ಕೆ ಹೆಚ್ಚಿನ ಅನುದಾನ: ಭೈರತಿ ಬಸವರಾಜ
ಯಾವ ದೇವಸ್ಥಾನಗಳು?
ದೊಡ್ಡ ಗಣಪತಿ ಸಮೂಹ ದೇವಸ್ಥಾನಗಳಡಿ ಬೆಂಗಳೂರಿನ ಬಸವನ ಗುಡಿಯ ದೊಡ್ಡ ಗಣಪತಿ ದೇವಸ್ಥಾನ, ಮಿಂಟೋ ಆಂಜನೇಯ ಸ್ವಾಮಿ ದೇವಸ್ಥಾನ, ಕಾರಂಜಿ ಆಂಜನೇಯಸ್ವಾಮಿ ದೇವಸ್ಥಾನ, ದೊಡ್ಡ ಬಸವಣ್ಣ ದೇವಸ್ಥಾನ, ಮಲ್ಲಿಕಾರ್ಜುನಸ್ವಾಮಿ ದೇವಸ್ಥಾನ ಹಾಗೂ ಇನ್ನಿತರ ದೇವಸ್ಥಾನಗಳು ಬರಲಿವೆ.
ನಿಯಮ ಪಾಲಿಸುವುದು ದೇವಾಲಯ, ಚರ್ಚ್, ಮಸೀದಿಗಳ ಕರ್ತವ್ಯ. ದೊಡ್ಡ ಗಣಪತಿ ದೇವಾಲಯದ ಪ್ರಧಾನ ಅರ್ಚಕರಿಗೆ ನೀಡಿರುವ ನೋಟಿಸ್ ಕುರಿತು ನಾನು ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದೇನೆ.
– ಶಶಿಕಲಾ ಜೊಲ್ಲೆ, ಮುಜರಾಯಿ ಸಚಿವೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ
ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.