ಹುಲಿಕೆರೆ ಶ್ರೀಗಳ ಕಾರನ್ನು ಅಡ್ಡಗಟ್ಟಿ ದರೋಡೆ
Team Udayavani, Feb 28, 2017, 3:50 AM IST
ಕಡೂರು: ತಾಲೂಕಿನ ಹುಲಿಕೆರೆ ದೊಡ್ಡ ಮಠದ ವಿರೂಪಾಕ್ಷಲಿಂಗ ಶಿವಾಚಾರ್ಯ ಸ್ವಾಮೀಜಿ ಪ್ರಯಾಣಿಸುತ್ತಿದ್ದ ಕಾರನ್ನು ನಾಲ್ವರು ಮುಸುಕುಧಾರಿಗಳು ಅಡ್ಡಗಟ್ಟಿ ಖಾರದ ಪುಡಿ ಎರಚಿ ಲಕ್ಷ ರೂ. ನಗದು ಮತ್ತು ದಾಖಲೆಗಳಿದ್ದ ಸೂಟ್ಕೇಸ್ನ್ನು ಅಪಹರಿಸಿರುವ ಘಟನೆ ರವಿವಾರ ತಡರಾತ್ರಿ ನಡೆದಿದೆ.
ಸ್ವಾಮೀಜಿ ರವಿವಾರ ರಾತ್ರಿ ಸುಮಾರು 10.30ರ ವೇಳೆಗೆ ಶಿವಮೊಗ್ಗ ದಿಂದ ಹುಲಿಕೆರೆ ಮಠಕ್ಕೆ ಪ್ರಯಾಣ ಬೆಳೆಸುತ್ತಿದ್ದಾಗ ಕಡೂರು ಸಖರಾಯ ಪಟ್ಟಣದ ಮಧ್ಯೆ ಇರುವ ಉತ್ತರ ಮುಖೀ ಆಂಜನೇಯ ಸ್ವಾಮಿ ದೇಗುಲದ ಬಳಿ 2 ಬೈಕ್ನಲ್ಲಿ ಬಂದ ನಾಲ್ವರು ಮುಸುಕುಧಾರಿಗಳು ಕಾರನ್ನು ಅಡ್ಡಗಟ್ಟಿ ಗಾಜನ್ನು ಕಲ್ಲಿನಿಂದ ಒಡೆದಿ ದ್ದಾರೆ. ಅನಂತರ ಕಾರಿನ ಚಾಲಕ ಹಾಗೂ ಸ್ವಾಮೀಜಿ ಮುಖಕ್ಕೆ ಖಾರದ ಪುಡಿ ಎರಚಿ ದರೋಡೆ ಮಾಡಿದ್ದಾರೆ.
ಖಾರದ ಪುಡಿ ಎರಚುತ್ತಿದ್ದಂತೆ “ನಿಮಗೇನು ಬೇಕೋ ಅದನ್ನು ತೆಗೆದುಕೊಳ್ಳಿ, ನಮಗೇನೂ ತೊಂದರೆ ಮಾಡಬೇಡಿ’ ಎಂದು ಸ್ವಾಮೀಜಿ ಹೇಳಿದ್ದಾರೆ. ಆಗ ದರೋಡೆಕೋರರು ಕಾರಿನಲ್ಲಿದ್ದ ಪೂಜಾ ಸಾಮಗ್ರಿ, ಒಂದು ಲಕ್ಷ ರೂ. ನಗದು ಮತ್ತು ಮಹತ್ವದ ದಾಖಲೆಗಳಿದ್ದ ಸೂಟ್ಕೇಸ್ನ್ನು ತೆಗೆದುಕೊಂಡು ಪರಾರಿಯಾಗಿದ್ದಾರೆ.
ಮಠಕ್ಕೆ ಸೇರಿದ ಜಮೀನಿನ ಬಗ್ಗೆ ಹಲವು ವರ್ಷಗಳಿಂದ ವಿವಾದ ವಿದ್ದು, ಅದಕ್ಕೆ ಸಂಬಂಧಿಸಿದ ದಾಖಲೆಗಳು ಕಾಣೆಯಾಗಿವೆ. ನಮಗೆ ಯಾರ ಮೇಲೂ ಅನುಮಾನವಿಲ್ಲ ಎಂದು ಸ್ವಾಮೀಜಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್ಗೆ ಮಿಶ್ರ ಪ್ರತಿಕ್ರಿಯೆ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
CT Ravi case:ಬೆಳಗಾವಿ ಕೋರ್ಟ್ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ
Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್ಗೆ ಮಿಶ್ರ ಪ್ರತಿಕ್ರಿಯೆ
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
Lalbagh: ಆಸ್ತಿ ತೆರಿಗೆ ಇಳಿಕೆಗೆ ಪಾಲಿಕೆ ಅವಳಿ ಪ್ರಸ್ತಾವನೆ
Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.